ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಡ್ಯಾಂಗಳ ನೀರಿನ ಮಟ್ಟ

ಬೆಂಗಳೂರು, ಆಗಸ್ಟ್ 18; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ 8 ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಅರ್ಭಟ ಮುಂದುವರೆಯಲಿದೆ.

ಕರ್ನಾಟಕದಲ್ಲಿ ಈಗಾಗಲೇ ವಾಡಿಕೆಗಿಂತ ಶೇ 48ರಷ್ಟು ಹೆಚ್ಚು ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣದಿಂದಾಗಿ ಗುಡುಗು ಸಹಿತ ಮಳೆಯಾಗಲಿದೆ. 7 ರಿಂದ 11 ಸೆಂ. ಮೀ. ತನಕ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಸುರಿದ ಮಳೆಯ ಕಾರಣ ರಾಜ್ಯ ಬಹುತೇಕ ಜಲಾಶಯಗಳು ಈಗಾಗಲೇ ಭರ್ತಿಯಾಗಿವೆ. ಕರ್ನಾಟಕ ಜಲಾಶಯಗಳ ನೀರಿನ ಮಟ್ಟದ ವಿವರಗಳು ಚಿತ್ರದಲ್ಲಿವೆ...

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ ಡ್ಯಾಂಗಳು

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ ಡ್ಯಾಂಗಳು

ಲಿಂಗನಮಕ್ಕಿ ಜಲಾಶಯದ ಬುಧವಾರದ ನೀರಿನ ಮಟ್ಟ 552.41 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು 9225 ಕ್ಯುಸೆಕ್ ದಾಖಲಾಗಿದೆ. ಹೊರ ಹರಿವು 5569 ಕ್ಯುಸೆಕ್ ಆಗಿದೆ.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಜಲಾಶಯದ ಬುಧವಾರದ ನೀರಿನ ಮಟ್ಟ 871.09 ಮೀಟರ್ ಆಗಿದೆ. ಜಲಾಶಯಕ್ಕೆ 2939 ಕ್ಯುಸೆಕ್ ಒಳಹರಿವು ಮತ್ತು 2433 ಕ್ಯುಸೆಕ್ ಹೊರ ಹರಿವು ಇದೆ.

ಹೇಮಾವತಿ ಜಲಾಶಯದ ಪೂರ್ಣ ಮಟ್ಟ 890.58 ಮೀಟರ್ ಆಗಿದೆ. ಬುಧವಾರದ ನೀರಿನ ಮಟ್ಟ 889.89 ಮೀಟರ್ ಆಗಿದೆ. ಹಾಸನದಲ್ಲಿರುವ ಜಲಾಶಯಕ್ಕೆ ಒಳಹರಿವು 3924 ಕ್ಯುಸೆಕ್ ಮತ್ತು ಹೊರ ಹರಿವು 4725 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಜಲಾಶಯಗಳು

ಕೆಆರ್‌ಎಸ್, ಕಬಿನಿ, ಭದ್ರಾ ಜಲಾಶಯಗಳು

ಕಬಿನಿ ಜಲಾಶಯದ ಪೂರ್ಣ ಮಟ್ಟ 696.13 ಮೀಟರ್. ಬುಧವಾರದ ನೀರಿನ ಮಟ್ಟ 695.91 ಮೀಟರ್ ಆಗಿದೆ. ಜಲಾಶಯಕ್ಕೆ 4634 ಕ್ಯುಸೆಕ್ ನೀರು ಹರಿದು ಬರುತ್ತಿದೆ. 4363 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತದೆ.

ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯದ ಬುಧವಾರದ ನೀರಿನ ಮಟ್ಟ 36.63 ಮೀಟರ್. ಡ್ಯಾಂ ಪೂರ್ಣ ಮಟ್ಟ 38.04 ಮೀಟರ್. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವು 4256 ಕ್ಯುಸೆಕ್ ಆಗಿದೆ, ಹೊರ ಹರಿವು 5545 ಕ್ಯುಸೆಕ್ ದಾಖಲಾಗಿದೆ.

ಭದ್ರಾ ಜಲಾಶಯದ ಪೂರ್ಣಮಟ್ಟ 657.73 ಮೀಟರ್ ಆಗಿದೆ. ಜಲಾಶಯದ ಬುಧವಾರದ ನೀರಿನ ಮಟ್ಟ 657.41 ಮೀಟರ್. ಜಲಾಶಯಕ್ಕೆ ಒಳಹರಿವು 4996 ಕ್ಯುಸೆಕ್ ಮತ್ತು ಹೊರಹರಿವು 4996 ಕ್ಯುಸೆಕ್ ದಾಖಲಾಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ ಜಲಾಶಯದ ಬುಧವಾರದ ನೀರಿನ ಮಟ್ಟ 497.71 ಮೀಟರ್. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಹೊಸಪೇಟೆಯಲ್ಲಿರುವ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯಕ್ಕೆ 14181 ಕ್ಯುಸೆಕ್ ಒಳಹರಿವು ಮತ್ತು 14181 ಕ್ಯುಸೆಕ್ ಹೊರ ಹರಿವು ಇದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್ ಆಗಿದೆ. ಬುಧವಾರದ ನೀರಿನ ಮಟ್ಟ 519.57 ಮೀಟರ್ ಆಗಿದೆ. ಡ್ಯಾಂಗೆ ಒಳಹರಿವು 32,485 ಕ್ಯುಸೆಕ್, ಹೊರ ಹರಿವು 30,446 ಕ್ಯುಸೆಕ್ ದಾಖಲಾಗಿದೆ.

ನಾರಾಯಣಪುರ ಜಲಾಶಯದ ಬುಧವಾರದ ನೀರಿನ ಮಟ್ಟ 491.95 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಡ್ಯಾಂಗೆ 28987 ಕ್ಯುಸೆಕ್ ಒಳಹರಿವು ಮತ್ತು ಹೊರ ಹರಿವು 35,425 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ

ಸೂಪ, ಘಟಪ್ರಭಾ, ಮಲಪ್ರಭಾ

ಸೂಪಾ ಜಲಾಶಯದ ಬುಧವಾರದ ನೀರಿನ ಮಟ್ಟ 554.63 ಮೀಟರ್. ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಒಳಹರಿವು 4649 ಕ್ಯುಸೆಕ್ ಆಗಿದೆ. ಹೊರ ಹರಿವು 2931 ಕ್ಯುಸೆಕ್ ದಾಖಲಾಗಿದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್ ಆಗಿದೆ. ಬುಧವಾರದ ನೀರಿನ ಮಟ್ಟ 662.91 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 4689 ಕ್ಯುಸೆಕ್ ಹಾಗೂ ಹೊರ ಹರಿವು 4689 ಕ್ಯುಸೆಕ್ ದಾಖಲಾಗಿದೆ.

ಮಲಪ್ರಭಾ ಜಲಾಶಯದ ಬುಧವಾರದ ನೀರಿನ ಮಟ್ಟ 633.22 ಮೀಟರ್ ಆಗಿದೆ. ಪೂರ್ಣ ಮಟ್ಟ 633.80 ಮೀಟರ್. ಜಲಾಶಯಕ್ಕೆ ಒಳಹರಿವು 2456 ಕ್ಯುಸೆಕ್ ಮತ್ತು ಹೊರ ಹರಿವು 894 ಕ್ಯುಸೆಕ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+