ಕರ್ನಾಟಕದಲ್ಲಿ ಮಳೆ; ಜಲಾಶಯಗಳಲ್ಲಿ ಎಷ್ಟು ನೀರಿದೆ?
ಬೆಂಗಳೂರು, ನವೆಂಬರ್ 11; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದಾಗಿ ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಾಗಿದೆ. ಡ್ಯಾಂಗಳು ಭರ್ತಿಯಾಗಿದ್ದು, ನೀರನ್ನು ಹೊರಬಿಡಲಾಗುತ್ತಿದೆ.
ವಾಯುಭಾರ ಕುಸಿತ ಗುರುವಾರ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿ ಕಡೆ ಬರಲಿದೆ. ಇದರಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನವೆಂಬರ್ 13ರ ತನಕ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ತನಕ ಭಾರೀ ಮಳೆಯ ಸೂಚನೆ ಇಲ್ಲ. ಆಗಾಗ ಸಾಧಾರಣ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಶೀತಗಾಳಿ ವಾತಾವರಣ ಮುಂದುವರೆದಿದ್ದು, ಗುರುವಾರ ಮುಂಜಾನೆಯಿಂದ ತುಂತುರು ಮಳೆಯಾಗುತ್ತಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿಯಂತೆ ಕೆಆರ್‌ಎಸ್‌ಗೆ 6,492, ತುಂಗಭದ್ರಾಕ್ಕೆ 8988, ಭದ್ರಾ ಜಲಾಶಯಕ್ಕೆ 3674 ಕ್ಯುಸೆಕ್ ಒಳಹರಿವು ಇದೆ. ರಾಜ್ಯದ ಬಹುತೇಕ ಜಲಾಶಯಗಳು ಮುಂಗಾರು ಹಂಗಾಮಿನಲ್ಲಿಯೇ ಭರ್ತಿಯಾಗಿದ್ದವು. ಕೆಆರ್‌ಎಸ್ ಡ್ಯಾಂ ಅಕ್ಟೋಬರ್‌ನಲ್ಲಿ ಭರ್ತಿಯಾಗಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಲಿಂಗನಮಕ್ಕಿ ಜಲಾಶಯದಲ್ಲಿ ಗುರುವಾರ 552.82 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 3078 ಕ್ಯುಸೆಕ್, ಹೊರ ಹರಿವು 6379 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಗುರುವಾರ ಜಲಾಶಯದಲ್ಲಿ 870.98 ಮೀಟರ್ ನೀರಿನ ಸಂಗ್ರಹವಿದೆ. 637 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1033 ಕ್ಯುಸೆಕ್.
ಹೇಮಾವತಿ ಜಲಾಶಯದ ಗುರುವಾರದ ನೀರಿನ ಮಟ್ಟ 886.60 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 1977 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 3550 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ
ಕಬಿನಿ ಜಲಾಶಯದಲ್ಲಿ ಗುರುವಾರ 696.10 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 1174 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 1650 ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ. ಗುರುವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 6492 ಕ್ಯುಸೆಕ್ ಮತ್ತು ಹೊರ ಹರಿವು 6283 ಕ್ಯುಸೆಕ್.
ಭದ್ರಾ ಜಲಾಶಯದಲ್ಲಿ ಗುರುವಾರ 657.52 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 3674 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಗುರುವಾರ ಡ್ಯಾಂನಲ್ಲಿ 497.55 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 8988 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 9878 ಕ್ಯುಸೆಕ್.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಗುರುವಾರದ ನೀರಿನ ಮಟ್ಟ 518.72 ಮೀಟರ್ ಆಗಿದೆ. ಹೊರ ಹರಿವು 1805 ಕ್ಯುಸೆಕ್ ಆಗಿದೆ.
ನಾರಾಯಣಪುರ ಜಲಾಶಯದ ಗುರುವಾರದ ನೀರಿನ ಮಟ್ಟ 491.12 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 1141 ಕ್ಯುಸೆಕ್ ಆಗಿದೆ. ಹೊರ ಹರಿವು 1141 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದಲ್ಲಿ ಗುರುವಾರ 555.67 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 576 ಕ್ಯುಸೆಕ್ ಒಳಹರಿವು ಇದೆ. 3200 ಕ್ಯುಸೆಕ್ ಹೊರ ಹರಿವು ಇದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಗುರುವಾರ ಜಲಾಶಯದಲ್ಲಿ 661.04 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 5320 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಗುರುವಾರ 633.03 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಹೊರ ಹರಿವು 2444 ಕ್ಯುಸೆಕ್.












Click it and Unblock the Notifications