ಕಲ್ಯಾಣ ಕರ್ನಾಟಕದಲ್ಲಿ ಸುಡು ಬಿಸಿಲಿನ ತಾಪಮಾನ, ಎಲ್ಲೆಲ್ಲಿ ಎಷ್ಟು?
ಕರ್ನಾಟಕದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಅಲ್ಲಲ್ಲಿ ಇನ್ನೆರಡು ದಿನ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ.
ಉತ್ತರ ಒಳನಾಡು ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರೆಯಲಿದೆ. ಎಲ್ಲೂ ಕೂಡಾ ಭಾರಿ ಮಳೆ ಸುಳಿವಿಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲಿಎಂದಿನಂತೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಬಿಸಿಲು ಜೋರಾಗಲಿದೆ. ಮಾರ್ಚ್ 15ರಂದು ಬೆಂಗಳೂರು ನಗರದಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ಕೆಲದಿನಗಳು ಇದೇ ಪ್ರಮಾಣದ ತಾಪಮಾನ ನಿರೀಕ್ಷೆಯಿದೆ.
ಮಧ್ಯ ಕರ್ನಾಟಕ ಭಾಗದಲ್ಲೂ ಒಣ ಹವೆ ಇರಲಿದೆ. ದಾವಣಗೆರೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತನಕ ತಲುಪಿ ಇಂದು ಬಿಸಿಲು ಬಾಧಿಸಿದೆ. ಕರ್ನಾಟಕದ ವಿವಿಧ ಪಟ್ಟಣಗಳಲ್ಲಿ ತಾಪಮಾನ ವಿವರ ಇಲ್ಲಿದೆ:(ವಿನ್ಯಾಸ: ಭರತ್ ಎಚ್.ಸಿ)













Click it and Unblock the Notifications