ಜುಲೈ 9ರಂದು ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಜುಲೈ 09; ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯಲು ಆರಂಭವಾಗಿದೆ. ಇದರಿಂದ ನದಿಗಳಲ್ಲಿನ ನೀರಿನ ಮಟ್ಟ ಪುನಃ ಏರಿಕೆಯಾಗಲಿದೆ. ಡ್ಯಾಂಗಳಿಗೆ ಒಳಹರಿವು ಹೆಚ್ಚಾಗಲಿದೆ.
ಕೊಡಗು ಜಿಲ್ಲೆ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಹೆಚ್ಚಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮಲೆನಾಡ ವ್ಯಾಪ್ತಿಯ ವಿವಿಧ ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ ಕೊಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ 9/7/2021ರ ಮಧ್ಯಾಹ್ನದಿಂದ 10/7/2021ರ ಬೆಳಗ್ಗೆ 8.30ರ ತನಕ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 11ರ ಬೆಳಗ್ಗೆ 8.30ರಿಂದ 13ರ ಬೆಳಗ್ಗೆ 8.30ರ ತನಕ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ತುಂಗಾ ಮತ್ತು ಭದ್ರಾ ಜಲಾಶಯದ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭದ್ರಾ ಕಾಡಾ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಭದ್ರಾ ಜಲಾಶಯದಿಂದ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ನೀರು ಹರಿಸಲು ರಾಜ್ಯ ಸರ್ಕಾರ ಆದೇಶ ನೀಡಿರುವ ಕುರಿತು ಚರ್ಚಿಸಿದರು.

ಲಿಂಗನಮಕ್ಕಿ ನೀರಿನ ಮಟ್ಟ
ಸಾಗರದಲ್ಲಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಜುಲೈ 9ರಂದು 1986 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಜಲಾಶಯದ ಪೂರ್ಣ ಮಟ್ಟ 554.44 ಮೀಟರ್. ಇಂದಿನ ಮಟ್ಟ 543.66 ಮೀಟರ್. ಹಾರಂಗಿ ಮತ್ತು ಹೇಮಾವತಿ ಡ್ಯಾಂಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಕೆಆರ್‌ಎಸ್ ಜಲಾಶಯ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಜಲಾಶಯದ ಒಳಹರಿವು 1792 ಕ್ಯುಸೆಕ್. 38.04 ಮೀಟರ್ ಎತ್ತರದ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 27.18 ಮೀಟರ್. ಕಬಿನಿ ಮತ್ತು ಭದ್ರಾ ಜಲಾಶಯಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.

ತುಂಗಭದ್ರಾ ನೀರಿನ ಮಟ್ಟ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಯದ ಒಳಹರಿವು 3,584 ಕ್ಯುಸೆಕ್. 497.71 ಮೀಟರ್ ಎತ್ತರದ ಜಲಾಶಯದಲ್ಲಿ 490.75 ಮೀಟರ್ ನೀರಿನ ಸಂಗ್ರಹವಿದೆ. ಆಲಮಟ್ಟಿ, ನಾರಾಯಣಪುರ ಜಲಾಶಯಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.
Recommended Video

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದ 1719 ಕ್ಯುಸೆಕ್. 564.00 ಮೀಟರ್ ಎತ್ತರದ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 537.72 ಮೀಟರ್. ಘಟಪ್ರಭಾ ಮತ್ತು ಮಲಪ್ರಭಾ ಡ್ಯಾಂಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.












Click it and Unblock the Notifications