ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; ನವೆಂಬರ್ 15ರಂದು ಡ್ಯಾಂಗಳ ನೀರಿನ ಮಟ್ಟ

|
Google Oneindia Kannada News

ಬೆಂಗಳೂರು, ನವೆಂಬರ್ 15; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ನವೆಂಬರ್ 17ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಲೇ ಇದೆ.

ಚಾಮರಾಜನಗರ ತಾಲೂಕಿನ ಅಟ್ಟುಗುಳಿಪುರ ಸಮೀಪ ಇರುವ ಸುವರ್ಣಾವತಿ ಜಲಾಶಯ 11 ವರ್ಷಗಳ ಬಳಿಕ ಭರ್ತಿಯಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ ಡ್ಯಾಂ ಭರ್ತಿಯಾಗಲು ಹಿಂಗಾರು ಮತ್ತು ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಮಳೆ ಕಾರಣವಾಗಿದೆ.

ಮುಂದಿನ 2 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಮುಂದಿನ 2 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ

ಕರ್ನಾಟಕದ ಕಬಿನಿ ಮತ್ತು ಕೆಆರ್‍ಎಸ್‍ ಜಲಾಶಯದಿಂದ ಹೆಚ್ಚಿನ ನೀರು ತಮಿಳುನಾಡಿಗೆ ಹರಿದು ಹೋಗುತ್ತಿರುವುದರಿಂದ ಮೆಟ್ಟೂರು ಜಲಾಶಯ ಬಹುತೇಕ ಭರ್ತಿಯಾಗಿದೆ. 120 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಈಗ 119 ಅಡಿಗಳಷ್ಟು ನೀರಿನ ಸಂಗ್ರಹವಿದೆ. ಇದರಿಂದಾಗಿ ಈ ವರ್ಷ ಕಾವೇರಿ ವಿವಾದ ತಣ್ಣಗಾಗಿದೆ.

ಚಾಮರಾಜನಗರದಲ್ಲಿ ಹಿಂಗಾರು ಮಳೆಗೆ ಜಲಾಶಯಗಳು ಭರ್ತಿಚಾಮರಾಜನಗರದಲ್ಲಿ ಹಿಂಗಾರು ಮಳೆಗೆ ಜಲಾಶಯಗಳು ಭರ್ತಿ

ಭಾನುವಾರ ಮಂಡ್ಯದ ಪಾಂಡವಪುರದಲ್ಲಿ 19, ಧರ್ಮಸ್ಥದಲ್ಲಿ 14, ಶ್ರೀರಂಗಪಟ್ಟಣದಲ್ಲಿ 9, ಮೈಸೂರು 5 ಸೆಂ. ಮೀ. ಮಳೆಯಾಗಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 17ರ ತನಕ ಮಳೆ ಮುಂದುವರೆಯಲಿದೆ.

ಮಂಡ್ಯ ವಿಶೇಷ; ಸಂಗಮದ ದೃಶ್ಯ ಕಣ್ತುಂಬಿಕೊಳ್ಳಲು ಇದು ಸಕಾಲ! ಮಂಡ್ಯ ವಿಶೇಷ; ಸಂಗಮದ ದೃಶ್ಯ ಕಣ್ತುಂಬಿಕೊಳ್ಳಲು ಇದು ಸಕಾಲ!

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಸೋಮವಾರದ ನೀರಿನ ಮಟ್ಟ 552.73 ಮೀಟರ್ ಆಗಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು 4610 ಕ್ಯುಸೆಕ್ ಆಗಿದೆ. ಡ್ಯಾಂನಿಂದ ಹೊರ ಹರಿವು 3332 ಕ್ಯುಸೆಕ್ ದಾಖಲಾಗಿದೆ.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಸೋಮವಾರ ಜಲಾಶಯದಲ್ಲಿ 870.97 ಮೀಟರ್ ನೀರಿನ ಸಂಗ್ರಹವಿದೆ. 1690 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 950 ಕ್ಯುಸೆಕ್ ಆಗಿದೆ.

ಹೇಮಾವತಿ ಜಲಾಶಯದ ಸೋಮವಾರದ ನೀರಿನ ಮಟ್ಟ 886.53 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 5165 ಕ್ಯುಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಹೊರ ಹರಿವು 2760 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ

ಕೆಆರ್‌ಎಸ್, ಕಬಿನಿ, ಭದ್ರಾ

ಕಬಿನಿ ಜಲಾಶಯದಲ್ಲಿ ಸೋಮವಾರ 696.12 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 2478 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 1525 ಕ್ಯುಸೆಕ್ ಆಗಿದೆ.

ಮಂಡ್ಯದಲ್ಲಿರುವ ಕೆಆರ್‌ಎಸ್ ಭರ್ತಿಯಾಗಿದೆ. ಸೋಮವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 7971 ಕ್ಯುಸೆಕ್ ಮತ್ತು ಹೊರ ಹರಿವು 7761 ಕ್ಯುಸೆಕ್.

ಭದ್ರಾ ಜಲಾಶಯದಲ್ಲಿ ಸೋಮವಾರ 657.57 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 5533 ಕ್ಯುಸೆಕ್ ಆಗಿದೆ. ಹೊರ ಹರಿವು 3114 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಸೋಮವಾರ ಡ್ಯಾಂನಲ್ಲಿ 497.48 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 5967 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 9084 ಕ್ಯುಸೆಕ್.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಸೋಮವಾರದ ನೀರಿನ ಮಟ್ಟ 518.51 ಮೀಟರ್ ಆಗಿದೆ. ಹೊರ ಹರಿವು 15914 ಕ್ಯುಸೆಕ್ ಆಗಿದೆ.

ನಾರಾಯಣಪುರ ಜಲಾಶಯದ ಸೋಮವಾರದ ನೀರಿನ ಮಟ್ಟ 491.40 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 12636 ಕ್ಯುಸೆಕ್ ಆಗಿದೆ. ಹೊರ ಹರಿವು 7272 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ

ಸೂಪ, ಘಟಪ್ರಭಾ, ಮಲಪ್ರಭಾ

ಸೂಪಾ ಜಲಾಶಯದಲ್ಲಿ ಸೋಮವಾರ 555.43 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯದ ಹೊರ ಹರಿವು 2322 ಕ್ಯುಸೆಕ್.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಸೋಮವಾರ ಜಲಾಶಯದಲ್ಲಿ 660.59 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 2593 ಕ್ಯುಸೆಕ್ ಆಗಿದೆ.

ಮಲಪ್ರಭಾ ಜಲಾಶಯದಲ್ಲಿ ಸೋಮವಾರ 632.83 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಹೊರ ಹರಿವು 2444 ಕ್ಯುಸೆಕ್.

English summary
Karnataka's weather report and major Dams Water Level Today November 15: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X