ತಗ್ಗಿದ ಮಳೆ; ರಾಜ್ಯದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಬೆಂಗಳೂರು, ಜೂನ್ 25: ರಾಜ್ಯದಲ್ಲಿ ಸದ್ಯಕ್ಕೆ ಮಳೆ ತಗ್ಗಿದ್ದು, ಜುಲೈ ಮೊದಲ ವಾರದವರೆಗೂ ದೇಶದೆಲ್ಲೆಡೆ ಮುಂಗಾರು ಚುರುಕು ಪಡೆಯುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಜೂನ್ 28ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ನಾಳೆಯಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಪ್ರಮುಖ ಅಣೆಕಟ್ಟುಗಳಲ್ಲಿ ಜೂನ್ 25ರಂದು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ...

ಹಾರಂಗಿಯಲ್ಲಿ ನೀರಿನ ಮಟ್ಟ ಎಷ್ಟಿದೆ?
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಿದ್ದು, ಇಂದಿನ ನೀರಿನ ಮಟ್ಟ 2839.35 ಅಡಿಗಳಾಗಿದೆ. ಶುಕ್ರವಾರ ನೀರಿನ ಒಳಹರಿವು 615 ಕ್ಯುಸೆಕ್ ಇದ್ದು, ಹೊರ ಹರಿವು 40 ಕ್ಯುಸೆಕ್ ಆಗಿದೆ. ನಾಲೆಗೆ 40 ಕ್ಯುಸೆಕ್ ನೀರು ಹರಿಬಿಡಲಾಗಿದೆ.

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ
ಕಬಿನಿ ಜಲಾಶಯದಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 693.59ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 29.08 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 647.85ರಷ್ಟಿದೆ.

ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ
ತುಂಗಭದ್ರಾ ಜಲಾಶಯದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 489.77 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದು, ಇಂದು 517.35 ಮೀಟರ್‌ನಷ್ಟಿದೆ. ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, ಸದ್ಯ 489.00 ಮೀಟರ್‌ನಷ್ಟು ನೀರಿದೆ.

ಮಲಪ್ರಭಾ, ಘಟಪ್ರಭಾ ನೀರಿನ ಮಟ್ಟ...
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 539.23ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 649.32ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 628.53 ನೀರು ಸಂಗ್ರಹವಾಗಿದೆ.












Click it and Unblock the Notifications