ಡಿಸೆಂಬರ್ 16; ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಡಿಸೆಂಬರ್ 16; ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗುರುವಾರದಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಸಹ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ ಕೊಡಲಾಗಿದೆ.
ಕಳೆದ ವಾರದಿಂದಲೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.
ಕರ್ನಾಟಕ ಮಾತ್ರವಲ್ಲ ಆಂಧ್ರ ಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಡಿಸೆಂಬರ್ 17ರಿಂದ ಗುಜರಾತ್, ರಾಜಸ್ಥಾನ, ವಿಜೋರಾಂ, ತ್ರಿಪುರ, ಪುದುಚೇರಿ, ಕಾರೈಕಲ್‌ನಲ್ಲಿಯೂ ಮಳೆಯಾಗಲಿದೆ. ಕರ್ನಾಟಕದ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ...

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಲಿಂಗನಮಕ್ಕಿ ಜಲಾಶಯದ ಗುರುವಾರದ ನೀರಿನ ಮಟ್ಟ 551.77 ಮೀಟರ್. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು 282 ಕ್ಯುಸೆಕ್. ಡ್ಯಾಂನಿಂದ ಹೊರ ಹರಿವು 5924 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಗುರುವಾರ ಜಲಾಶಯದಲ್ಲಿ 869.84 ಮೀಟರ್ ನೀರಿನ ಸಂಗ್ರಹವಿದೆ. 51 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 600 ಕ್ಯುಸೆಕ್ ಆಗಿದೆ.
ಹೇಮಾವತಿ ಜಲಾಶಯದ ಗುರುವಾರದ ನೀರಿನ ಮಟ್ಟ 887.69 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 482 ಕ್ಯುಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಹೊರ ಹರಿವು 2550 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ
ಕಬಿನಿ ಜಲಾಶಯದಲ್ಲಿ ಗುರುವಾರ 695.99 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ ಕ್ಯುಸೆಕ್ ಒಳಹರಿವು 855 ಕ್ಯುಸೆಕ್, ಹೊರ ಹರಿವು 100 ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಈಗಾಗಲೇ ಭರ್ತಿಯಾಗಿದೆ. ಗುರುವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 4943 ಕ್ಯುಸೆಕ್ ಮತ್ತು ಹೊರ ಹರಿವು 4373 ಕ್ಯುಸೆಕ್.
ಭದ್ರಾ ಜಲಾಶಯದಲ್ಲಿ ಗುರುವಾರ 657.73 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 1057 ಕ್ಯುಸೆಕ್ ಆಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಗುರುವಾರ ಡ್ಯಾಂನಲ್ಲಿ 497.70 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 3593 ಕ್ಯುಸೆಕ್ ನೀರು ಹರಿದು ಬರುತ್ತಿದೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಗುರುವಾರ ಜಲಾಶಯದ ನೀರಿನ ಮಟ್ಟ 519.29 ಮೀಟರ್ ಆಗಿದೆ. ಒಳ ಹರಿವು 3550 ಕ್ಯುಸೆಕ್, ಹೊರ ಹರಿವು 9406 ಕ್ಯುಸೆಕ್ ಆಗಿದೆ.
ನಾರಾಯಣಪುರ ಜಲಾಶಯದ ಗುರುವಾರದ ನೀರಿನ ಮಟ್ಟ 491.44 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 8134 ಕ್ಯುಸೆಕ್ ಆಗಿದೆ. ಅಷ್ಟೇ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದಲ್ಲಿ ಗುರುವಾರ 553.74 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯದ ಒಳ ಹರಿವು 322 ಕ್ಯುಸೆಕ್, ಹೊರ ಹರಿವು 3698 ಕ್ಯುಸೆಕ್ ಆಗಿದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಗುರುವಾರ ಜಲಾಶಯದಲ್ಲಿ 660.22 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 170 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಗುರುವಾರ 633.04 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಹೊರ ಹರಿವು 769 ಕ್ಯುಸೆಕ್ ಆಗಿದೆ.












Click it and Unblock the Notifications