Inforgraphics: ಜೂನ್ 16ರಂದು ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಜೂನ್ 16: ರಾಜ್ಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಜೂನ್ 16ರ ಸಂಜೆ ವೇಳೆಗೆ ಮಳೆ ಸುರಿದಿದೆ. ಜೂನ್ 17ರಂದು ಇದೇ ರೀತಿ ವಾತಾವರಣ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ. ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕೆಲ್ಲೋಡು ಎಂಬಲ್ಲಿ ದಾಖಲಾಗಿದ್ದು,104.5ಮಿಮೀ ಮಳೆ ಸುರಿದಿದೆ.
ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಟ್ವೀಟ್ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹವಾಮಾನದ ಕುರಿತು ಮತ್ತು ತೇವಾಂಶ ಹಾಗೂ ಗರಿಷ್ಠ ಬಿಸಿಲಿನ ಬಗ್ಗೆ ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಹವಾಮಾನ ಮುನ್ಸೂಚನೆ
ಮುಂದಿನ 24 ಗಂಟೆಗಳಲ್ಲಿ ಮಲೆನಾಡು, ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹವಾಮಾನದ ಕುರಿತು ಮತ್ತು ತೇವಾಂಶ ಹಾಗೂ ಗರಿಷ್ಠ ಬಿಸಿಲಿನ ಬಗ್ಗೆ ಈ ವರದಿಯಲ್ಲಿ ತಿಳಿದುಕೊಳ್ಳೋಣ.
ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಮುಂದಿನ 24 ಗಂಟೆಗಳಲ್ಲಿ ವಾತಾವರಣ?
ಬಾಗಲಕೋಟೆಯಲ್ಲಿ 33 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ 5.3 ಎಂಎಂ ಮಳೆಯಾಗಿದೆ. ಬೆಂಗಳೂರಲ್ಲಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ 3.8 ಎಂಎಂ ಮಳೆ ದಾಖಲಾಗಿದೆ.

ಗುಡುಗು ಸಹಿತ ಮಳೆಯಾಗಲಿದೆ
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Recommended Video

ರಾಜ್ಯದಲ್ಲಿ ಮಳೆ ಎಷ್ಟು ಸುರಿದಿದೆ
ರಾಯಚೂರು 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಶೇ49 ರಷ್ಟು ತೇವಾಂಶ, ಚಿತ್ರದುರ್ಗದಲ್ಲಿ 15.6 ಎಂಎಂ ಮಳೆ ಸುರಿದರೂ 33 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, 3.6ಎಂಎಂ ಮಳೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ಹಾಗೂ 5.6 ಎಂಎಂ ಮಳೆ ಬಿದ್ದಿದೆ.












Click it and Unblock the Notifications