ಕರ್ನಾಟಕ; ನವೆಂಬರ್ 17ರಂದು ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ನವೆಂಬರ್ 17; ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನವೆಂಬರ್ 20ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನವೆಂಬರ್ 17 ಮತ್ತು 18ರಂದು ಭಾರೀ ಮಳೆ ಮುನ್ಸೂಚನೆ ನೀಡಿದ್ದು, 15 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಬುಧವಾರ ಸಂಜೆ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 60 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. 3.2 ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 21ರ ತನಕ ಮಳೆ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಬಹುತೇಕ ಜಲಾಶಯಗಳು ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿಯೇ ಭರ್ತಿಯಾಗಿವೆ. ಅಕ್ಟೋಬರ್ ಅಂತ್ಯದಲ್ಲಿ ಕಾವೇರಿ ಕೊಳ್ಳದ ಪ್ರಮುಖ ಜಲಾಶಯ ಕೆಆರ್‌ಎಸ್ ಸಹ ಭರ್ತಿಯಾಗಿದೆ. ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಸೇರಿದಂತೆ ಬೆಂಗಳೂರು ನಗರದ ಅಕ್ಕ-ಪಕ್ಕದ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯಾಗುತ್ತಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಲಿಂಗನಮಕ್ಕಿ ಜಲಾಶಯದ ಬುಧವಾರ ನೀರಿನ ಮಟ್ಟ 552.77 ಮೀಟರ್ ಆಗಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು 5052 ಕ್ಯುಸೆಕ್ ಆಗಿದೆ. ಡ್ಯಾಂನಿಂದ ಹೊರ ಹರಿವು 4906 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಬುಧವಾರ ಜಲಾಶಯದಲ್ಲಿ 871.05 ಮೀಟರ್ ನೀರಿನ ಸಂಗ್ರಹವಿದೆ. 1102 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 600 ಕ್ಯುಸೆಕ್ ಆಗಿದೆ.
ಹೇಮಾವತಿ ಜಲಾಶಯದ ಬುಧವಾರದ ನೀರಿನ ಮಟ್ಟ 886.78 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 6887 ಕ್ಯುಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಹೊರ ಹರಿವು 2260 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ
ಕಬಿನಿ ಜಲಾಶಯದಲ್ಲಿ ಬುಧವಾರ 696.11 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 2875 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 3125 ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಡ್ಯಾಂ ಈಗಾಗಲೇ ಭರ್ತಿಯಾಗಿದೆ. ಬುಧವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 12508 ಕ್ಯುಸೆಕ್ ಮತ್ತು ಹೊರ ಹರಿವು 12299 ಕ್ಯುಸೆಕ್.
ಭದ್ರಾ ಜಲಾಶಯದಲ್ಲಿ ಬುಧವಾರ 657.65 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 4078 ಕ್ಯುಸೆಕ್ ಆಗಿದೆ. ಹೊರ ಹರಿವು 2861 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಬುಧವಾರ ಡ್ಯಾಂನಲ್ಲಿ 497.57 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 25412 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 8492 ಕ್ಯುಸೆಕ್.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಬುಧವಾರದ ನೀರಿನ ಮಟ್ಟ 518.36 ಮೀಟರ್ ಆಗಿದೆ. ಹೊರ ಹರಿವು 10509 ಕ್ಯುಸೆಕ್ ಆಗಿದೆ.
ನಾರಾಯಣಪುರ ಜಲಾಶಯದ ಬುಧವಾರದ ನೀರಿನ ಮಟ್ಟ 491.54 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 9761 ಕ್ಯುಸೆಕ್ ಆಗಿದೆ. ಹೊರ ಹರಿವು 7257 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದಲ್ಲಿ ಬುಧವಾರ 555.35 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯದ ಒಳ ಹರಿವು 2135 ಕ್ಯುಸೆಕ್ ಮತ್ತು ಅಷ್ಟೇ ಪ್ರಮಾಣದ ನೀರನ್ನು ಡ್ಯಾಂನಿಂದ ಹೊರ ಬಿಡಲಾಗುತ್ತಿದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಬುಧವಾರ ಜಲಾಶಯದಲ್ಲಿ 660.42 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 2363 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಬುಧವಾರ 632.86 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಒಳಹರಿವು 6976 ಕ್ಯುಸೆಕ್, ಹೊರ ಹರಿವು 2694 ಕ್ಯುಸೆಕ್ ಆಗಿದೆ.












Click it and Unblock the Notifications