ಬಿಡುವು ನೀಡಿದ ಮಳೆ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ

ಬೆಂಗಳೂರು, ಜುಲೈ 22; ಮಲೆನಾಡು, ಕರಾವಳಿ, ಕೊಡಗು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪುಷ್ಯ ಮಳೆಯ ಅಬ್ಬರ ಜೋರಾಗಿದೆ. ಪರಿಣಾಮವಾಗಿ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಿದೆ. ಉತ್ತರ ಕನ್ನಡ ಜಿಲ್ಲೆಯ 2 ಅಣೆಕಟ್ಟುಗಳಿಂದ ನೀರು ಹೊರ ಬಿಡಲಾಗಿದೆ.

ಕದ್ರಾ, ಯಲ್ಲಾಪುರದ ಕೊಡಸಳ್ಳಿ ಜಲಾಶಯದಿಂದ ಎರಡು ಬಾರಿ ನೀರನ್ನು ಹೊರಕ್ಕೆ ಬಿಡಲಾಗಿದೆ. ಗರಿಷ್ಠ 34.50 ಮೀಟರ್ ಸಾಮರ್ಥ್ಯದ ಕದ್ರಾ ಜಲಾಶಯದಿಂದ 8 ಗೇಟ್‌ ಮೂಲಕ 42,175 ಕ್ಯೂಸೆಕ್ ನೀರನ್ನು ಕಾಳಿ ನದಿಗೆ ಬಿಡಲಾಗಿದೆ.

ಯಲ್ಲಾಪುರ ತಾಲೂಕಿನ ಕೊಡಸಳ್ಳಿ ಜಲಾಶಯದ ನೀರಿನ ಮಟ್ಟ 70.80 ಮೀಟರ್ ತಲುಪಿದೆ. ಒಳಹರಿವು 28,082 ಕ್ಯೂಸೆಕ್‌ಗೆ ಏರಿಕೆಯಾಗಿದೆ. 22,393 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಲಿಂಗನಮಕ್ಕಿ, ಭದ್ರಾ ಮತ್ತು ತುಂಗಾ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ. ಗಾಜನೂರು ಜಲಾಶಯ ಭರ್ತಿಯಾಗಿದ್ದು ಸುಮಾರು 31,325 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ. ಅಷ್ಟೇ ಪ್ರಮಾಣದ ನೀರಿನ್ನು ನದಿಗೆ ಬಿಡಲಾಗುತ್ತಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ನೀರಿನ ಮಟ್ಟ

ಕಾವೇರಿ ಕೊಳ್ಳದ ಹಾರಂಗಿ ಜಲಾಶಯಕ್ಕೆ 10378 ಕ್ಯುಸೆಕ್ ಒಳಹರಿವು ಇದೆ. 871.38 ಮೀಟರ್ ಎತ್ತರದ ಜಲಾಶಯದಲ್ಲಿ 870.33 ಮೀಟರ್ ನೀರಿನ ಸಂಗ್ರವಿದೆ. ಲಿಂಗನಮಕ್ಕಿ ಮತ್ತು ಹೇಮಾವತಿ ಜಲಾಶಯಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಭದ್ರಾ ಜಲಾಶಯದಲ್ಲಿ ಎಷ್ಟು ನೀರಿದೆ?

ಭದ್ರಾ ಜಲಾಶಯದಲ್ಲಿ ಎಷ್ಟು ನೀರಿದೆ?

ಭದ್ರಾ ಜಲಾಶಯಕ್ಕೆ 15668 ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ಪೂರ್ಣ ಮಟ್ಟ 657.73. ಇಂದಿನ ನೀರಿನ ಮಟ್ಟ 652.21 ಮೀಟರ್ ಆಗಿದೆ. ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.

ತುಂಗಭದ್ರಾ ಜಲಾಶಯದ ನೀರಿನ ಮಟ್ಟ

ತುಂಗಭದ್ರಾ ಜಲಾಶಯದ ನೀರಿನ ಮಟ್ಟ

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯಕ್ಕೆ 40862 ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ಪೂರ್ಣ ಮಟ್ಟ 497.71 ಮೀಟರ್. ಇಂದಿನ ನೀರಿನ ಮಟ್ಟ 494.19 ಮೀಟರ್ ಆಗಿದೆ. ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಘಟಪ್ರಭಾ ಜಲಾಶಯದಲ್ಲಿ ಎಷ್ಟು ನೀರಿದೆ?

ಘಟಪ್ರಭಾ ಜಲಾಶಯದಲ್ಲಿ ಎಷ್ಟು ನೀರಿದೆ?

ಘಟಪ್ರಭಾ ಜಲಾಶಯಕ್ಕೆ 17,467 ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ನೀರಿನ ಮಟ್ಟ 662.91 ಮೀಟರ್. ಇಂದಿನ ನೀರಿನ ಮಟ್ಟ 655.70 ಮೀಟರ್ ಆಗಿದೆ. ಮಲಪ್ರಭಾ ಮತ್ತು ಸೂಪಾ ಜಲಾಶಯಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+