ಪುಷ್ಯ ಮಳೆಯ ಆರ್ಭಟ; ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಜುಲೈ 21; ಕರ್ನಾಟಕದಲ್ಲಿ ಪುಷ್ಯ ಮಳೆಯ ಅಬ್ಬರ ಆರಂಭವಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಆಗಾಗ ಮಳೆಯಾಗುತ್ತಿದ್ದು, ತಂಪಾದ ವಾತಾವರಣವಿದೆ.

ಕೊಡಗು ಜಿಲ್ಲೆಯಲ್ಲಿ ಮಂಗಳವಾರದಿಂದ ಮಳೆ ಚುರುಕಾಗಿದ್ದು ಬುಧವಾರ ಬೆಳಗ್ಗೆಯಿಂದಲೇ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆ ಸುರಿಯುತ್ತಿದೆ. ಮಳೆಯ ಕಾರಣ ನದಿಗಳ ನೀರಿನ ಮಟ್ಟವೂ ಏರಿಕೆಯಾಗಿದೆ.

ಕಾವೇರಿ ನದಿ ಪಾತ್ರದ ಜಲಾಶಯಗಳು ಸೇರಿದಂತೆ ವಿವಿಧ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಜಲಾಶಯಗಳ ನೀರಿನ ಮಟ್ಟವೂ ಏರಿಕೆಯಾಗಿದೆ. ಈ ವಾರ ಮಳೆ ಮುಂದುವರೆದರೆ ಜಲಾಶಯಗಳು ಭರ್ತಿಯಾಗಲಿವೆ.

ಕೆಆರ್‌ಎಸ್‌ಗೆ 13892. ಲಿಂಗನಮಕ್ಕಿಗೆ 21274. ಭದ್ರಾ ಜಲಾಶಯಕ್ಕೆ 12355. ಆಲಮಟ್ಟಿಗೆ 39395 ಕ್ಯುಸೆಕ್ ಒಳಹರಿವು ಇದೆ. ಕರ್ನಾಟಕದ ವಿವಿಧ ಜಲಾಶಯಗಳ ನೀರಿನ ಮಟ್ಟದ ವಿವರಗಳು ಇಲ್ಲಿದೆ...

ಹೇಮಾವತಿ ಜಲಾಶಯದ ನೀರಿನ ಮಟ್ಟ

ಹೇಮಾವತಿ ಜಲಾಶಯದ ನೀರಿನ ಮಟ್ಟ

ಹಾಸನ ಜಿಲ್ಲೆಯ ಹೇಮಾವತಿ ಜಲಾಶಯಕ್ಕೆ 8582 ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ಪೂರ್ಣಮಟ್ಟ 890.58 ಮೀಟರ್. ಇಂದಿನ ಮಟ್ಟ 886.03 ಮೀಟರ್. ಲಿಂಗನಮಕ್ಕಿ, ಹಾರಂಗಿ ಜಲಾಶಯಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಭದ್ರಾ ಜಲಾಶಯದ ನೀರಿನ ಮಟ್ಟ

ಭದ್ರಾ ಜಲಾಶಯದ ನೀರಿನ ಮಟ್ಟ

ಭದ್ರಾ ಜಲಾಶಯಕ್ಕೆ 12355 ಕ್ಯುಸೆಕ್ ನೀರು ಹರಿದುಬರುತ್ತಿದೆ. ಜಲಾಶಯದ ಪೂರ್ಣ ಮಟ್ಟ 657.73 ಮೀಟರ್. ಇಂದಿನ ಮಟ್ಟ 651.83 ಮೀಟರ್. ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಆಲಮಟ್ಟಿಯಲ್ಲಿ ಎಷ್ಟು ನೀರಿದೆ?

ಆಲಮಟ್ಟಿಯಲ್ಲಿ ಎಷ್ಟು ನೀರಿದೆ?

ಆಲಮಟ್ಟಿ ಜಲಾಶಯಕ್ಕೆ 39395 ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ಪೂರ್ಣಮಟ್ಟ 519.60 ಮೀಟರ್. ಇಂದಿನ ನೀರಿನ ಮಟ್ಟ 517.77 ಮೀಟರ್ ಆಗಿದೆ. ತುಂಗಭದ್ರಾ ಮತ್ತು ನಾರಾಯಣಪುರ ಜಲಾಶಯದ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಸೂಪಾ ಜಲಾಶಯದಲ್ಲಿ ಎಷ್ಟಿದೆ ನೀರು?

ಸೂಪಾ ಜಲಾಶಯದಲ್ಲಿ ಎಷ್ಟಿದೆ ನೀರು?

ಸೂಪಾ ಜಲಾಶಯಕ್ಕೆ 13916 ಒಳಹರಿವು ಇದೆ. ಜಲಾಶಯದ ಪೂರ್ಣ ಮಟ್ಟ 564.00 ಮೀಟರ್. ಇಂದಿನ ನೀರಿನ ಮಟ್ಟ 542.60 ಮೀಟರ್ ಆಗಿದೆ. ಘಟಪ್ರಭಾ ಮತ್ತು ಮಲಪ್ರಭಾ ಜಲಾಶಯಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+