ರಾಜ್ಯದ ಹಲವೆಡೆ ಸುಡು ಬಿಸಿಲಿನ ತಾಪಮಾನ,ನಿಮ್ಮೂರಲ್ಲಿ ಎಷ್ಟು?

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಝಳ ಮಾರ್ಚ್ 18ರ ನಂತರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನು ಎರಡು ದಿನಗಳ ನಂತರ ತಾಪಮಾನ ಏರಿಕೆಯಾಗಲಿದೆ. ರಾಜ್ಯದೆಲ್ಲೆಡೆ ಮೇ ಅಂತ್ಯದವರೆಗೂ ಒಣ ಹವೆ, ಬಿಸಿಲಿನ ಝಳ ಮುಂದುವರೆಯುತ್ತದೆ ಎಂದು ತಿಳಿಸಿದೆ.

ಉತ್ತರ ಒಳನಾಡು ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರೆಯಲಿದೆ. ಎಲ್ಲೂ ಕೂಡಾ ಭಾರಿ ಮಳೆ ಸುಳಿವಿಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲಿಎಂದಿನಂತೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಬಿಸಿಲು ಜೋರಾಗಲಿದೆ. ಮಾರ್ಚ್ 16ರಂದು ಬೆಂಗಳೂರು ನಗರದಲ್ಲಿ ಗರಿಷ್ಠ 33ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ಕೆಲದಿನಗಳು ಇದೇ ಪ್ರಮಾಣದ ತಾಪಮಾನ ನಿರೀಕ್ಷೆಯಿದೆ.

ಮಧ್ಯ ಕರ್ನಾಟಕ ಭಾಗದಲ್ಲೂ ಒಣ ಹವೆ ಇರಲಿದೆ. ದಾವಣಗೆರೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತನಕ ತಲುಪಿ ಇಂದು ಬಿಸಿಲು ಬಾಧಿಸಿದೆ. ಕರ್ನಾಟಕದ ವಿವಿಧ ಪಟ್ಟಣಗಳಲ್ಲಿ ತಾಪಮಾನ ವಿವರ ಇಲ್ಲಿದೆ:(ವಿನ್ಯಾಸ: ಭರತ್ ಎಚ್.ಸಿ)

Karnataka Weather Forecast March 16: Mercury on rise North Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+