ಕರ್ನಾಟಕ ಹವಾಮಾನ: ಏಪ್ರಿಲ್ 13ರವರೆಗೆ ರಾಜ್ಯಾದ್ಯಂತ ಮಳೆ
ರಾಜ್ಯದ ವಿವಿಧೆಡೆ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದರೂ ಹಲವೆಡೆ ಮಳೆ ಬರುವ ಸಾಧ್ಯತೆ ಇದೆ.
ಇನ್ನುಳಿದಂತೆ ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್,ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 13 ಹಾಗೂ 14 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಏಪ್ರಿಲ್ 9 ರಂದು ಬಾಗಲಕೋಟೆ, ಹುಬ್ಬಳ್ಳಿ, ಯಲ್ಲಾಪುರ, ಶಿರಸಿಯ ಕೆಲವು ಭಾಗ, ಭದ್ರಾವತಿ, ಬಾಳೆ ಹೊನ್ನೂರಿನಲ್ಲಿ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಮಳೆ ಚುರುಕಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು,ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿನ್ಯಾಸ್ ಭರತ್.ಎಚ್‌ಸಿ














Click it and Unblock the Notifications