ರಾಜ್ಯದಲ್ಲಿ ಕಡಿಮೆಯಾದ ಮಳೆ; ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

ಬೆಂಗಳೂರು, ಜೂನ್ 24: ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಳೆ ವಿರಾಮ ಪಡೆದುಕೊಂಡಿದೆ. ಕಳೆದ ಎರಡು ದಿನಗಳಿಂದ ಒಣಹವೆ ಕಾಣಿಸಿಕೊಂಡಿದೆ.

ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಮಾರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿಯೂ ಮಳೆ ಕಡಿಮೆಯಾಗಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳಲ್ಲಿ ಜೂನ್ 24ರಂದು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ...

 ಹಾರಂಗಿಯಲ್ಲಿ ನೀರಿನ ಮಟ್ಟ ಎಷ್ಟಿದೆ?

ಹಾರಂಗಿಯಲ್ಲಿ ನೀರಿನ ಮಟ್ಟ ಎಷ್ಟಿದೆ?

ಲಿಂಗನಮಕ್ಕಿ ಜಲಾಶಯದಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 544.22 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 865.26ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 882.18 ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯ ವಿವರ...

ಕಬಿನಿ ಜಲಾಶಯ ವಿವರ...

ಕಬಿನಿ ಜಲಾಶಯದಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 693.64ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 29.08 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 647.77ರಷ್ಟಿದೆ.

 ಆಲಮಟ್ಟಿ ಜಲಾಶಯದ ನೀರಿನ ಮಟ್ಟ

ಆಲಮಟ್ಟಿ ಜಲಾಶಯದ ನೀರಿನ ಮಟ್ಟ

ತುಂಗಭದ್ರಾ ಜಲಾಶಯದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 489.48 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದು, ಇಂದು 517.31 ಮೀಟರ್‌ನಷ್ಟಿದೆ. ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, ಸದ್ಯ 489.07 ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯದಲ್ಲಿ ಎಷ್ಟಿದೆ ನೀರು?

ಸೂಪಾ ಜಲಾಶಯದಲ್ಲಿ ಎಷ್ಟಿದೆ ನೀರು?

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 539.16ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 649.03ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 628.47 ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+