ರಾಜ್ಯದ ಮಳೆ ಮುನ್ಸೂಚನೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರ ತನಕ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 131.5ಮಿ.ಮೀನಷ್ಟು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ದೊಡ್ಡ ಗಂಜೂರು ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 8) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 8 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications