ಕರ್ನಾಟಕ ಹವಾಮಾನ: ರಾಜ್ಯಾದ್ಯಂತ ರಣ ಬಿಸಿಲು ಮುಂದುವರಿಕೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಮಾರ್ಚ್ 13 ರಂದು ಕೊಂಚ ಬಿಡುವು ಪಡೆದಿದೆ.

ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಕಲಬುರಗಿಯಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ದಾವಣಗೆರೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನು ಎರಡು ದಿನಗಳು ಮನೆನಾಡು ಹಾಗೂ ಕರಾವಳಿ ಪ್ರದೇಶಗಳು ಮಳೆಯನ್ನು ಕಂಡಿದ್ದರೂ ಕೂಡ, ಸೆಕೆಯಿಂದ ಹೊರತಾಗಿಲ್ಲ. ಉತ್ತರ ಕರ್ನಾಕದಲ್ಲಿದ್ದಷ್ಟು ಸೆಕೆ ಇಲ್ಲದಿದ್ದರೂ, ಸುಡು ಬಿಸಿಲಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, 32 ಡಿಗ್ರಿ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೆಂಗಳೂರು ನಗರದಲ್ಲಿ ಗರಿಷ್ಠ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಬಿಸಿಲು ವಿಪರೀತವಾಗಿದೆ.

ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಾಮರಾಜನಗರ, ಮೈಸೂರು, ಮಂಡ್ಯ, ಶಿವಮೊಗ್ಗ, ತುಮಕೂರು, ಕೊಡಗು, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿದಂತೆ ಹಲವೆಡೆ ಒಣಹವೆ ಮುಂದುವರೆದಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳ ತಾಪಮಾನ ವಿವಿರ ಇಲ್ಲಿದೆ:(ವಿನ್ಯಾಸ: ಭರತ್ ಎಚ್‌.ಸಿ)

Karnataka Weather Forecast Dry Weather Likely To Prevail Over The State
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+