ಕರ್ನಾಟಕ; ಶುಕ್ರವಾರ ಜಲಾಶಯಗಳಲ್ಲಿ ಎಷ್ಟು ನೀರಿದೆ?
ಬೆಂಗಳೂರು, ನವೆಂಬರ್ 19; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಮಳೆಯಾಗುತ್ತಿದೆ. ನವೆಂಬರ್ 23ರ ತನಕ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದದ ಕೆಆರ್‌ಎಸ್ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಡ್ಯಾಂನಿಂದ ಶುಕ್ರವಾರ 18,469 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ನದಿಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ.
ಕೆಆರ್‌ಎಸ್‌ನಿಂದ ಹೆಚ್ಚಿನ ನೀರು ಬಿಟ್ಟಿರುವ ಕಾರಣ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇದರಿಂದಾಗಿ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ಮಳೆ ಮುಂದುವರೆದರೆ ನದಿಗೆ ಬೀಡುವ ನೀರಿನ ಪ್ರಮಾಣದಲ್ಲಿಯೂ ಏರಿಕೆಯಾಗಲಿದೆ.
ಶುಕ್ರವಾರ ಬೆಳಗ್ಗೆ 8.30ರ ವರದಿಯಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 3.30 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯ ತನಕ 2924.43 ಮಿ. ಮೀ. ಮಳೆಯಾಗಿದೆ. ಚಿಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಲಿಂಗನಮಕ್ಕಿ ಜಲಾಶಯದ ಶುಕ್ರವಾರದ ನೀರಿನ ಮಟ್ಟ 552.73 ಮೀಟರ್. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು 1864 ಕ್ಯುಸೆಕ್. ಡ್ಯಾಂನಿಂದ ಹೊರ ಹರಿವು 6379 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಶುಕ್ರವಾರ ಜಲಾಶಯದಲ್ಲಿ 871.01 ಮೀಟರ್ ನೀರಿನ ಸಂಗ್ರಹವಿದೆ. 614 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1600 ಕ್ಯುಸೆಕ್ ಆಗಿದೆ.
ಹೇಮಾವತಿ ಜಲಾಶಯದ ಶುಕ್ರವಾರದ ನೀರಿನ ಮಟ್ಟ 886.95 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 4397 ಕ್ಯುಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಹೊರ ಹರಿವು 2320 ಕ್ಯುಸೆಕ್.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ
ಕಬಿನಿ ಜಲಾಶಯದಲ್ಲಿ ಶುಕ್ರವಾರ 696.13 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 4689 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 4448 ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಈಗಾಗಲೇ ಭರ್ತಿಯಾಗಿದೆ. ಶುಕ್ರವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 18678 ಕ್ಯುಸೆಕ್ ಮತ್ತು ಹೊರ ಹರಿವು 18469 ಕ್ಯುಸೆಕ್.
ಭದ್ರಾ ಜಲಾಶಯದಲ್ಲಿ ಶುಕ್ರವಾರ 657.67 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 4745 ಕ್ಯುಸೆಕ್ ಆಗಿದೆ. ಹೊರ ಹರಿವು 7164 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಶುಕ್ರವಾರ ಡ್ಯಾಂನಲ್ಲಿ 497.71 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 32672 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ಡ್ಯಾಂಗೆ ಬಿಡಲಾಗುತ್ತಿದೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಶುಕ್ರವಾರ ಜಲಾಶಯದ ನೀರಿನ ಮಟ್ಟ 518.27 ಮೀಟರ್ ಆಗಿದೆ. ಹೊರ ಹರಿವು 6955 ಕ್ಯುಸೆಕ್ ಆಗಿದೆ.
ನಾರಾಯಣಪುರ ಜಲಾಶಯದ ಶುಕ್ರವಾರದ ನೀರಿನ ಮಟ್ಟ 491.53 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 5634 ಕ್ಯುಸೆಕ್ ಆಗಿದೆ. ಹೊರ ಹರಿವು 7144 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದಲ್ಲಿ ಶುಕ್ರವಾರ 555.30 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯದ ಒಳ ಹರಿವು 701 ಕ್ಯುಸೆಕ್ ಮತ್ತು ಹೊರ ಹರಿವು 2874 ಕ್ಯುಸೆಕ್ ಆಗಿದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಶುಕ್ರವಾರ ಜಲಾಶಯದಲ್ಲಿ 660.24 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 2651ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಶುಕ್ರವಾರ 632.95 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಒಳಹರಿವು 3397 ಕ್ಯುಸೆಕ್, ಹೊರ ಹರಿವು 1869 ಕ್ಯುಸೆಕ್ ಆಗಿದೆ.












Click it and Unblock the Notifications