ಕೆಆರ್‌ಎಸ್ ಭರ್ತಿಗೆ 4 ಅಡಿಗಳು ಬಾಕಿ; ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಆಗಸ್ಟ್ 23; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 26ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ ತುಂತುರು ಮಳೆಯಾಗುತ್ತಿದೆ.

ಶ್ರೀಲಂಕಾದ ಕರಾವಳಿ ಭಾಗದಲ್ಲಿ ಸಮುದ್ರದ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿದೆ. ಆದ್ದರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಕಲಬುರಗಿಯಲ್ಲಿ 10, ಕೊಳ್ಳೇಗಾಲ 9, ಚಿಂಚೋಳಿ 5 ಸೆಂ. ಮೀ. ಮಳೆಯಾಗಿದೆ. ವಿವಿಧ ಜಿಲ್ಲೆಗಳಲ್ಲಿ ಸರಿಯಾಗಿ ಬಿಸಿಲು ಬಾರದೇ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ ವಿವಿಧ ಜಲಾಶಯಗಳ ನೀರಿನ ಮಟ್ಟ ಚಿತ್ರಗಳಲ್ಲಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಸೋಮವಾರದ ನೀರಿನ ಮಟ್ಟ 552.47 ಮೀಟರ್. ಡ್ಯಾಂಗೆ 5060 ಕ್ಯುಸೆಕ್ ನೀರು ಹರಿದು ಬರುತ್ತಿದೆ. 4867 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಸೋಮವಾರದ ನೀರಿನ ಮಟ್ಟ 871 ಮೀಟರ್ ಆಗಿದೆ. ಜಲಾಶಯಕ್ಕೆ 2160 ಕ್ಯುಸೆಕ್ ಒಳಹರಿವು ಇದೆ, ಡ್ಯಾಂನಿಂದ 1850 ಕ್ಯುಸೆಕ್ ಹೊರ ಹರಿವು ಇದೆ.

ಹೇಮಾವತಿ ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. ಸೋಮವಾರ ಜಲಾಶಯದಲ್ಲಿ 889.67 ಮೀಟರ್ ನೀರಿದೆ. ಡ್ಯಾಂಗೆ 2590 ಕ್ಯುಸೆಕ್ ಒಳಹರಿವು ಇದ್ದು, 4895 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಕೆಆರ್‌ಎಸ್, ಕಬಿನಿ, ಭದ್ರಾ

ಕೆಆರ್‌ಎಸ್, ಕಬಿನಿ, ಭದ್ರಾ

ಕಬಿನಿ ಜಲಾಶಯದ ಸೋಮವಾರದ ನೀರಿನ ಮಟ್ಟ 695.88 ಮೀಟರ್. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯದ ಒಳಹರಿವು 2870 ಕ್ಯುಸೆಕ್ ಮತ್ತು ಹೊರ ಹರಿವು 2750 ಕ್ಯುಸೆಕ್.

ಕೆಆರ್‌ಎಸ್ ಜಲಾಶಯದಲ್ಲಿ ಸೋಮವಾರ 36.63 ಮೀಟರ್ ನೀರಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 5723 ಕ್ಯುಸೆಕ್ ಮತ್ತು ಹೊರ ಹರಿವು 5545 ಕ್ಯುಸೆಕ್ ಆಗಿದೆ.

ಭದ್ರಾ ಜಲಾಶಯದ ಸೋಮವಾರದ ನೀರಿನ ಮಟ್ಟ 657.44 ಮೀಟರ್ ಆಗಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 4740 ಕ್ಯುಸೆಕ್ ಹಾಗೂ ಹೊರಹರಿವು 3837 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ ಜಲಾಶಯದ ಸೋಮವಾರದ ನೀರಿನ ಮಟ್ಟ 497.71 ಮೀಟರ್ ಆಗಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಹೊಸಪೇಟೆಯಲ್ಲಿರುವ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಶುಕ್ರವಾರ ಜಲಾಶಯಕ್ಕೆ ಭೇಟಿ ನೀಡಿದ್ದರು.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಸೋಮವಾರದ ನೀರಿನ ಮಟ್ಟ 519.57 ಮೀಟರ್. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭರ್ತಿಯಾಗಿರುವ ಡ್ಯಾಂಗೆ ಬಾಗಿನ ಅರ್ಪಿಸಿದರು.

ನಾರಾಯಣಪುರ ಜಲಾಶಯದ ಸೋಮವಾರದ ನೀರಿನ ಮಟ್ಟ 491.98 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಜಲಾಶಯಕ್ಕೆ 16265 ಕ್ಯುಸೆಕ್ ಒಳಹರಿವು ಮತ್ತು 13,070 ಕ್ಯುಸೆಕ್ ಹೊರ ಹರಿವು ಇದೆ.

ಸೂಪ, ಘಟಪ್ರಭಾ, ಮಲಪ್ರಭಾ

ಸೂಪ, ಘಟಪ್ರಭಾ, ಮಲಪ್ರಭಾ

ಸೂಪಾ ಜಲಾಶಯದ ಸೋಮವಾರದ ನೀರಿನ ಮಟ್ಟ 554.74 ಮೀಟರ್. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಡ್ಯಾಂಗೆ 3171 ಕ್ಯುಸೆಕ್ ಒಳ ಹರಿವು ಇದ್ದು, ಹೊರ ಹರಿವು 1018 ಕ್ಯುಸೆಕ್ ಆಗಿದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಸೋಮವಾರದ ನೀರಿನ ಮಟ್ಟ 662.91 ಮೀಟರ್. ಜಲಾಶಯಕ್ಕೆ ಒಳಹರಿವು 1932 ಕ್ಯುಸೆಕ್ ಇದ್ದು, ಹೊರ ಹರಿವು 1932 ಕ್ಯುಸೆಕ್ ಆಗಿದೆ.

ಮಲಪ್ರಭಾ ಜಲಾಶಯದ ಸೋಮವಾರದ ನೀರಿನ ಮಟ್ಟ 633.34 ಮೀಟರ್. ಪೂರ್ಣ ಮಟ್ಟ 633.80 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 494 ಕ್ಯುಸೆಕ್, ಹೊರ ಹರಿವು 494 ಕ್ಯುಸೆಕ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+