ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು; ಜಲಾಶಯಗಳ ನೀರಿನ ಮಟ್ಟ ಹೀಗಿದೆ...
ಬೆಂಗಳೂರು, ಜೂನ್ 22: ರಾಜ್ಯದಲ್ಲಿ ಮುಂಗಾರು ಮಳೆ ತಗ್ಗಿದ್ದು, ಸೋಮವಾರದಿಂದ ಮಳೆ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಲಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಸಾಧಾರಣ ಮಳೆಯಾಗಲಿದೆ, ಜೂನ್ 21 ರಂದು ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತಾದರೂ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ.
ಶಿವಮೊಗ್ಗದ ಆಗುಂಬೆ, ಹುಲಿಕಲ್ ಪ್ರದೇಶದಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಿದೆ, 24 ತಾಸುಗಳ ಹಿಂದೆ ಲಿಂಗನಮಕ್ಕಿಗೆ 40,059 ಕ್ಯೂಸೆಕ್ ನೀರು ಹರಿದುಬರುತ್ತಿತ್ತು. ಈಗ ಕಡಿಮೆಯಾಗಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳಲ್ಲಿ ಜೂನ್ 22ರಂದು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ...

ಲಿಂಗನಮಕ್ಕಿ ನೀರಿನ ಮಟ್ಟ
ಲಿಂಗನ ಮಕ್ಕಿ ಜಲಾಶಯದಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 544.25 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 864.90ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 881.92 ಮೀಟರ್‌ನಷ್ಟಿದೆ.

ಕೆಆರ್‌ಎಸ್ ನೀರಿನ ಮಟ್ಟ ಎಷ್ಟಿದೆ?
ಕಬಿನಿ ಜಲಾಶಯದಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 693.72ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 28.79 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 647.52ರಷ್ಟಿದೆ.

ತುಂಗಭದ್ರಾ ಜಲಾಶಯದ ಮಟ್ಟ
ತುಂಗಭದ್ರಾ ಜಲಾಶಯದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 488.49 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದು, ಇಂದು 516.33 ಮೀಟರ್‌ನಷ್ಟಿದೆ. ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, ಸದ್ಯ 488.98 ಮೀಟರ್‌ನಷ್ಟು ನೀರಿದೆ.
Recommended Video

ಸೂಪಾ ಜಲಾಶಯ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 539.20ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 648.00ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 628.19 ನೀರು ಸಂಗ್ರಹವಾಗಿದೆ.












Click it and Unblock the Notifications