ರಾಜ್ಯದ ಮಳೆ ಮನ್ಸೂಚನೆ, ಜಲಾಶಯಗಳ ನೀರಿನ ಮಟ್ಟ
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರ ತನಕ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಮಂಗಳವಾರ ಸಂಜೆ ಭಾರಿ ಮಳೆಯಾಗಿದೆ. ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆ 9 ಗಂಟೆ ತನಕ ಬಂದಿದೆ. ಬುಧವಾರ ಸಹ ನಗರದಲ್ಲಿ ಮಳೆಯಾಗಲಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 205ಮಿ.ಮೀನಷ್ಟು ದಾವಣಗೆರೆ ಜಿಲ್ಲೆಯ ಬೆಳವನೂರು ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 9) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 9 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications