ಕೆಆರ್‌ಎಸ್ ಭರ್ತಿಗೆ 4 ಅಡಿ ಬಾಕಿ; ವಿವಿಧ ಡ್ಯಾಂಗಳ ನೀರಿನ ಮಟ್ಟ
ಬೆಂಗಳೂರು, ಆಗಸ್ಟ್ 10; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಜಲಾಶಯದ ನೀರಿನ ಮಟ್ಟ 120.46 ಅಡಿಗೆ ತಲುಪಿದೆ.
ಸೋಮವಾರ ಸಂಜೆಯ ವೇಳೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 120.46 ಅಡಿಗೆ ತಲುಪಿದೆ. ಜಲಾಶಯದ ಪೂರ್ಣಮಟ್ಟ 124 ಅಡಿಗಳು.
ಕೆಆರ್‌ಎಸ್ ಜಲಾಶಯ ಭರ್ತಿಯಾಗಲು 4.34 ಅಡಿ ಮಾತ್ರವೇ ಬಾಕಿ ಉಳಿದಿದೆ. ಜಲಾಶಯಕ್ಕೆ 13,108 ಕ್ಯುಸೆಕ್ ಒಳಹರಿವು ಇದೆ. 5505 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯ ಭರ್ತಿಯಾದ ಬಳಿಕ ಮುಖ್ಯಮಂತ್ರಿಗಳು ಬಾಗಿನ ಅರ್ಪಣೆ ಮಾಡಲಿದ್ದಾರೆ.
ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಇಳಿಕೆಯಾಗುತ್ತಿದೆ. ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಸಹ ಮುನ್ಸೂಚನೆ ನೀಡಿದೆ.

ಹಾರಂಗಿ, ಹೇಮಾವತಿ, ಲಿಂಗನಮಕ್ಕಿ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್, ಜಲಾಶಯದ ಇಂದಿನ ಮಟ್ಟ 552.18 ಮೀಟರ್. ಒಳಹರಿವು ಸಹ ಕಡಿಮೆಯಾಗಿದ್ದು 12,679 ಕ್ಯುಸೆಕ್ ಹರಿದು ಬರುತ್ತಿದೆ. 5526 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಇಂದಿನ ನೀರಿನ ಮಟ್ಟ 870.32 ಮೀಟರ್. ಜಲಾಶಯಕ್ಕೆ 5564 ಕ್ಯುಸೆಕ್ ಒಳಹರಿವು ಇದೆ. ಜಲಾಶಯದಿಂದ ಹೊರ ಹರಿವು 4470 ಕ್ಯುಸೆಕ್ ದಾಖಲಾಗಿದೆ.
ಹೇಮಾವತಿ ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. ಇಂದಿನ ನೀರಿನ ಮಟ್ಟ 890.11 ಮೀಟರ್ ಆಗಿದೆ. ಜಲಾಶಯಕ್ಕೆ 6230 ಕ್ಯುಸೆಕ್ ಒಳಹರಿವು ದಾಖಲಾಗಿದೆ. 5055 ಕ್ಯುಸೆಕ್ ಹೊರ ಹರಿವು ಆಗಿದೆ.

