ಪುಷ್ಯ ಮಳೆ ರೌದ್ರ ನರ್ತನ; ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಜುಲೈ 23; ಕರ್ನಾಟಕದಲ್ಲಿ ಪುಷ್ಯ ಮಳೆಯ ರೌದ್ರ ನರ್ತಕ್ಕೆ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವಾರದಿಂದ ಸುರಿಯುತ್ತಿರುವ ಮಳೆ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ನದಿಗಳು ಅಪಾಯಮಟ್ಟವನ್ನು ಮೀರಿ ಹರಿಯುತ್ತಿವೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಉತ್ತರ ಕನರ್ನಾಟಕ ಭಾಗದಲ್ಲಿಯೂ ಮಳೆ ಬಿರುಸಾಗಿದೆ.

ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್‌ಎನ್‌ಎಂಡಿಸಿ) ಜಲಾಶಯಗಳ ನೀರಿನ ಮಟ್ಟದ ಮಾಹಿತಿ ನೀಡಿದೆ. ಪ್ರತಿದಿನದಂತೆ ಪ್ರಮುಖ ಜಲಾಶಯಗಳಲ್ಲಿ ಎಷ್ಟು ನೀರಿದೆ ಎಂದು ವರದಿಯನ್ನು ಬಿಡುಗಡೆ ಮಾಡಿದೆ.

ಕಾವೇರಿ ಕೊಳ್ಳದ ಜಲಾಶಯಗಳು, ಉತ್ತರ ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ತುಂಗ, ಭದ್ರಾ, ಶರಾವತಿ ಸೇರಿದಂತೆ ಮಲೆನಾಡು ಭಾಗದ ನದಿಗಳು ಅಪಾಯಮಟ್ಟವನ್ನು ಮೀರಿ ಹರಿಯುತ್ತಿವೆ. ರಾಜ್ಯದ ಯಾವ ಜಲಾಶಯದಲ್ಲಿ ಎಷ್ಟು ನೀರಿದೆ? ಎಂಬ ಮಾಹಿತಿ ಇಲ್ಲಿದೆ....

ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ

ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯಕ್ಕೆ 73,431 ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ಪೂರ್ಣ ಮಟ್ಟ 554.44 ಮೀಟರ್. ಪ್ರಸ್ತುತ 548.35 ಮೀಟರ್ ನೀರಿನ ಸಂಗ್ರಹವಿದೆ. ಹಾರಂಗಿ ಮತ್ತು ಹೇಮಾವತಿ ನದಿಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ

20,796 ಕ್ಯುಸೆಕ್ ನೀರು ಕೆಆರ್‌ಎಸ್ ಜಲಾಶಯಕ್ಕೆ ಹರಿದು ಬರುತ್ತಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಇಂದಿನ ನೀರಿನ ಮಟ್ಟ 32.83 ಮೀಟರ್ ಆಗಿದೆ. ಕಬಿನಿ ಮತ್ತು ಭದ್ರಾ ಜಲಾಶಯದ ನೀರಿನ ಮಟ್ಟವೂ ಚಿತ್ರದಲ್ಲಿದೆ.

ತುಂಗಭದ್ರಾ ಡ್ಯಾಂನಲ್ಲಿ ಎಷ್ಟು ನೀರಿದೆ?

ತುಂಗಭದ್ರಾ ಡ್ಯಾಂನಲ್ಲಿ ಎಷ್ಟು ನೀರಿದೆ?

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯಕ್ಕೆ 44.320 ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ಪೂರ್ಣ ಮಟ್ಟ 497.71 ಮೀಟರ್ ಆಗಿದೆ. ಇಂದಿನ ನೀರಿನ ಮಟ್ಟ 494.56 ಮೀಟರ್ ಆಗಿದೆ. ಆಲಮಟ್ಟಿ, ನಾರಾಯಣಪುರ ಜಲಾಶಯದ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಮಲಪ್ರಭಾ ಡ್ಯಾಂ ಮಾಹಿತಿ

ಮಲಪ್ರಭಾ ಡ್ಯಾಂ ಮಾಹಿತಿ

ಮಲಪ್ರಭಾ ಜಲಾಶಯಕ್ಕೆ 33,677 ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ಪೂರ್ಣ ಮಟ್ಟ 633.80 ಮೀಟರ್. ಇಂದಿನ ಮಟ್ಟ 630.60 ಮೀಟರ್ ಆಗಿದೆ. ಘಟಪ್ರಭಾ ಮತ್ತು ಸೂಪಾ ಜಲಾಶಯದ ನೀರಿನ ಮಟ್ಟವೂ ಚಿತ್ರದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+