ಕರ್ನಾಟಕ ಹವಾಮಾನ ವರದಿ: ಮುಂದಿನ 4 ದಿನ ಅಬ್ಬರಿಸಲಿದೆ ಮಳೆ
ಬೆಂಗಳೂರು, ಜುಲೈ 10: ರಾಜ್ಯದಲ್ಲಿ ದಿನೇ ದಿನೇ ಹವಾಮಾನ ಬದಲಾವಣೆಯಾಗುತ್ತಿದೆ. ಕಳೆದ ಒಂದು ವಾರದಿಂದ ಬಿಸಿಲು ಕಂಡಿದ್ದ ಪ್ರದೇಶದಲ್ಲಿ ಮಳೆಯಾಗುತ್ತಿದೆ.
ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಪಶ್ಚಿಮ ಮತ್ತು ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ.
ರಾಜ್ಯದ ಪಶ್ಚಿಮ ಘಟ್ಟ - ಮಲೆನಾಡನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ. ಇನ್ನೂ ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗಿದ್ದರೂ ಆ ಮಳೆ ಮುಂದುವರೆದಿಲ್ಲ. ಆದರೆ, ನೈರುತ್ಯ ಮುಂಗಾರು ಮತ್ತೆ ಮಳೆ ತರಲಿದೆ ಎಂದು ಹವಾಮಾನ ಇಲಾಖೆಮಾಹಿತಿ ನೀಡಿದೆ.

ಇಂದಿನಿಂದ ಜು.14 ರವರೆಗೆ ರಾಜ್ಯ ಮಾತ್ರವಲ್ಲದೇ, ಮಹಾರಾಷ್ಟ್ರ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ, ಮತ್ತು ಕೇರಳದಲ್ಲಿ ಭಾರೀ ಮಳೆ ಯಾಗಲಿದೆ.
ಸತತ ಮಳೆಯು ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕರಾವಳಿಯ ಗರಿಷ್ಠ ತಾಪಮಾನ ಕಡಿಮೆಯಾಗಿದೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ನದಿ ಕೆರೆ ಕಟ್ಟೆಗಳು ಭರ್ತಿಯಾಗಿದ್ದು, ಕೃಷಿಕರಲ್ಲಿ ಹರ್ಷ ವ್ಯಕ್ತವಾಗಿದೆ.

ಕಲಬುರಗಿಯಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ, ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಸಂಜೆಯಾಗುತ್ತಿದ್ದಂತೆ ವ್ಯಾಪಕ ಮಳೆ ಸುರಿದಿದೆ. ಮುಖ್ಯ ರಸ್ತೆಗಳು ಜಲಾವೃತಗೊಂಡಿತ್ತು.
ಚಿತ್ತಾಪುರ ತಾಲೂಕಿನ ಸಮೀಪದ ರಾವೂರ ಗ್ರಾಮ ಮಳೆಗೆ ತತ್ತರಿಸಿದೆ. ಊರಿನ ಇಳಿಜಾರು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.

Recommended Video
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಉಷ್ಣಾಂಶ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.












Click it and Unblock the Notifications