ಕರ್ನಾಟಕ; ನವೆಂಬರ್ 24ರಂದು ಡ್ಯಾಂಗಳ ನೀರಿನ ಮಟ್ಟ
ಬೆಂಗಳೂರು, ನವೆಂಬರ್ 24; ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಮಳೆಯ ಅಬ್ಬರ ಕಡಿಮೆಯಾಗಿದೆ. ನವೆಂಬರ್ 26ರ ಬಳಿಕ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. 10 ಲಕ್ಷ ಹೆಕ್ಟೇರ್‌ಗೂ ಅಧಿಕ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬುಧವಾರ ಕೋಲಾರ ವಿಧಾನಸಭೆ ಕ್ಷೇತ್ರದ ನಾಗಲಾಪುರ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಬೆಳೆಗಳನ್ನು ವೀಕ್ಷಿಸಿ, ರೈತರ ಸಮಸ್ಯೆಗಳನ್ನು ಆಲಿಸಿದರು. ಹೂವು, ಹಣ್ಣು, ತರಕಾರಿ, ಆಹಾರ ಧಾನ್ಯಗಳು ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರಾಜ್ಯ ಸರ್ಕಾರ ಈ ಬಗ್ಗೆ ತುರ್ತಾಗಿ ಗಮನ ಹರಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ಆದ ಹಾನಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ. ಬೆಳೆ ಮತ್ತು ಇತರ ಹಾನಿ ಬಗ್ಗೆ ತ್ವರಿತವಾಗಿ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಸಮೀಕ್ಷೆ ವರದಿ ಕೈ ಸೇರಿದ 24 ತಾಸಿನಲ್ಲಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ತಮ್ಮ ಸರ್ಕಾರ ತೆಗೆದುಕೊಂಡಿರುವ ರಕ್ಷಣಾ ಮತ್ತು ಪರಿಹಾರ ಕ್ರಮಗಳ ಬಗ್ಗೆ ವಿವರ ನೀಡಿದ್ದಾರೆ, ವಿಶೇಷವಾಗಿ ಜೀವಹಾನಿ ಮತ್ತು ಬೆಳೆಹಾನಿಯ ಬಗ್ಗೆ ಪ್ರಧಾನಮಂತ್ರಿಗಳು ಕಳಕಳಿ ವ್ಯಕ್ತಪಡಿಸಿ, ರಾಜ್ಯಕ್ಕೆ ಸಾಧ್ಯವಿರುವ ಸಹಕಾರ, ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಲಿಂಗನಮಕ್ಕಿ ಜಲಾಶಯದ ಬುಧವಾರದ ನೀರಿನ ಮಟ್ಟ 552.64 ಮೀಟರ್. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು 3090 ಕ್ಯುಸೆಕ್. ಡ್ಯಾಂನಿಂದ ಹೊರ ಹರಿವು 6424 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಬುಧವಾರ ಜಲಾಶಯದಲ್ಲಿ 870.95 ಮೀಟರ್ ನೀರಿನ ಸಂಗ್ರಹವಿದೆ. 1264 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 957 ಕ್ಯುಸೆಕ್ ಆಗಿದೆ.
ಹೇಮಾವತಿ ಜಲಾಶಯದ ಬುಧವಾರದ ನೀರಿನ ಮಟ್ಟ 887.72 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 8171 ಕ್ಯುಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಹೊರ ಹರಿವು 400 ಕ್ಯುಸೆಕ್.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ
ಕಬಿನಿ ಜಲಾಶಯದಲ್ಲಿ ಬುಧವಾರ 696.07 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 3081 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 4385 ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಈಗಾಗಲೇ ಭರ್ತಿಯಾಗಿದೆ. ಬುಧವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 4326 ಕ್ಯುಸೆಕ್ ಮತ್ತು ಹೊರ ಹರಿವು 4117 ಕ್ಯುಸೆಕ್.
ಭದ್ರಾ ಜಲಾಶಯದಲ್ಲಿ ಬುಧವಾರ 657.67 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 1427 ಕ್ಯುಸೆಕ್ ಆಗಿದೆ. ಹೊರ ಹರಿವು 211 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಬುಧವಾರ ಡ್ಯಾಂನಲ್ಲಿ 497.71 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 23824 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 20262 ಕ್ಯುಸೆಕ್ ಆಗಿದೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಬುಧವಾರ ಜಲಾಶಯದ ನೀರಿನ ಮಟ್ಟ 518.38 ಮೀಟರ್ ಆಗಿದೆ. ಒಳ ಹರಿವು 8547 ಕ್ಯುಸೆಕ್, ಹೊರ ಹರಿವು 1580 ಕ್ಯುಸೆಕ್ ಆಗಿದೆ.
ನಾರಾಯಣಪುರ ಜಲಾಶಯದ ಬುಧವಾರದ ನೀರಿನ ಮಟ್ಟ 491.99 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 3739 ಕ್ಯುಸೆಕ್ ಆಗಿದೆ. ಹೊರ ಹರಿವು 540 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದಲ್ಲಿ ಬುಧವಾರ 555.11 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯದ ಒಳ ಹರಿವು 906 ಕ್ಯುಸೆಕ್ ಮತ್ತು ಹೊರ ಹರಿವು 2638 ಕ್ಯುಸೆಕ್ ಆಗಿದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಬುಧವಾರ ಜಲಾಶಯದಲ್ಲಿ 660.05 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 175 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಬುಧವಾರ 633.04 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಒಳಹರಿವು 769 ಕ್ಯುಸೆಕ್, ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.












Click it and Unblock the Notifications