Infographics; ಅತಿ ಹೆಚ್ಚು, ಕಡಿಮೆ ಮಹಿಳಾ ಮತದಾರರು ಇರುವ ಕ್ಷೇತ್ರ
ಬೆಂಗಳೂರು, ಜನವರಿ 08; ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಿದ್ಧತೆಗಳು ನಡೆಯುತ್ತಿವೆ. 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ.
ಮತದಾರರ ಪಟ್ಟಿಯಲ್ಲಿ ಹಲವಾರು ವಿಶೇಷತೆಗಳಿವೆ. ರಾಜ್ಯದಲ್ಲಿ ಅತ್ಯಂತ ಹೆಚ್ಚು ಮಹಿಳಾ ಮತದಾರರಿರುವ ಜಿಲ್ಲೆಯಾಗಿ ಉಡುಪಿ ಮೊದಲ ಸ್ಥಾನ ಪಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಮಹಿಳಾ ಮತದಾರರು ಇದ್ದಾರೆ.
221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 6,50,532, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 1,66,521 ಮತದಾರರು ಇದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ರಾಜ್ಯದಲ್ಲಿ 224 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 221 ಕ್ಷೇತ್ರಗಳ ಪರಿಷ್ಕೃತ ಮತದಾರರ ಪಟ್ಟಿ ಪ್ರಕಟವಾಗಿದೆ. ಚಿಕ್ಕಪೇಟೆ, ಶಿವಾಜಿನಗರ, ಮಹಾದೇವಪುರ ಕ್ಷೇತ್ರದ ಅಂತಿಮ ಪಟ್ಟಿ ಜನವರಿ 15 ರಂದು ಪ್ರಕಟವಾಗಲಿದೆ.
ಯುವ ಮತದಾರರು; ಈಗ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಅತ್ಯಂತ ಹೆಚ್ಚು (54,820) ಯುವ ಮತದಾರರು ಬೆಳಗಾವಿ ಹಾಗೂ ಅತ್ಯಂತ ಕಡಿಮೆ ಮತದಾರರು ಕೊಡಗು ಜಿಲ್ಲೆಯಲ್ಲಿ (5,806) ಹೆಸರು ನೋಂದಾಯಿಸಿಕೊಂಡಿದ್ದಾರೆ.
ಅಂತಿಮ ಮತದಾರರ ಪಟ್ಟಿ ಪ್ರಕಾರ 7 ಲಕ್ಷ ಯುವ ಮತದಾರರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಮತದಾರರ ಲಿಂಗಾನುಪಾತದಲ್ಲಿ ಮಹಿಳಾ ಪ್ರಾತಿನಿಧ್ಯ ಏರಿಕೆಯಾಗಿದೆ. 1000 ಪುರಷರಿಗೆ 988 ಮಹಿಳೆಯರು ಇದ್ದಾರೆ. ಕಳೆದ ಬಾರಿ 983 ಅನುಪಾತವಿತ್ತು.
ರಾಜ್ಯದ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ? ಎಂದು ಪರಿಶೀಲನೆ ಮಾಡಬಹುದಾಗಿದೆ. ಈ ಕೆಳಗಿನ ವೆಬ್‌ಸೈಟ್ ಅಥವಾ ಅಪ್ಲಿಕೇಶನ್‌ಗಳ ಮೂಲಕ ಹೆಸರು ಚೆಕ್ ಮಾಡಿಕೊಳ್ಳಬಹುದು. www.nvsp.in or Voter Portal or Voter Helpline Mobile App
ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2023ರ ಪ್ರಕಟಿತ ಪಟ್ಟಿ ಅನ್ವಯ ರಾಜ್ಯದಲ್ಲಿ ಒಟ್ಟು 5,13,179 ದಿವ್ಯಾಂಗ ಮತದಾರರಿದ್ದಾರೆ. ಪುರುಷರು 3,01,534 ಹಾಗೂ ಮಹಿಳೆಯರು 2,11,558.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications