ಕರ್ನಾಟಕ; ನವೆಂಬರ್ 18ರಂದು ಡ್ಯಾಂಗಳ ನೀರಿನ ಮಟ್ಟ
ಬೆಂಗಳೂರು, ನವೆಂಬರ್ 18; ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನದ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಗುರುವಾರ ಬೆಳಗ್ಗೆಯಿಂದ ಜಿಟಿ-ಜಿಟಿ ಮಳೆ ಸುರಿಯುತ್ತಲೇ ಇದೆ.
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡು, ಪಶ್ಚಿಮ ಘಟ್ಟ ಪ್ರದೇಶ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ ಗುರುವಾರ ಬೆಳಗ್ಗೆಯಿಂದಲೂ ಬಿಡುವು ನೀಡದೆ ಜಿಟಿ-ಜಿಟಿ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಹ ಮಳೆ ಮುಂದುವರೆಯಲಿದೆ.
ಕರಾವಳಿ, ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕಾಲಿಕ ಮಳೆಯಿಂದಾಗ ಅಡಕೆ, ಭತ್ತ, ತರಕಾರಿ ಬೆಳೆಗಳಿಗೆ ಹಾನಿಯಾಗಿದೆ. ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ, ರಾಮನಗರ ಜಿಲ್ಲೆಗಳಲ್ಲೂ ಮಳೆ ಅಬ್ಬರ ಹೆಚ್ಚಾಗಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಲಿಂಗನಮಕ್ಕಿ ಜಲಾಶಯದ ಗುರುವಾರದ ನೀರಿನ ಮಟ್ಟ 552.76 ಮೀಟರ್ ಆಗಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು 5035 ಕ್ಯುಸೆಕ್ ಆಗಿದೆ. ಡ್ಯಾಂನಿಂದ ಹೊರ ಹರಿವು 6031 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಗುರುವಾರ ಜಲಾಶಯದಲ್ಲಿ 871.09 ಮೀಟರ್ ನೀರಿನ ಸಂಗ್ರಹವಿದೆ. 1472 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 891 ಕ್ಯುಸೆಕ್ ಆಗಿದೆ.
ಹೇಮಾವತಿ ಜಲಾಶಯದ ಗುರುವಾರದ ನೀರಿನ ಮಟ್ಟ 886.88 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 5194 ಕ್ಯುಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಹೊರ ಹರಿವು 2280 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ
ಕಬಿನಿ ಜಲಾಶಯದಲ್ಲಿ ಗುರುವಾರ 696.13 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 3656 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 3004 ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಡ್ಯಾಂ ಈಗಾಗಲೇ ಭರ್ತಿಯಾಗಿದೆ. ಗುರುವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 17135 ಕ್ಯುಸೆಕ್ ಮತ್ತು ಹೊರ ಹರಿವು 16927 ಕ್ಯುಸೆಕ್.
ಭದ್ರಾ ಜಲಾಶಯದಲ್ಲಿ ಗುರುವಾರ 657.73 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 7608 ಕ್ಯುಸೆಕ್ ಆಗಿದೆ. ಹೊರ ಹರಿವು 5027 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಗುರುವಾರ ಡ್ಯಾಂನಲ್ಲಿ 497.71 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 29314 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 8832 ಕ್ಯುಸೆಕ್.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಗುರುವಾರ ಜಲಾಶಯದ ನೀರಿನ ಮಟ್ಟ 518.31 ಮೀಟರ್ ಆಗಿದೆ. ಹೊರ ಹರಿವು 8703 ಕ್ಯುಸೆಕ್ ಆಗಿದೆ.
ನಾರಾಯಣಪುರ ಜಲಾಶಯದ ಗುರುವಾರದ ನೀರಿನ ಮಟ್ಟ 491.56 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 6951 ಕ್ಯುಸೆಕ್ ಆಗಿದೆ. ಹೊರ ಹರಿವು 5944 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದಲ್ಲಿ ಗುರುವಾರ 555.34 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯದ ಒಳ ಹರಿವು 2051 ಕ್ಯುಸೆಕ್ ಮತ್ತು ಹೊರ ಹರಿವು 2484 ಕ್ಯುಸೆಕ್ ಆಗಿದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಗುರುವಾರ ಜಲಾಶಯದಲ್ಲಿ 660.33 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 2651 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಗುರುವಾರ 632.86 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಒಳಹರಿವು 5374 ಕ್ಯುಸೆಕ್, ಹೊರ ಹರಿವು 2319 ಕ್ಯುಸೆಕ್ ಆಗಿದೆ.












Click it and Unblock the Notifications