ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸೂಚನೆ; ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಆಗಸ್ಟ್ 05: ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಆಗಸ್ಟ್‌ 8ರವರೆಗೂ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ರಾಜ್ಯದಲ್ಲಿ ಗುರುವಾರದಿಂದ ಮತ್ತೆ ಮಳೆಯಾಗುವ ಸೂಚನೆ ನೀಡಲಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗುವ ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 5 ಹಾಗೂ ಆಗಸ್ಟ್‌ 6ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ.

ಸದ್ಯಕ್ಕೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? ಮುಂದಿದೆ ಸಚಿತ್ರ ಮಾಹಿತಿ...

 ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್, ಜಲಾಶಯದ ಇಂದಿನ ಮಟ್ಟ 551.55 ಮೀಟರ್ ಆಗಿದೆ. ಒಳಹರಿವು 27,850 ಕ್ಯುಸೆಕ್ ಆಗಿದ್ದು, 5208 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಇಂದಿನ ನೀರಿನ ಮಟ್ಟ 870.37 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 4518 ಕ್ಯುಸೆಕ್ ಆಗಿದೆ. ಹೊರ ಹರಿವು 7850 ಕ್ಯುಸೆಕ್. ಹೇಮಾವತಿ ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. ಇಂದಿನ ನೀರಿನ ಮಟ್ಟ 889.90 ಮೀಟರ್. ಒಳಹರಿವು 11978 ಕ್ಯುಸೆಕ್, ಜಲಾಶಯದಿಂದ ಹೊರ ಹರಿವು 8380 ಕ್ಯುಸೆಕ್ ಆಗಿದೆ.

 ಕಬಿನಿ, ಕೆಆರ್‌ಎಸ್, ಭದ್ರಾ ಜಲಾಶಯಗಳು

ಕಬಿನಿ, ಕೆಆರ್‌ಎಸ್, ಭದ್ರಾ ಜಲಾಶಯಗಳು

ಕಬಿನಿ ಜಲಾಶಯದ ಪೂರ್ಣ ಮಟ್ಟ 696.13 ಮೀಟರ್. ಇಂದಿನ ನೀರಿನ ಮಟ್ಟ 695.23 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 5833 ಕ್ಯುಸೆಕ್, ಹೊರಹರಿವು 2700 ಕ್ಯುಸೆಕ್ ದಾಖಲಾಗಿದೆ. ಕೆಆರ್‌ಎಸ್ ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಇಂದಿನ ನೀರಿನ ಮಟ್ಟ 35.26 ಮೀಟರ್ ಆಗಿದೆ. ಜಲಾಶಯಕ್ಕೆ 8686 ಕ್ಯುಸೆಕ್ ಒಳಹರಿವು ಇದೆ. ಜಲಾಶಯದಿಂದ 5336 ಕ್ಯುಸೆಕ್ ನೀರನ್ನು ಬಿಡಲಾಗುತ್ತಿದೆ. ಭದ್ರಾ ಜಲಾಶಯದ ಪೂರ್ಣಮಟ್ಟ 657.73 ಮೀಟರ್ ಆಗಿದೆ. ಇಂದಿನ ನೀರಿನ ಮಟ್ಟ 657.15 ಮೀಟರ್ ಆಗಿದೆ. ಜಲಾಶಯಕ್ಕೆ 15206 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಡ್ಯಾಂನಿಂದ 3609 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

 ತುಂಗಭದ್ರಾ, ಆಲಮಟ್ಟಿ ಜಲಾಶಯ

ತುಂಗಭದ್ರಾ, ಆಲಮಟ್ಟಿ ಜಲಾಶಯ

ತುಂಗಭದ್ರಾ ಜಲಾಶಯದ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಇಂದಿನ ನೀರಿನ ಮಟ್ಟ 497.41 ಮೀಟರ್. ಜಲಾಶಯಕ್ಕೆ 25278 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 39971 ಕ್ಯುಸೆಕ್ ಆಗಿದೆ. ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಇಂದಿನ ನೀರಿನ ಮಟ್ಟ 518.66 ಮೀಟರ್ ಆಗಿದೆ. ಜಲಾಶಯಕ್ಕೆ 174340 ಕ್ಯುಸೆಕ್ ಒಳಹರಿವು ಇದೆ. ಹೊರ ಹರಿವು 168912 ಕ್ಯುಸೆಕ್. ನಾರಾಯಣಪುರ ಜಲಾಶಯದ ಪೂರ್ಣ ಮಟ್ಟ 492.25 ಮೀಟರ್. ಇಂದಿನ ನೀರಿನ ಮಟ್ಟ 491.52 ಮೀಟರ್ ಆಗಿದೆ. 167257ಕ್ಯುಸೆಕ್ ಒಳಹರಿವು ಜಲಾಶಯಕ್ಕೆ ಇದೆ. ಹೊರ ಹರಿವು 163751 ಕ್ಯುಸೆಕ್.

 ಸೂಪಾ, ಘಟಪ್ರಭಾ, ಮಲಪ್ರಭಾ ಜಲಾಶಯ

ಸೂಪಾ, ಘಟಪ್ರಭಾ, ಮಲಪ್ರಭಾ ಜಲಾಶಯ

ಸೂಪಾ ಜಲಾಶಯದ ಪೂರ್ಣ ಮಟ್ಟ 564.00 ಮೀಟರ್. ಇಂದಿನ ನೀರಿನ ಮಟ್ಟ 553.30 ಮೀಟರ್ ಆಗಿದೆ. ಜಲಾಶಯಕ್ಕೆ 21496 ಕ್ಯುಸೆಕ್ ಒಳಹರಿವು ಇದೆ. ಹೊರ ಹರಿವು 709 ಕ್ಯುಸೆಕ್. ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಇಂದಿನ ನೀರಿನ ಮಟ್ಟ 662.48 ಮೀಟರ್. ಒಳಹರಿವು 12438 ಕ್ಯುಸೆಕ್, ಹೊರ ಹರಿವು 4525 ಕ್ಯುಸೆಕ್ ಆಗಿದೆ. ಮಲಪ್ರಭಾ ಜಲಾಶಯದ ಪೂರ್ಣ ಮಟ್ಟ 633.80 ಮೀಟರ್ ಆಗಿದೆ. ಇಂದಿನ ನೀರಿನ ಮಟ್ಟ 632.70 ಮೀಟರ್ ಆಗಿದೆ. ಒಳಹರಿವು 6185 ಕ್ಯುಸೆಕ್, ಹೊರಹರಿವು 1694 ಕ್ಯುಸೆಕ್ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+