ತುಂಗಭದ್ರಾ ಡ್ಯಾಂಗೆ ಸಚಿವರ ಬಾಗಿನ; ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಆಗಸ್ಟ್ 17; ಕರ್ನಾಟಕದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದೆ. ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆಗಸ್ಟ್ 17 ಮತ್ತು 18ರಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು, ಸಾಧಾರಣ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ಹೊಸಪೇಟೆಯಲ್ಲಿರುವ ತುಂಗಾಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಜಲಾಶಯಕ್ಕೆ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು. ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಮುಂತಾದವರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಸ್ಟ್ 21ರಂದು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.ಆಗಸ್ಟ್ ತಿಂಗಳಲ್ಲಿ ಬಹುತೇಕ ಎಲ್ಲಾ ಡ್ಯಾಂಗಳು ತುಂಬಿರುವುದು ಇತಿಹಾಸದಲ್ಲಿಯೇ ಮೊದಲನೇ ಬಾರಿ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಮಂಗಳವಾರದ ನೀರಿನ ಮಟ್ಟ 552.38 ಮೀಟರ್. ಜಲಾಶಯದ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು 7541 ಕ್ಯುಸೆಕ್, ಹೊರ ಹರಿವು 6180 ಕ್ಯುಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಜಲಾಶಯದ ಮಂಗಳವಾರದ ನೀರಿನ ಮಟ್ಟ 871.06 ಮೀಟರ್. ಜಲಾಶಯಕ್ಕೆ ಒಳಹರಿವು 3395 ಕ್ಯುಸೆಕ್, ಜಲಾಶಯದಿಂದ ಹೊರ ಹರಿವು 2850 ಕ್ಯುಸೆಕ್.

ಹೇಮಾವತಿ ಜಲಾಶಯದ ಮಂಗಳವಾರದ ನೀರಿನ ಮಟ್ಟ 889.91 ಮೀಟರ್. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. ಒಳಹರಿವು 2636 ಕ್ಯುಸೆಕ್ ಮತ್ತು ಹೊರ ಹರಿವು 4725 ಕ್ಯುಸೆಕ್ ದಾಖಲಾಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ

ಕೆಆರ್‌ಎಸ್, ಕಬಿನಿ, ಭದ್ರಾ

ಕಬಿನಿ ಜಲಾಶಯದ ಪೂರ್ಣ ಮಟ್ಟ 696.13 ಮೀಟರ್. ಮಂಗಳವಾರದ ನೀರಿನ ಮಟ್ಟ 695.90 ಮೀಟರ್. ಜಲಾಶಯಕ್ಕೆ 3737 ಕ್ಯುಸೆಕ್ ಒಳಹರಿವು, 3842 ಕ್ಯುಸೆಕ್ ಹೊರ ಹರಿವು ಇದೆ.

ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಜಲಾಶಯದ ಮಂಗಳವಾರದ ನೀರಿನ ಮಟ್ಟ 36.66 ಮೀಟರ್. ಡ್ಯಾಂ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 3367 ಕ್ಯುಸೆಕ್, ಹೊರ ಹರಿವು 3842 ಕ್ಯುಸೆಕ್.

ಭದ್ರಾ ಜಲಾಶಯದ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಮಂಗಳವಾರದ ನೀರಿನ ಮಟ್ಟ 657.41 ಮೀಟರ್. ಜಲಾಶಯಕ್ಕೆ ಒಳಹರಿವು 5197 ಕ್ಯುಸೆಕ್, ಹೊರಹರಿವು 4896 ಕ್ಯುಸೆಕ್.

ತುಂಗಭದ್ರಾ ಡ್ಯಾಂಗೆ ಬಾಗಿನ ಅರ್ಪಣೆ

ತುಂಗಭದ್ರಾ ಡ್ಯಾಂಗೆ ಬಾಗಿನ ಅರ್ಪಣೆ

ತುಂಗಭದ್ರಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 497.71 ಮೀಟರ್. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಹೊಸಪೇಟೆಯಲ್ಲಿರುವ ಜಲಾಶಯಕ್ಕೆ ಇಂದು ಜಲಸಂಪನ್ಮೂಲ ಸಚಿವರು ಬಾಗಿನ ಅರ್ಪಿಸಿದರು. ಡ್ಯಾಂಗೆ 18304 ಕ್ಯುಸೆಕ್ ಒಳಹರಿವು, ಹೊರ ಹರಿವು 14742 ಕ್ಯುಸೆಕ್ ಇದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್ ಆಗಿದೆ. ಮಂಗಳವಾರದ ನೀರಿನ ಮಟ್ಟ 519.56 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 27276 ಕ್ಯುಸೆಕ್, ಹೊರ ಹರಿವು 21,189 ಕ್ಯುಸೆಕ್.

ನಾರಾಯಣಪುರ ಜಲಾಶಯದ ಮಂಗಳವಾರದ ನೀರಿನ ಮಟ್ಟ 492. 07 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. 19082 ಕ್ಯುಸೆಕ್ ಒಳಹರಿವು, ಹೊರ ಹರಿವು 15850 ಕ್ಯುಸೆಕ್.

ಸೂಪ, ಘಟಪ್ರಭಾ, ಮಲಪ್ರಭಾ

ಸೂಪ, ಘಟಪ್ರಭಾ, ಮಲಪ್ರಭಾ

ಸೂಪಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 554.59 ಮೀಟರ್. ಪೂರ್ಣ ಮಟ್ಟ 564.00 ಮೀಟರ್. ಒಳಹರಿವು 4952 ಕ್ಯುಸೆಕ್, ಹೊರ ಹರಿವು 3666 ಕ್ಯುಸೆಕ್.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಮಂಗಳವಾರದ ನೀರಿನ ಮಟ್ಟ 662.91 ಮೀಟರ್. ಜಲಾಶಯದ ಒಳಹರಿವು 4265 ಕ್ಯುಸೆಕ್. ಹೊರ ಹರಿವು 4265 ಕ್ಯುಸೆಕ್ ಆಗಿದೆ.

ಮಲಪ್ರಭಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 633.19 ಮೀಟರ್. ಪೂರ್ಣ ಮಟ್ಟ 633.80 ಮೀಟರ್. ಡ್ಯಾಂಗೆ 2356 ಕ್ಯುಸೆಕ್ ಒಳಹರಿವು, 894 ಕ್ಯುಸೆಕ್ ಹೊರ ಹರಿವು ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+