Infographics; ಕರ್ನಾಟಕದ ಮತದಾರರ ಪಟ್ಟಿ, ಅಂಕಿ-ಸಂಖ್ಯೆಗಳು
ಬೆಂಗಳೂರು, ಜನವರಿ 12; ಕರ್ನಾಟಕದಲ್ಲಿ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿದೆ.
ರಾಜ್ಯ ಚುನಾವಣಾ ಆಯೋಗ ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನ್ವಯ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. 224 ಕ್ಷೇತ್ರಗಳ ಪೈಕಿ 221 ಕ್ಷೇತ್ರಗಳ ಅಂತಿಮ ಮತದಾರರ ಪರಿಷ್ಕೃತ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಎಂದು ಖಾತರಿಪಡಿಸಿಕೊಳ್ಳಲು ಜನರಿಗೆ ಅವಕಾಶ ನೀಡಲಾಗಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಜನರು ಪರಿಶೀಲನೆ ಮಾಡಿಕೊಳ್ಳಬಹುದಾಗಿದೆ.

ಚುನಾವಣಾ ಆಯೋಗ 221 ಕ್ಷೇತ್ರಗಳ ಪರಿಷ್ಕೃತ ಮತದಾರರ ಪಟ್ಟಿ ಪ್ರಕಟಿಸಿದೆ. ಬೆಂಗಳೂರು ನಗರ ವ್ಯಾಪ್ತಿಯ ಚಿಕ್ಕಪೇಟೆ, ಶಿವಾಜಿನಗರ, ಮಹಾದೇವಪುರ ಕ್ಷೇತ್ರದ ಪಟ್ಟಿ ಜನವರಿ 15ರಂದು ಪ್ರಕಟವಾಗಲಿದೆ ಎಂದು ಹೇಳಿದೆ.
ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯ ಪ್ರಕಾರ ರಾಜ್ಯದಲ್ಲಿನ ಒಟ್ಟು ಮತದಾರರು 5,05,48,553. ಪುರುಷರು 2,54,49,725, ಮಹಿಳೆಯರು 2,50,94,326 ಮತ್ತು ಇತರರು 4,502. 7 ಲಕ್ಷ ಯುವ ಮತದಾರರು ಹೊಸದಾಗಿ ನೋಂದಣಿ ಮಾಡಿಕೊಂಡಿದ್ದಾರೆ.
ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಮತ್ತೊಮ್ಮೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅವಕಾಶ ನೀಡಲಾಗುತ್ತದೆ. ಆದ್ದರಿಂದ ಈಗ ಹೆಸರು ಸೇರಿಸಲು ಮರೆತಿದ್ದರೆ ಮತ್ತೊಂದು ಅವಕಾಶವಿದೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 5,13,179 ದಿವ್ಯಾಂಗ ಮತದಾರರಿದ್ದಾರೆ. ಇವರಲ್ಲಿ ಪುರುಷರು 3,01,534 ಹಾಗೂ ಮಹಿಳೆಯರು 2,11,558.
ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು (6,50,532) ಇದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾರರು (1,66,521) ಇದ್ದಾರೆ.
ಅತ್ಯಂತ ಹೆಚ್ಚು 54,820 ಯುವ ಮತದಾರರು ಬೆಳಗಾವಿ ಹಾಗೂ ಅತ್ಯಂತ ಕಡಿಮೆ (5806) ಯುವ ಮತದಾರರು ಕೊಡಗು ಜಿಲ್ಲೆಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಅತ್ಯಂತ ಹೆಚ್ಚು ಮಹಿಳಾ ಮತದಾರರಿರುವ ಜಿಲ್ಲೆಯಾಗಿ ಉಡುಪಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಅತ್ಯಂತ ಕಡಿಮೆ ಮಹಿಳಾ ಮತದಾರರನ್ನು ಹೊಂದಿರುವ ಜಿಲ್ಲೆಯಾಗಿದೆ.












Click it and Unblock the Notifications