ಕರ್ನಾಟಕ; ವಿವಿಧ ಜಿಲ್ಲೆಗಳಲ್ಲಿ ಮಳೆ, ಡ್ಯಾಂಗಳಲ್ಲಿ ಎಷ್ಟು ನೀರಿದೆ?
ಬೆಂಗಳೂರು, ನವೆಂಬರ್ 16; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ನವೆಂಬರ್ 16 ರಿಂದ 18ರ ತನಕ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ಅಂಡಮಾನ್ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕರ್ನಾಟಕದಲ್ಲಿ ಕರಾವಳಿಯಲ್ಲಿ 50 ರಿಂದ 60 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ನವೆಂಬರ್ 18ರ ತನಕ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 19 ಸೆಂ. ಮೀ., ಅರಸಾಳು 14, ಮೂಡುಬಿದಿರೆ 3, ಕಾರ್ಕಳ 10, ಭದ್ರಾವತಿ 9, ಶಿಕಾರಿಪುರದಲ್ಲಿ 7 ಕಿ. ಮೀ. ಮಳೆಯಾಗಿದೆ. ಕರ್ನಾಟಕದ ಕರಾವಳಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಲಿಂಗನಮಕ್ಕಿ ಜಲಾಶಯದ ಮಂಗಳವಾರದ ನೀರಿನ ಮಟ್ಟ 552.77 ಮೀಟರ್ ಆಗಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು 12, 302ಕ್ಯುಸೆಕ್ ಆಗಿದೆ. ಡ್ಯಾಂನಿಂದ ಹೊರ ಹರಿವು 6360 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಮಂಗಳವಾರ ಜಲಾಶಯದಲ್ಲಿ 871.01 ಮೀಟರ್ ನೀರಿನ ಸಂಗ್ರಹವಿದೆ. 1160 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 655 ಕ್ಯುಸೆಕ್ ಆಗಿದೆ.
ಹೇಮಾವತಿ ಜಲಾಶಯದ ಮಂಗಳವಾರದ ನೀರಿನ ಮಟ್ಟ 886.62 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 5216 ಕ್ಯುಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಹೊರ ಹರಿವು 2810 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ
ಕಬಿನಿ ಜಲಾಶಯದಲ್ಲಿ ಮಂಗಳವಾರ 696.13 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 2518 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 2092 ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಡ್ಯಾಂ ಈಗಾಗಲೇ ಭರ್ತಿಯಾಗಿದೆ. ಮಂಗಳವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 11466 ಕ್ಯುಸೆಕ್ ಮತ್ತು ಹೊರ ಹರಿವು 11258 ಕ್ಯುಸೆಕ್.
ಭದ್ರಾ ಜಲಾಶಯದಲ್ಲಿ ಮಂಗಳವಾರ 657.62 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 6102 ಕ್ಯುಸೆಕ್ ಆಗಿದೆ. ಹೊರ ಹರಿವು 3683 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಮಂಗಳವಾರ ಡ್ಯಾಂನಲ್ಲಿ 497.46 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 5869 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 8986 ಕ್ಯುಸೆಕ್.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಮಂಗಳವಾರದ ನೀರಿನ ಮಟ್ಟ 518.42 ಮೀಟರ್ ಆಗಿದೆ. ಹೊರ ಹರಿವು 15659 ಕ್ಯುಸೆಕ್ ಆಗಿದೆ.
ನಾರಾಯಣಪುರ ಜಲಾಶಯದ ಮಂಗಳವಾರದ ನೀರಿನ ಮಟ್ಟ 491.49 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು ಕ್ಯುಸೆಕ್ ಆಗಿದೆ. ಹೊರ ಹರಿವು ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದಲ್ಲಿ ಮಂಗಳವಾರ 555.35 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯದ ಹೊರ ಹರಿವು 3764 ಕ್ಯುಸೆಕ್.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಮಂಗಳವಾರ ಜಲಾಶಯದಲ್ಲಿ 660.50 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 2539 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಮಂಗಳವಾರ 632.77 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಹೊರ ಹರಿವು 2694 ಕ್ಯುಸೆಕ್.












Click it and Unblock the Notifications