ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಹೈಲೈಟ್ಸ್
ಬೆಂಗಳೂರು, ಏಪ್ರಿಲ್ 30: 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿರೀಕ್ಷೆಯಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಎಂದಿನಂತೆ ಕರಾವಳಿ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶದಲ್ಲಿ ಪ್ರಾಬಲ್ಯ ಮೆರೆದಿದ್ದಾರೆ. ಮೊದಲೆರಡು ಸ್ಥಾನಗಳನ್ನು ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಪಡೆದುಕೊಂಡಿದೆ. ಆದರೆ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಹಲವು ವರ್ಷ ಮೊದಲ ಸ್ಥಾನವನ್ನು ಪಡೆಯುತ್ತಿದ್ದ ಚಿಕ್ಕೋಡಿ ಮಾತ್ರ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ಜೊತೆ ಜೊತೆಗೆ ಎಂದಿನಂತೆ ನಗರ ವಿದ್ಯಾರ್ಥಿಗಳು ಗ್ರಾಮೀಣ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಫಲಿತಾಂಶ ದಾಖಲಿಸಿದ್ದರೆ, ಈ ಬಾರಿಯೂ ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.












Click it and Unblock the Notifications