ಕರ್ನಾಟಕ; ಅಕ್ಟೋಬರ್ 22ರಂದು ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಅಕ್ಟೋಬರ್ 22; ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಗದಗ ಹಾವೇರಿ ಬೆಳಗಾವಿ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಅಕ್ಟೋಬರ್ 23 ರಿಂದ 25ರ ತನಕ ಸಾಧಾರಣ ಮಳೆಯಾಗಲಿದೆ.
ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 9.39 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯ ತನಕ ಜಿಲ್ಲೆಯಲ್ಲಿ 2702.71 ಮಿ. ಮೀ. ಮಳೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಹಾಸನ ಜಿಲ್ಲೆಯಲ್ಲಿ ಅಕ್ಟೋಬರ್ 21ರಂದು ಭಾರೀ ಮಳೆಯಾಗಿದೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮ 50.4 ಮಿ. ಮೀ., ಕಟ್ಟಾಯ 8 ಮಿ. ಮೀ.. ದುದ್ದ 34. 4 ಮಿ. ಮೀ., ಕಸಬಾ 17.2 ಮಿ. ಮೀ., ಗೊರೂರು 11.7 ಮಿ. ಮೀ., ಸಾಲಗಾಮೆ 30.8 ಮಿ. ಮೀ. ಮಳೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಕರ್ನಾಟಕದ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ ಡ್ಯಾಂ
ಶುಕ್ರವಾರ ಲಿಂಗನಮಕ್ಕಿ ಜಲಾಶಯದಲ್ಲಿ 553.25 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 9147 ಕ್ಯುಸೆಕ್, ಹೊರ ಹರಿವು 5268 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಶುಕ್ರವಾರ ಜಲಾಶಯದಲ್ಲಿ 871.20 ಮೀಟರ್ ನೀರಿನ ಸಂಗ್ರಹವಿದೆ. 1585 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1200 ಕ್ಯುಸೆಕ್.
ಹೇಮಾವತಿ ಜಲಾಶಯದ ಶುಕ್ರವಾರದ ನೀರಿನ ಮಟ್ಟ 887.06 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 3851 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 4275 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂಗಳು
ಕಬಿನಿ ಜಲಾಶಯದಲ್ಲಿ ಶುಕ್ರವಾರ 695.69 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 6268 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 2616 ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಶುಕ್ರವಾರ ಡ್ಯಾಂನಲ್ಲಿ 36.74 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 9310 ಕ್ಯುಸೆಕ್ ಮತ್ತು ಹೊರ ಹರಿವು 3739 ಕ್ಯುಸೆಕ್ ದಾಖಲಾಗಿದೆ.
ಭದ್ರಾ ಜಲಾಶಯದಲ್ಲಿ ಶುಕ್ರವಾರ 657.73 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 5657 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಶುಕ್ರವಾರ ಡ್ಯಾಂನಲ್ಲಿ 497.64 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 9451 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 11232 ಕ್ಯುಸೆಕ್ ದಾಖಲಾಗಿದೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಶುಕ್ರವಾರ ನೀರಿನ ಮಟ್ಟ 519.57 ಮೀಟರ್ ಆಗಿದೆ. ಜಲಾಶಯಕ್ಕೆ 5875 ಕ್ಯುಸೆಕ್ ಒಳಹರಿವು ಇದೆ.
ನಾರಾಯಣಪುರ ಜಲಾಶಯದ ಶುಕ್ರವಾರದ ನೀರಿನ ಮಟ್ಟ 492.04 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 3568 ಕ್ಯುಸೆಕ್ ಆಗಿದೆ. ಹೊರ ಹರಿವು 8986 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂಗಳು
ಸೂಪಾ ಜಲಾಶಯದಲ್ಲಿ ಶುಕ್ರವಾರ 556.48 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 821 ಕ್ಯುಸೆಕ್ ಒಳಹರಿವು ಇದೆ. 5249 ಕ್ಯುಸೆಕ್ ಹೊರ ಹರಿವು ದಾಖಲಾಗಿದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಶುಕ್ರವಾರ ಜಲಾಶಯದಲ್ಲಿ 662.91 ಮೀಟರ್ ನೀರಿದೆ. ಜಲಾಶಯದ ಒಳಹರಿವು 412 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಶುಕ್ರವಾರ 633.74 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್.












Click it and Unblock the Notifications