ಕರ್ನಾಟಕದಲ್ಲಿ ಭಾರೀ ಮಳೆ; ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಜುಲೈ 14; ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಬಿರುಸುಗೊಂಡಿದೆ. ತುಂಗ, ಭದ್ರಾ, ನೇತ್ರಾವತಿ ಸೇರಿದಂತೆ ವಿವಿಧ ನದಿಗಳಲ್ಲಿನ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.

ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿಯೂ ಮಳೆ ಜೋರಾಗಿದೆ. ಬೆಂಗಳೂರು ನಗರದಲ್ಲಿ ಮಂಗಳವಾರ ಬೆಳಗ್ಗೆಯಿಂದ ಮಳೆಯಾಗುತ್ತಿದೆ, ಬುಧವಾರವೂ ಉತ್ತಮ ಮಳೆಯಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ 7083, ಭದ್ರಾ ಜಲಾಶಯಕ್ಕೆ 3,339 ಮತ್ತು ಗಾಜನೂರಿನಲ್ಲಿರುವ ತುಂಗಾ ಜಲಾಶಯಕ್ಕೆ 4,842 ಕ್ಯುಸೆಕ್ ಒಳ ಹರಿವು ಇದೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ನೇತ್ರಾವತಿ, ಫಲ್ಗುಣಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೊಡಗು ಜಿಲ್ಲೆಯಲ್ಲಿಯೂ ಮಳೆ ಸುರಿಯುತ್ತಿದ್ದು, ಕಾವೇರಿ ಮತ್ತು ಉಪನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ.

ಹೇಮಾವತಿ ಜಲಾಶಯದ ನೀರಿನ ಮಟ್ಟ

ಹೇಮಾವತಿ ಜಲಾಶಯದ ನೀರಿನ ಮಟ್ಟ

ಹಾಸನದಲ್ಲಿರುವ ಹೇಮಾವತಿ ಜಲಾಶಯದ ಪೂರ್ಣಮಟ್ಟ 890.58 ಮೀಟರ್. ಇಂದಿನ ನೀರಿನ ಮಟ್ಟ 883.17. ಜಲಾಶಯಕ್ಕೆ 3634 ಕ್ಯುಸೆಕ್ ನೀರು ಹರಿದುಬರುತ್ತಿದೆ. ಲಿಂಗನಮಕ್ಕಿ, ಹಾರಂಗಿ ಜಲಾಶಯದ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಭದ್ರಾ ಜಲಾಶಯದ ನೀರಿನ ಮಟ್ಟ

ಭದ್ರಾ ಜಲಾಶಯದ ನೀರಿನ ಮಟ್ಟ

ಭದ್ರಾ ಜಲಾಶಯದ ಒಳಹರಿವು 7,646 ಕ್ಯುಸೆಕ್. ಜಲಾಶಯದ ಪೂರ್ಣ ಮಟ್ಟ 657.73 ಮೀಟರ್. ಇಂದಿನ ಮಟ್ಟ 648.99 ಮೀಟರ್. ಕಬಿನಿ, ಕೆಆರ್‌ಎಸ್ ಜಲಾಶಯಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಆಲಮಟ್ಟಿ ಜಲಾಶಯದ ನೀರಿನ ಮಟ್ಟ

ಆಲಮಟ್ಟಿ ಜಲಾಶಯದ ನೀರಿನ ಮಟ್ಟ

ಆಲಮಟ್ಟಿ ಜಲಾಶಯಕ್ಕೆ 24,727 ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಇಂದಿನ ನೀರಿನ ಮಟ್ಟ 517.53 ಮೀಟರ್. ನಾರಾಯಣಪುರ ಮತ್ತು ತುಂಗಭದ್ರಾ ಜಲಾಶಯದ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದ ಪೂರ್ಣ ಮಟ್ಟ 564.00 ಮೀಟರ್. ಇಂದಿನ ನೀರಿನ ಮಟ್ಟ 538.36 ಮೀಟರ್. ಜಲಾಶಯಕ್ಕೆ ಒಳಹರಿವು 16,282. ಘಟಪ್ರಭಾ ಮತ್ತು ಮಲಪ್ರಭಾ ಜಲಾಶಯಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+