ಕಬಿನಿ, ಕೆಆರ್‌ಎಸ್, ಭದ್ರಾ ಡ್ಯಾಂ ನೀರಿನ ಮಟ್ಟ
ಕಬಿನಿ ಜಲಾಶಯದ ಪೂರ್ಣ ಮಟ್ಟ 696.13 ಮೀಟರ್. ಇಂದಿನ ನೀರಿನ ಮಟ್ಟ 695.50 ಮೀಟರ್ ಆಗಿದೆ. ಕಬಿನಿ ಜಲಾಶಯಕ್ಕೆ ಒಳಹರಿವು 9741 ಕ್ಯುಸೆಕ್, ಹೊರಹರಿವು 10700 ಕ್ಯುಸೆಕ್ ದಾಖಲಾಗಿದೆ.
ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಇಂದಿನ ನೀರಿನ ಮಟ್ಟ 36.78 ಮೀಟರ್ ಆಗಿದೆ. ಮಂಡ್ಯ ಜಿಲ್ಲೆಯಲ್ಲಿರುವ ಜಲಾಶಯಕ್ಕೆ 13,108 ಕ್ಯುಸೆಕ್ ನೀರು ಹರಿದು ಬರುತ್ತಿದೆ. 5505 ಕ್ಯುಸೆಕ್ ನೀರನ್ನು ಬಿಡಲಾಗುತ್ತಿದೆ.
ಭದ್ರಾ ಜಲಾಶಯದ ಪೂರ್ಣಮಟ್ಟ 657.73 ಮೀಟರ್ ಆಗಿದೆ. ಇಂದಿನ ನೀರಿನ ಮಟ್ಟ 657.29 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 10647 ಕ್ಯುಸೆಕ್. ಡ್ಯಾಂನಿಂದ 7048 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

ಕೃಷ್ಣಾ ನದಿಯಲ್ಲೂ ನೀರಿನ ಮಟ್ಟ ಇಳಿಕೆ
ತುಂಗಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ 497.37 ಮೀಟರ್ ಆಗಿದೆ. ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 76337 ಕ್ಯುಸೆಕ್ ಒಳಹರಿವು ಇದೆ. ಜಲಾಶಯದಿಂದ ಹೊರ ಹರಿವು 80183 ಕ್ಯುಸೆಕ್ ದಾಖಲಾಗಿದೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಮಂಗಳವಾರದ ನೀರಿನ ಮಟ್ಟ 519.10 ಮೀಟರ್ ಆಗಿದೆ. ಒಳಹರಿವು 50089 ಕ್ಯುಸೆಕ್. ಹೊರ ಹರಿವು 76918 ಕ್ಯುಸೆಕ್ ದಾಖಲಾಗಿದೆ.
ನಾರಾಯಣಪುರ ಜಲಾಶಯದ ಪೂರ್ಣ ಮಟ್ಟ 492.25 ಮೀಟರ್. ಮಂಗಳವಾರದ ನೀರಿನ ಮಟ್ಟ 491.71 ಮೀಟರ್. ಜಲಾಶಯದ ಒಳಹರಿವು ಕಡಿಮೆಯಾಗಿದೆ. 90925 ಕ್ಯುಸೆಕ್ ಒಳಹರಿವು ಇದೆ. ಹೊರ ಹರಿವು 87,817 ಕ್ಯುಸೆಕ್.

ಘಟಪ್ರಭಾ, ಮಲಪ್ರಭಾ ನೀರಿನ ಮಟ್ಟ
ಸೂಪಾ ಜಲಾಶಯದ ಇಂದಿನ ನೀರಿನ ಮಟ್ಟ 554.41 ಮೀಟರ್. ಪೂರ್ಣ ಮಟ್ಟ 564.00 ಮೀಟರ್. ಜಲಾಶಯದ ಒಳಹರಿವು 7072 ಕ್ಯುಸೆಕ್. ಹೊರ ಹರಿವು 3654 ಕ್ಯುಸೆಕ್.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಮಂಗಳವಾರದ ನೀರಿನ ಮಟ್ಟ 662.36 ಮೀಟರ್ ಆಗಿದೆ. ಡ್ಯಾಂಗೆ ಒಳಹರಿವು 3294 ಕ್ಯುಸೆಕ್ ಮತ್ತು ಹೊರ ಹರಿವು 1381 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 633.04 ಮೀಟರ್. ಜಲಾಶಯದ ಪೂರ್ಣ ಮಟ್ಟ 633.80 ಮೀಟರ್. 4611 ಕ್ಯುಸೆಕ್ ಒಳಹರಿವು, ಹೊರಹರಿವು 1544 ಕ್ಯುಸೆಕ್ ಎಂದು ದಾಖಲಾಗಿದೆ.











Click it and Unblock the Notifications