ಕಡಿಮೆಯಾದ ಮಳೆ; ಕರ್ನಾಟಕದ ಜಲಾಶಯದ ನೀರಿನ ಮಟ್ಟ
ಬೆಂಗಳೂರು, ಆಗಸ್ಟ್ 02; ಮಲೆನಾಡು, ಕರಾವಳಿ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಜುಲೈ ತಿಂಗಳ 15 ದಿನಗಳ ಕಾಲ ಅಬ್ಬರಿಸಿದ್ದ ಮಳೆ ಭಾರೀ ನಷ್ಟವನ್ನು ಉಂಟು ಮಾಡಿದೆ. ಪ್ರವಾಹ ಪರಿಸ್ಥಿತಿಗೆ ಸಿಲುಕಿದ ಜನರು ಹೊಸದಾಗಿ ಜೀವನ ಕಟ್ಟಿಕೊಳ್ಳಲು ಇನ್ನೂ ಪರದಾಡುತ್ತಿದ್ದಾರೆ.
ವಿವಿಧ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಜಲಾಶಯಗಳ ಒಳಹರಿವಿನ ಪ್ರಮಾಣವೂ ಕಡಿಮೆಯಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ಬಂದಿವೆ. ಆಗಸ್ಟ್‌ನಲ್ಲಿ ಮಳೆ ಸುರಿದರೆ ಭರ್ತಿಯಾಗಲಿವೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ಜಲಾಶಯದ ಇಂದಿನ ನೀರಿನಮಟ್ಟ 1807.20 ಅಡಿ ಆಗಿದೆ. ಜಲಾಶಯದ ಗರಿಷ್ಠ ಮಟ್ಟ 1,819 ಅಡಿಗಳು.
ಬೆಂಗಳೂರು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕೆಆರ್‌ಎಸ್ ಜಲಾಶಯ ಇನ್ನೂ ಭರ್ತಿಯಾಗಿಲ್ಲ. ಸೋಮವಾರ ಜಲಾಶಯದಲ್ಲಿ 35.12 ಮೀಟರ್ ನೀರಿನ ಸಂಗ್ರಹವಿದೆ. ಗರಿಷ್ಠ ಮಟ್ಟ 38.04 ಮೀಟರ್ ಆಗಿದೆ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 544.44 ಮೀಟರ್. ಇಂದಿನ ನೀರಿನ ಮಟ್ಟ 550.99 ಮೀಟರ್ ಆಗಿದೆ. ಜಲಾಶಯಕ್ಕೆ 14,481 ಕ್ಯುಸೆಕ್ ಒಳಹರಿವು ಇದೆ. ಹೊರ ಹರಿವು 4662 ಕ್ಯುಸೆಕ್ ಆಗಿದೆ.
ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ 870.31 ಮೀಟರ್. ಪೂರ್ಣ ಮಟ್ಟ871.38 ಮೀಟರ್ ಆಗಿದೆ. ಇಂದಿನ ಒಳಹರಿವು 3618 ಕ್ಯುಸೆಕ್, ಹೊರ ಹರಿವು 3425 ಕ್ಯುಸೆಕ್ ಆಗಿದೆ.
ಹೇಮಾವತಿ ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. ಇಂದಿನ ನೀರಿನ ಮಟ್ಟ 889.77 ಮೀಟರ್ ಆಗಿದೆ. ಜಲಾಶಯಕ್ಕೆ 6332 ಕ್ಯುಸೆಕ್ ಒಳಹರಿವು ಇದೆ. ಹೊರ ಹರಿವು 5525 ಕ್ಯುಸೆಕ್ ಆಗಿದೆ.

