ಕರ್ನಾಟಕ; ಮಂಗಳವಾರ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ನವೆಂಬರ್ 02; ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದುಇದರ ಪರಿಣಾಮದಿಂದ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನವೆಂಬರ್ 6ರ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ನವೆಂಬರ್ 3 ರಿಂದ ಮತ್ತು ನವೆಂಬರ್ 6ರಿಂದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಇರಲಿದ್ದು, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರದಲ್ಲಿ ಸಹ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 2 ರಿಂದ 6ರ ತನಕ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಕಬಿನಿ ಜಲಾಶಯ ಮತ್ತು ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. 11 ವರ್ಷಗಳ ಬಳಿಕ ಕೆಆರ್‌ಎಸ್ ಜಲಾಶಯ ಅಕ್ಟೋಬರ್ ತಿಂಗಳಿನಲ್ಲಿ ಭರ್ತಿಯಾಗಿದೆ. ಕರ್ನಾಟಕದ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದಲ್ಲಿ ಮಂಗಳವಾರ 553.05 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 1619 ಕ್ಯುಸೆಕ್, ಹೊರ ಹರಿವು 6078 ಕ್ಯುಸೆಕ್ ದಾಖಲಾಗಿದೆ.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಮಂಗಳವಾರ ಜಲಾಶಯದಲ್ಲಿ 870.87 ಮೀಟರ್ ನೀರಿನ ಸಂಗ್ರಹವಿದೆ. 1158 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1400 ಕ್ಯುಸೆಕ್.

ಹೇಮಾವತಿ ಜಲಾಶಯದ ಮಂಗಳವಾರದ ನೀರಿನ ಮಟ್ಟ 886.80 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 1400 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 3550 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ

ಕೆಆರ್‌ಎಸ್, ಕಬಿನಿ, ಭದ್ರಾ

ಕಬಿನಿ ಜಲಾಶಯದಲ್ಲಿ ಮಂಗಳವಾರ 696.13 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 2701 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 2500 ಕ್ಯುಸೆಕ್ ಆಗಿದೆ.

ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ. ಮಂಗಳವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 4773 ಕ್ಯುಸೆಕ್ ಮತ್ತು ಹೊರ ಹರಿವು 4563 ಕ್ಯುಸೆಕ್.

ಭದ್ರಾ ಜಲಾಶಯದಲ್ಲಿ ಮಂಗಳವಾರ 657.67 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 3184 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಮಂಗಳವಾರ ಡ್ಯಾಂನಲ್ಲಿ 497.65 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 5390 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಮಂಗಳವಾರದ ನೀರಿನ ಮಟ್ಟ 519.00 ಮೀಟರ್ ಆಗಿದೆ. ಹೊರ ಹರಿವು 13171 ಕ್ಯುಸೆಕ್ ಆಗಿದೆ.

ನಾರಾಯಣಪುರ ಜಲಾಶಯದ ಮಂಗಳವಾರದ ನೀರಿನ ಮಟ್ಟ 491.45 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 11015 ಕ್ಯುಸೆಕ್ ಆಗಿದೆ. ಹೊರ ಹರಿವು 11511 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ

ಸೂಪ, ಘಟಪ್ರಭಾ, ಮಲಪ್ರಭಾ

ಸೂಪಾ ಜಲಾಶಯದಲ್ಲಿ ಮಂಗಳವಾರ 556.11 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 821 ಕ್ಯುಸೆಕ್ ಒಳಹರಿವು ಇದೆ. 1259 ಕ್ಯುಸೆಕ್ ಹೊರ ಹರಿವು ಇದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಮಂಗಳವಾರ ಜಲಾಶಯದಲ್ಲಿ 662.05 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 3151 ಕ್ಯುಸೆಕ್ ಆಗಿದೆ.

ಮಲಪ್ರಭಾ ಜಲಾಶಯದಲ್ಲಿ ಮಂಗಳವಾರ 633.40 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಹೊರ ಹರಿವು 1794 ಕ್ಯುಸೆಕ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+