ಕರ್ನಾಟಕದಲ್ಲಿ ಕಡಿಮೆಯಾದ ಮಳೆ ಅಬ್ಬರ; ಡ್ಯಾಂಗಳ ನೀರಿನ ಮಟ್ಟ
ಬೆಂಗಳೂರು, ಅಕ್ಟೋಬರ್ 21; ಮುಂಗಾರು ಮಾರುತಗಳ ನಿರ್ಗಮನ, ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎರಡು ವಾರಗಳಿಂದ ಮಳೆ ಸುರಿಯುತ್ತಿದೆ. ಈ ವಾರ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಇನ್ನೂ ಎರಡು ದಿನ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 26ರಿಂದ ದೇಶದಲ್ಲಿ ಹಿಂಗಾರು ಆರಂಭವಾಗಲಿದೆ. ಸೆಪ್ಟೆಂಬರ್ ಅಂತ್ಯಕ್ಕೆ ನೈಋತ್ಯ ಮುಂಗಾರು ಅಂತ್ಯಗೊಳ್ಳಬೇಕಿತ್ತು. ಆದರೆ ಅಕ್ಟೋಬರ್ ತನಕ ಅದು ಮುಂದುವರೆದಿದ್ದು, ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯಾಗಿದೆ. ಕೇರಳ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿಯೂ ಬುಧವಾರದ ಬಳಿಕ ಮಳೆ ಅಬ್ಬರ ಕಡಿಮೆಯಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ನೈಋತ್ಯ ಮುಂಗಾರು ಅವಧಿಯಲ್ಲಿ ಸುರಿದ ಮಳೆಗೆ ಕರ್ನಾಟಕದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕಾವೇರಿ ಕೊಳ್ಳದ ಪ್ರಮುಖ ಜಲಾಶಯ ಕೆಆರ್‌ಎಸ್ ಭರ್ತಿಯಾಗಲು ಇನ್ನೂ 4 ಅಡಿ ಬಾಕಿ ಇದೆ. ಈ ವರ್ಷ ಕೆಆರ್‌ಎಸ್ ಭರ್ತಿಯಾಗುವ ಸಾಧ್ಯತೆ ಕಡಿಮೆ ಇದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಗುರುವಾರ ಲಿಂಗನಮಕ್ಕಿ ಜಲಾಶಯದಲ್ಲಿ 553.22 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಜಲಾಶಯದಿಂದ ಹೊರ ಹರಿವು 5391 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಗುರುವಾರ ಜಲಾಶಯದಲ್ಲಿ 871.18 ಮೀಟರ್ ನೀರಿನ ಸಂಗ್ರಹವಿದೆ. 2016 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1200 ಕ್ಯುಸೆಕ್.
ಹೇಮಾವತಿ ಜಲಾಶಯದ ಗುರುವಾರದ ನೀರಿನ ಮಟ್ಟ 887.08 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 2336 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 4275 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ
ಕಬಿನಿ ಜಲಾಶಯದಲ್ಲಿ ಗುರುವಾರ 695.54 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಗುರುವಾರ ಡ್ಯಾಂನಲ್ಲಿ 36.64 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 8736 ಕ್ಯುಸೆಕ್ ಮತ್ತು ಹೊರ ಹರಿವು 6721 ಕ್ಯುಸೆಕ್ ದಾಖಲಾಗಿದೆ.
ಭದ್ರಾ ಜಲಾಶಯದಲ್ಲಿ ಗುರುವಾರ 657.73 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 4787 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ವಿಜಯನಗರದ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಗುರುವಾರ ಡ್ಯಾಂನಲ್ಲಿ 497.66 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 6474 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 10926 ಕ್ಯುಸೆಕ್ ದಾಖಲಾಗಿದೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಗುರುವಾರದ ನೀರಿನ ಮಟ್ಟ 519.57 ಮೀಟರ್ ಆಗಿದೆ. ಜಲಾಶಯಕ್ಕೆ 7875 ಕ್ಯುಸೆಕ್ ಒಳಹರಿವು ಇದೆ.
ನಾರಾಯಣಪುರ ಜಲಾಶಯದ ಗುರುವಾರದ ನೀರಿನ ಮಟ್ಟ 492.14 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. 6323 ಒಳಹರಿವು ಕ್ಯುಸೆಕ್ ಆಗಿದೆ. ಹೊರ ಹರಿವು 8507 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ
ಸೂಪಾ ಜಲಾಶಯದಲ್ಲಿ ಗುರುವಾರ 556.58 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 428 ಕ್ಯುಸೆಕ್ ಒಳಹರಿವು ಇದೆ. ಕ್ಯುಸೆಕ್ ಹೊರ ಹರಿವು 5748 ದಾಖಲಾಗಿದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಗುರುವಾರ ಜಲಾಶಯದಲ್ಲಿ 662.91 ಮೀಟರ್ ನೀರಿದೆ. ಜಲಾಶಯದ ಒಳಹರಿವು 409 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಗುರುವಾರ 633.77 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್.












Click it and Unblock the Notifications