ಮತ್ತೆ ಮಳೆಯ ಮುನ್ಸೂಚನೆ; ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಆಗಸ್ಟ್ 19; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ವಿವಿಧ ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದಲೂ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಆಗಾಗ ಮಳೆಯಾಗುತ್ತಿದೆ.
ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಕರಾವಳಿ ಭಾಗದಲ್ಲಿ ಗಾಳಿಯ ಅಬ್ಬರೂ ಹೆಚ್ಚಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬಾಗಲಕೋಟೆ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಈಗಾಗಲೇ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಜುಲೈ ಮತ್ತು ಆಗಸ್ಟ್ ಮೊದಲ ವಾರದಲ್ಲಿ ಸುರಿದ ಮಳೆಗೆ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಯಾವ ಜಲಾಶಯದಲ್ಲಿ ಎಷ್ಟು ನೀರಿದೆ? ಎಂಬ ಮಾಹಿತಿ ಇಲ್ಲಿದೆ...

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ ಡ್ಯಾಂ
ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಗುರುವಾರ ಜಲಾಶಯದಲ್ಲಿ 552.44 ಮೀಟರ್ ನೀರಿನ ಸಂಗ್ರಹವಿದೆ. 9817 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. 4984 ಕ್ಯುಸೆಕ್ ಹೊರ ಹರಿವು ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಗುರುವಾರದ ನೀರಿನ ಮಟ್ಟ 871.14 ಮೀಟರ್ ಆಗಿದೆ. ಜಲಾಶಯಕ್ಕೆ 2973 ಕ್ಯುಸೆಕ್ ಒಳಹರಿವು ಇದೆ, ಡ್ಯಾಂನಿಂದ 2350 ಕ್ಯುಸೆಕ್ ಹೊರ ಹರಿವು ದಾಖಲಾಗಿದೆ.
ಹಾಸನದಲ್ಲಿರುವ ಹೇಮಾವತಿ ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. ಗುರುವಾರ ಜಲಾಶಯದಲ್ಲಿ 889.85 ಮೀಟರ್ ನೀರಿದೆ. 3600 ಕ್ಯುಸೆಕ್ ಒಳಹರಿವು ಮತ್ತು 4725 ಕ್ಯುಸೆಕ್ ಹೊರ ಹರಿವು ಇದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ
ಕಬಿನಿ ಜಲಾಶಯದ ಗುರುವಾರದ ನೀರಿನ ಮಟ್ಟ 695.91 ಮೀಟರ್. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್ ಆಗಿದೆ. ಜಲಾಶಯಕ್ಕೆ 4608 ಕ್ಯುಸೆಕ್ ಒಳಹರಿವು ದಾಖಲಾಗಿದೆ. 4488 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತದೆ.
ಕೆಆರ್‌ಎಸ್ ಜಲಾಶಯದ ಗುರುವಾರದ ನೀರಿನ ಮಟ್ಟ 36.58 ಮೀಟರ್. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಜಲಾಶಯಕ್ಕೆ ಒಳಹರಿವು 3367 ಕ್ಯುಸೆಕ್ ಮತ್ತು ಹೊರ ಹರಿವು 5545 ಕ್ಯುಸೆಕ್ ಆಗಿದೆ.
ಭದ್ರಾ ಜಲಾಶಯದ ಗುರುವಾರದ ನೀರಿನ ಮಟ್ಟ 657.41 ಮೀಟರ್ ಆಗಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 5064 ಕ್ಯುಸೆಕ್ ಹಾಗೂ ಹೊರಹರಿವು 5064 ಕ್ಯುಸೆಕ್.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ ನೀರಿನ ಮಟ್ಟ
ತುಂಗಭದ್ರಾ ಜಲಾಶಯಕ್ಕೆ 14,257 ಕ್ಯುಸೆಕ್ ಒಳಹರಿವು ಇದೆ. ಗುರುವಾರದ ನೀರಿನ ಮಟ್ಟ 497.71 ಮೀಟರ್. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಹೊಸಪೇಟೆಯಲ್ಲಿರುವ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಸಂಜೆ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್ ಆಗಿದೆ. ಗುರುವಾರದ ನೀರಿನ ಮಟ್ಟ 519.55 ಮೀಟರ್ ಆಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಸ್ಟ್ 21ರಂದು ತುಂಬಿರುವ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಡ್ಯಾಂಗೆ ಒಳಹರಿವು 28,467 ಕ್ಯುಸೆಕ್, ಹೊರ ಹರಿವು 32,530 ಕ್ಯುಸೆಕ್.
ನಾರಾಯಣಪುರ ಜಲಾಶಯದ ಗುರುವಾರದ ನೀರಿನ ಮಟ್ಟ 491.93 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಪ್ರಸ್ತುತ ಜಲಾಶಯಕ್ಕೆ 31,786 ಕ್ಯುಸೆಕ್ ಒಳಹರಿವು ಮತ್ತು 32,850 ಕ್ಯುಸೆಕ್ ಹೊರ ಹರಿವು ಇದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದ ಗುರುವಾರದ ನೀರಿನ ಮಟ್ಟ 554.63 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್. 4279 ಕ್ಯುಸೆಕ್ ಒಳ ಹರಿವು ಇದೆ, ಹೊರ ಹರಿವು 4279 ಕ್ಯುಸೆಕ್.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಗುರುವಾರದ ನೀರಿನ ಮಟ್ಟ 662.91 ಮೀಟರ್. ಜಲಾಶಯಕ್ಕೆ ಒಳಹರಿವು 4666 ಕ್ಯುಸೆಕ್ ಇದ್ದು, ಡ್ಯಾಂ ನಿಂದ ಹೊರ ಹರಿವು 4666 ಕ್ಯುಸೆಕ್.
ಮಲಪ್ರಭಾ ಜಲಾಶಯದ ಗುರುವಾರದ ನೀರಿನ ಮಟ್ಟ 633.25 ಮೀಟರ್. ಪೂರ್ಣ ಮಟ್ಟ 633.80 ಮೀಟರ್. ಜಲಾಶಯಕ್ಕೆ ಒಳಹರಿವು 2445 ಕ್ಯುಸೆಕ್, ಹೊರ ಹರಿವು 894 ಕ್ಯುಸೆಕ್.












Click it and Unblock the Notifications