ಕಬಿನಿ, ಕೆಆರ್‌ಎಸ್, ಭದ್ರಾ
ಕಬಿನಿ ಜಲಾಶಯದ ಪೂರ್ಣ ಮಟ್ಟ 696.13 ಮೀಟರ್. ಇಂದಿನ ನೀರಿನ ಮಟ್ಟ 694.89 ಮೀಟರ್ ಆಗಿದೆ. ಜಲಾಶಕ್ಕೆ 5201 ಕ್ಯುಸೆಕ್ ನೀರಿನ ಒಳಹರಿವು ಇದೆ. 3906 ಕ್ಯುಸೆಕ್ ನೀರಿನ ಹೊರಹರಿವು ಇದೆ.
ಕೆಆರ್‌ಎಸ್ ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಇಂದಿನ ನೀರಿನ ಮಟ್ಟ 35.12 ಮೀಟರ್. ಜಲಾಶಯಕ್ಕೆ 9676 ಕ್ಯುಸೆಕ್ ಒಳಹರಿವು ಇದೆ. ಹೊರ ಹರಿವು 5292 ಕ್ಯುಸೆಕ್.
ಭದ್ರಾ ಜಲಾಶಯದ ಪೂರ್ಣ ಮಟ್ಟ 657.73 ಮೀಟರ್. ಇಂದಿನ ನೀರಿನ ಮಟ್ಟ 656.72 ಮೀಟರ್ ಆಗಿದೆ. ಜಲಾಶಯಕ್ಕೆ 7854 ಕ್ಯುಸೆಕ್ ಒಳಹರಿವು ಇದೆ. 3143 ಕ್ಯುಸೆಕ್ ಹೊರಹರಿವು ಇದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ತುಂಗಭದ್ರಾ ಜಲಾಶಯದ ನೀರಿನ ಮಟ್ಟ 497.71 ಮೀಟರ್ ಆಗಿದೆ. ಇಂದಿನ ನೀರಿನ ಮಟ್ಟ 497.43 ಮೀಟರ್. ಜಲಾಶಯಕ್ಕೆ 37,462 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 36,571 ಕ್ಯುಸೆಕ್ ಆಗಿದೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಇಂದಿನ ನೀರಿನ ಮಟ್ಟ 517.45 ಮೀಟರ್ ಆಗಿದೆ. ಜಲಾಶಯಕ್ಕೆ 3,45,671 ಕ್ಯುಸೆಕ್ ಒಳಹರಿವು ಇದೆ. ಹೊರ ಹರಿವು 2,73,253 ಕ್ಯುಸೆಕ್ ಆಗಿದೆ.
ನಾರಾಯಣಪುರ ಜಲಾಶಯದ ಪೂರ್ಣ ಮಟ್ಟ 492.25 ಮೀಟರ್. ಇಂದಿನ ನೀರಿನ ಮಟ್ಟ 490.22 ಮೀಟರ್ ಆಗಿದೆ. 309258 ಕ್ಯುಸೆಕ್ ಒಳಹರಿವು ಜಲಾಶಯಕ್ಕೆ ಇದೆ. ಹೊರ ಹರಿವು 280514 ಕ್ಯುಸೆಕ್ ಆಗಿದೆ.

ಸೂಪಾ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದ ಪೂರ್ಣ ಮಟ್ಟ 564.00 ಮೀಟರ್. ಇಂದಿನ ನೀರಿನ ಮಟ್ಟ 552.30 ಮೀಟರ್ ಆಗಿದೆ. ಜಲಾಶಯಕ್ಕೆ 14,017 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 2584 ಕ್ಯುಸೆಕ್
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ662.91 ಮೀಟರ್. ಇಂದಿನ ನೀರಿನ ಮಟ್ಟ 662.22 ಮೀಟರ್ ಆಗಿದೆ. ಒಳಹರಿವು 10258 ಕ್ಯುಸೆಕ್ ಆಗಿದೆ. ಹೊರ ಹರಿವು 15,493 ಕ್ಯುಸೆಕ್
ಮಲಪ್ರಭಾ ಜಲಾಶಯದ ಪೂರ್ಣ ಮಟ್ಟ 633.80 ಮೀಟರ್ ಆಗಿದೆ. ಇಂದಿನ ನೀರಿನ ಮಟ್ಟ 632.49 ಮೀಟರ್ ಆಗಿದೆ. ಒಳಹರಿವು 4692 ಕ್ಯುಸೆಕ್, ಹೊರಹರಿವು 1694 ಕ್ಯುಸೆಕ್ ಆಗಿದೆ.












Click it and Unblock the Notifications