ರಾಜ್ಯದಲ್ಲಿ ತಗ್ಗಿದ ಮಳೆ; ಜಲಾಶಯದ ನೀರಿನ ಮಟ್ಟ ಹೀಗಿದೆ...

ಬೆಂಗಳೂರು, ಜೂನ್ 23: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿದ್ದು, ಬುಧವಾರ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆ ದಾಖಲಾಗಿದೆ.

ಕರಾವಳಿ ಪ್ರದೇಶಗಳಲ್ಲಿ ಮಳೆಯಬ್ಬರ ತಗ್ಗಿದೆ. ಆದರೆ ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಬೆಳಗಾವಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ ಹಾಗೂ ಮಹಾರಾಷ್ಟದಲ್ಲಿಯೂ ಮಳೆ ಕಡಿಮೆಯಾಗಿದ್ದು, ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 85,750 ಕ್ಯೂಸೆಕ್ ಹಾಗೂ ದೂಧ್‌ಗಂಗಾ ನದಿಯಿಂದ 28,828 ಕ್ಯೂಸೆಕ್ ಸೇರಿ ಒಟ್ಟು 1,12,578 ಕ್ಯೂಸೆಕ್ ನೀರು ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. ರಾಜ್ಯದ ಉಳಿದ ಪ್ರಮುಖ ಅಣೆಕಟ್ಟುಗಳಲ್ಲಿ ಜೂನ್ 23ರಂದು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ...

 ಹಾರಂಗಿಯಲ್ಲಿ ನೀರಿನ ಮಟ್ಟ ಎಷ್ಟಿದೆ?

ಹಾರಂಗಿಯಲ್ಲಿ ನೀರಿನ ಮಟ್ಟ ಎಷ್ಟಿದೆ?

ಲಿಂಗನಮಕ್ಕಿ ಜಲಾಶಯದಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 544.25 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 864.90ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 881.92 ಮೀಟರ್‌ನಷ್ಟಿದೆ.

 ಕೆಆರ್‌ಎಸ್ ನೀರಿನ ಮಟ್ಟ ...

ಕೆಆರ್‌ಎಸ್ ನೀರಿನ ಮಟ್ಟ ...

ಕಬಿನಿ ಜಲಾಶಯದಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 693.72ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 28.79 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 647.52ರಷ್ಟಿದೆ.

 ತುಂಗಭದ್ರಾ ಜಲಾಶಯದ ಮಟ್ಟ

ತುಂಗಭದ್ರಾ ಜಲಾಶಯದ ಮಟ್ಟ

ತುಂಗಭದ್ರಾ ಜಲಾಶಯದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 488.49 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದು, ಇಂದು 516.33 ಮೀಟರ್‌ನಷ್ಟಿದೆ. ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, ಸದ್ಯ 488.98 ಮೀಟರ್‌ನಷ್ಟು ನೀರಿದೆ.

 ಘಟಪ್ರಭಾ, ಮಲಪ್ರಭಾ ಜಲಾಶಯ ನೀರಿನ ಮಟ್ಟ

ಘಟಪ್ರಭಾ, ಮಲಪ್ರಭಾ ಜಲಾಶಯ ನೀರಿನ ಮಟ್ಟ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 539.20ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 648.00ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 628.19 ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+