ಸಾಧಾರಣ ಮಳೆ; ಜಲಾಶಯಗಳ ನೀರಿನ ಮಟ್ಟದ ವಿವರಗಳು
ಬೆಂಗಳೂರು, ಆಗಸ್ಟ್ 11; ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ಕರಾವಳಿ ಮತ್ತು ದಕ್ಷಿನ ಒಳನಾಡಿನ ಪ್ರದೇಶಗಳಲ್ಲಿ ಗುರುವಾರದ ತನಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು, ಆಗಾಗ ಮಳೆ ಸುರಿಯುತ್ತಿದೆ.
ಆಗ್ನೇಯ ಅರಬ್ಬಿ ಸಮುದ್ರ, ಕೇರಳ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಗಾಳಿಯು ಗಂಟೆಗೆ 40 ರಿಂದ 50 ಕಿ. ಮೀ. ವೇಗದಲ್ಲಿ ಬೀಸುವ ನಿರೀಕ್ಷೆ ಇದೆ. ಇದರಿಂದಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಮುಂದುವರೆದಿದೆ. ಆಗಾಗ ಮಳೆಯಾಗುವ ಸಾಧ್ಯತೆ ಇದ್ದು, ನಗರದ ತಾಪಾಮಾನ ಗರಿಷ್ಠ 29 ಡಿಗ್ರಿಗೆ ಏರಿಕೆಯಾಗುವ ನಿರೀಕ್ಷೆ ಇದೆ.
ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ಆಗಾಗ ಮಳೆಯಾಗುತ್ತಿದೆ. ಕೊಡಗು, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಆಗಾಗ ಮಳೆಯಾಗಿದೆ.

ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯದ ಬುಧವಾರದ ನೀರಿನ ಮಟ್ಟ 552.22 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು ಸಹ ಕಡಿಮೆಯಾಗಿದೆ. 9977 ಕ್ಯುಸೆಕ್ ನೀರು ಹರಿದು ಬರುತ್ತಿದೆ. 5158 ಕ್ಯುಸೆಕ್ ಹೊರ ಹರಿವು ದಾಖಲಾಗಿದೆ.
ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ 870.31 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 871.38 ಮೀಟರ್ ಆಗಿದೆ. ಜಲಾಶಯಕ್ಕೆ 4428 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ಹೊರ ಹರಿವು 4470 ಕ್ಯುಸೆಕ್.
ಹಾಸನ ಜಿಲ್ಲೆಯ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದ ಇಂದಿನ ನೀರಿನ ಮಟ್ಟ890.11 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. ಡ್ಯಾಂಗೆ 4164 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಬುಧವಾರದ ಹೊರ ಹರಿವು 4105 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಭದ್ರಾ ಡ್ಯಾಂ ನೀರಿನ ಮಟ್ಟ
ಕಬಿನಿ ಜಲಾಶಯದ ಬುಧವಾರದ ನೀರಿನ ಮಟ್ಟ 695.51 ಮೀಟರ್. ಜಲಾಶಯದ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 6152 ಕ್ಯುಸೆಕ್ ಒಳಹರಿವು ಇದೆ. ಹೊರಹರಿವು 5917 ಕ್ಯುಸೆಕ್.
ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯದ ಇಂದಿನ ನೀರಿನ ಮಟ್ಟ 36.87 ಮೀಟರ್. ಡ್ಯಾಂ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 9725 ಕ್ಯುಸೆಕ್. ಹೊರ ಹರಿವು 5383 ಕ್ಯುಸೆಕ್ ಆಗಿದೆ.
ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ 657.28 ಮೀಟರ್. ಜಲಾಶಯದ ಪೂರ್ಣಮಟ್ಟ 657.73 ಮೀಟರ್ ಆಗಿದೆ. ಡ್ಯಾಂಗೆ ಒಳಹರಿವು 8327 ಕ್ಯುಸೆಕ್ ದಾಖಲಾಗಿದೆ. 8929 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

ಕೃಷ್ಣಾ ನದಿಯಲ್ಲೂ ನೀರಿನ ಮಟ್ಟ ಇಳಿಕೆ
ತುಂಗಭದ್ರಾ ಜಲಾಶಯದ ಬುಧವಾರದ ನೀರಿನ ಮಟ್ಟ 497.17 ಮೀಟರ್ ಆಗಿದೆ. ಡ್ಯಾಂ ಪೂರ್ಣಮಟ್ಟ 497.71 ಮೀಟರ್. ಪ್ರಸ್ತುತ ಜಲಾಶಯಕ್ಕೆ ಕ್ಯುಸೆಕ್ ಒಳಹರಿವು ಇದ್ದು, ಹೊರ ಹರಿವು 80183 ಕ್ಯುಸೆಕ್.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಬುಧವಾರದ ನೀರಿನ ಮಟ್ಟ 519.19 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು ಕಡಿಮೆಯಾಗುತ್ತಿದೆ. ಕ್ಯುಸೆಕ್ ನೀರು ಬರುತ್ತಿದ್ದು, ಹೊರ ಹರಿವು 76918 ಕ್ಯುಸೆಕ್.
ನಾರಾಯಣಪುರ ಜಲಾಶಯದ ಬುಧವಾರದ ನೀರಿನ ಮಟ್ಟ 491.77 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಜಲಾಶಯಕ್ಕೆ ಒಳಹರಿವು ಕ್ಯುಸೆಕ್, ಹೊರ ಹರಿವು ಕ್ಯುಸೆಕ್ ಆಗಿದೆ.

ಘಟಪ್ರಭಾ, ಮಲಪ್ರಭಾ ಡ್ಯಾಂ
ಸೂಪಾ ಜಲಾಶಯದ ಬುಧವಾರದ ನೀರಿನ ಮಟ್ಟ 554.45 ಮೀಟರ್. ಪೂರ್ಣ ಮಟ್ಟ 564.00 ಮೀಟರ್. ಜಲಾಶಯಕ್ಕೆ ಒಳಹರಿವು 5142 ಕ್ಯುಸೆಕ್ ಆಗಿದ್ದು, ಹೊರ ಹರಿವು 3430 ಕ್ಯುಸೆಕ್ ಆಗಿದೆ.
ಘಟಪ್ರಭಾ ಜಲಾಯಶದ ಬುಧವಾರದ ನೀರಿನ ಮಟ್ಟ 662.42 ಮೀಟರ್. ಪೂರ್ಣ ಮಟ್ಟ 662.91 ಮೀಟರ್ ಆಗಿದೆ. ಜಲಾಶಯದ ಒಳಹರಿವು 3500 ಕ್ಯುಸೆಕ್ ಮತ್ತು ಹೊರ ಹರಿವು 1587 ಕ್ಯುಸೆಕ್.
ಮಲಪ್ರಭಾ ಜಲಾಶಯದ ಬುಧವಾರದ ನೀರಿನ ಮಟ್ಟ 633.04 ಮೀಟರ್. ಜಲಾಶಯದ ಪೂರ್ಣ ಮಟ್ಟ 633.80 ಮೀಟರ್ ಆಗಿದೆ. ಜಲಾಶಯಕ್ಕೆ 1544 ಕ್ಯುಸೆಕ್ ಒಳಹರಿವು ಇದೆ. ಹೊರಹರಿವು 2894 ಕ್ಯುಸೆಕ್.












Click it and Unblock the Notifications