ಕರ್ನಾಟಕದಲ್ಲಿ ಮತ್ತೆ ಮಳೆ ಮುನ್ಸೂಚನೆ ; ಡ್ಯಾಂ ನೀರಿನ ಮಟ್ಟ
ಬೆಂಗಳೂರು, ಡಿಸೆಂಬರ್ 13; ಬೆಂಗಳೂರು ಸೇರಿದಂತೆ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಮಳೆಯಾಗುತ್ತಿದ್ದು, ಡಿಸೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 15ರ ತನಕ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಸೋಮವಾರ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ತಣ್ಣನೆಯ ಗಾಳಿ ಬೀಸುತ್ತಿದ್ದು, ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಶಿವಮೊಗ್ಗ, ಮೈಸೂರು,ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ. ಕಳೆದ ಎರಡು ವಾರದಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ವ್ಯಾಪ್ತಿಯ ಉದ್ದನೂರು ಬಳಿಯ ಹುಬ್ಬೆಹುಣಸೆ ಡ್ಯಾಂ ಹಿಂಗಾರು ಮಳೆಗೆ ಭರ್ತಿ ಆಗಿದೆ. ನಾಲ್ಕೈದು ವರ್ಷಗಳ ಬಳಿಕ ಡ್ಯಾಂ ಭರ್ತಿಯಾಗಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲುವೆಗಳನ್ನು ದುರಸ್ತಿ ಮಾಡದ ಕಾರಣದಿಂದ ಸಮರ್ಪಕವಾಗಿ ನೀರು ಹರಿಯದೆ ರೈತರು ಹಿಡಿಶಾಪ ಹಾಕುತ್ತಿದ್ದಾರೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಲಿಂಗನಮಕ್ಕಿ ಜಲಾಶಯದ ಸೋಮವಾರದ ನೀರಿನ ಮಟ್ಟ 551.90 ಮೀಟರ್. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು 1083 ಕ್ಯುಸೆಕ್. ಡ್ಯಾಂನಿಂದ ಹೊರ ಹರಿವು 6725 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಸೋಮವಾರ ಜಲಾಶಯದಲ್ಲಿ 869.98 ಮೀಟರ್ ನೀರಿನ ಸಂಗ್ರಹವಿದೆ. 74 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 675 ಕ್ಯುಸೆಕ್ ಆಗಿದೆ.
ಹೇಮಾವತಿ ಜಲಾಶಯದ ಸೋಮವಾರದ ನೀರಿನ ಮಟ್ಟ 887.85 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 1522 ಕ್ಯುಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಹೊರ ಹರಿವು 2650 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ
ಕಬಿನಿ ಜಲಾಶಯದಲ್ಲಿ ಸೋಮವಾರ 696.01 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 705 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 6034 ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಈಗಾಗಲೇ ಭರ್ತಿಯಾಗಿದೆ. ಸೋಮವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 6245 ಕ್ಯುಸೆಕ್ ಮತ್ತು ಹೊರ ಹರಿವು 6034 ಕ್ಯುಸೆಕ್.
ಭದ್ರಾ ಜಲಾಶಯದಲ್ಲಿ ಸೋಮವಾರ 657.73 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 1057 ಕ್ಯುಸೆಕ್ ಆಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಸೋಮವಾರ ಡ್ಯಾಂನಲ್ಲಿ 497.71 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 5474 ಕ್ಯುಸೆಕ್ ನೀರು ಹರಿದು ಬರುತ್ತಿದೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಸೋಮವಾರ ಜಲಾಶಯದ ನೀರಿನ ಮಟ್ಟ 519.36 ಮೀಟರ್ ಆಗಿದೆ. ಒಳ ಹರಿವು 9277 ಕ್ಯುಸೆಕ್, ಹೊರ ಹರಿವು 1453 ಕ್ಯುಸೆಕ್ ಆಗಿದೆ.
ನಾರಾಯಣಪುರ ಜಲಾಶಯದ ಸೋಮವಾರದ ನೀರಿನ ಮಟ್ಟ 491.50 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 354 ಕ್ಯುಸೆಕ್ ಆಗಿದೆ. ಹೊರ ಹರಿವು 7937 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದಲ್ಲಿ ಸೋಮವಾರ 554.04 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯದ ಹೊರ ಹರಿವು 2612 ಕ್ಯುಸೆಕ್ ಆಗಿದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಸೋಮವಾರ ಜಲಾಶಯದಲ್ಲಿ 660.22 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 172 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಸೋಮವಾರ 633.08 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಒಳಹರಿವು ಕ್ಯುಸೆಕ್ 232 ಕ್ಯುಸೆಕ್, ಹೊರ ಹರಿವು 1019 ಕ್ಯುಸೆಕ್ ಆಗಿದೆ.












Click it and Unblock the Notifications