ಕರ್ನಾಟಕ; ಅಕ್ಟೋಬರ್ 25ರಂದು ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಅಕ್ಟೋಬರ್ 25; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಕೆರೆ-ಕಟ್ಟೆಗಳು ಭರ್ತಿಯಾಗಿವೆ.

ಚಿಕ್ಕಬಳ್ಳಾಪುರದಲ್ಲಿ ಶನಿವಾರ ತಡರಾತ್ರಿಯಿಂದ ಭಾನುವಾರ ಮುಂಜಾನೆ ತನಕ ಮಳೆಯಾಗಿದೆ. ಕೆರೆ-ಕಟ್ಟೆಗಳಿಗೆ ಅಪಾರ ಪ್ರಮಾಣದ ನೀರು ಹರಿದುಬಂದಿದ್ದು, ಕೋಡಿ ಬಿದ್ದು ರಸ್ತೆಗಳ ಮೇಲೆ ನೀರು ಹರಿಯುತ್ತಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ 48 ಗಂಟೆಗಳ ಕಾಲ ಮುಂದುವರೆಯುವ ಸಾಧ್ಯತೆ ಇದೆ.

ಜಿಲ್ಲೆಯ ಹಲವು ಕಡೆ ಹೊಲ, ತೋಟಗಳಿಗೆ ನೀರು ನುಗ್ಗಿದೆ. ರಾಗಿ, ಶೇಂಗಾ, ಮುಸುಕಿನ ಜೋಳ ಮುಂತಾದ ಬೆಳೆಗಳಿಗೆ ಹಾನಿಯಾಗಿದೆ. ಗುಡಿಬಂಡೆ ತಾಲೂಕಿನ ರಾಮಪ್ಪನ ಕೆರೆ 18 ವರ್ಷಗಳ ಬಳಿಕ ತುಂಬಿದೆ. ಬಾಗೇಪಲ್ಲಿ, ಚಿಂತಾಮಣಿ ತಾಲೂಕುಗಳಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ಜುಲೈ ಮತ್ತು ಆಗಸ್ಟ್‌ನಲ್ಲಿ ಸುರಿದ ಮಳೆಗೆ ಕರ್ನಾಟಕದ ವಿವಿಧ ಜಲಾಶಯಗಳು ಭರ್ತಿಯಾಗಿವೆ.

ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿಮ ಕೆರೆಯ ಕೋಡಿ ಬಿದ್ದಿದೆ. ಸುಮಾರು 20 ವರ್ಷಗಳ ಬಳಿಕ ಕೆರೆ ತುಂಬಿ ಕೋಡಿ ಬಿದ್ದ ಹಿನ್ನಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ ಡ್ಯಾಂ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ ಡ್ಯಾಂ

ಸೋಮವಾರ ಲಿಂಗನಮಕ್ಕಿ ಜಲಾಶಯದಲ್ಲಿ 553.25 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 5677 ಕ್ಯುಸೆಕ್, ಹೊರ ಹರಿವು 4293 ಕ್ಯುಸೆಕ್ ದಾಖಲಾಗಿದೆ.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಸೋಮವಾರ ಜಲಾಶಯದಲ್ಲಿ 871.17 ಮೀಟರ್ ನೀರಿನ ಸಂಗ್ರಹವಿದೆ. 1232 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. 1200 ಹೊರ ಹರಿವು ಕ್ಯುಸೆಕ್.

ಹೇಮಾವತಿ ಜಲಾಶಯದ ಸೋಮವಾರದ ನೀರಿನ ಮಟ್ಟ 887.15 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 4483 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 3750 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದಲ್ಲಿ ಸೋಮವಾರ 696 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 10466 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 7658 ಕ್ಯುಸೆಕ್ ಆಗಿದೆ.

ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಸೋಮವಾರ ಡ್ಯಾಂನಲ್ಲಿ 37.31 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 16385 ಕ್ಯುಸೆಕ್ ಮತ್ತು ಹೊರ ಹರಿವು 3888 ಕ್ಯುಸೆಕ್ ದಾಖಲಾಗಿದೆ.

ಭದ್ರಾ ಜಲಾಶಯದಲ್ಲಿ ಸೋಮವಾರ 657.73 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ 7414 ಒಳಹರಿವು ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಸೋಮವಾರ ಡ್ಯಾಂನಲ್ಲಿ 497.71 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 27507 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 23944 ಕ್ಯುಸೆಕ್ ದಾಖಲಾಗಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಸೋಮವಾರದ ನೀರಿನ ಮಟ್ಟ 519.49 ಮೀಟರ್ ಆಗಿದೆ. ಜಲಾಶಯಕ್ಕೆ 12187 ಕ್ಯುಸೆಕ್ ಹೊರಹರಿವು ಇದೆ.

ನಾರಾಯಣಪುರ ಜಲಾಶಯದ ಸೋಮವಾರದ ನೀರಿನ ಮಟ್ಟ 492.04 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 10467 ಕ್ಯುಸೆಕ್ ಆಗಿದೆ. ಹೊರ ಹರಿವು 10467 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪಾ ಜಲಾಶಯದಲ್ಲಿ ಸೋಮವಾರ 556.32 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 1185 ಕ್ಯುಸೆಕ್ ಒಳಹರಿವು ಇದೆ. 1185 ಕ್ಯುಸೆಕ್ ಹೊರ ಹರಿವು ದಾಖಲಾಗಿದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಸೋಮವಾರ ಜಲಾಶಯದಲ್ಲಿ 662.75 ಮೀಟರ್ ನೀರಿದೆ. ಜಲಾಶಯದ ಒಳಹರಿವು 175 ಕ್ಯುಸೆಕ್ ಆಗಿದೆ.

ಮಲಪ್ರಭಾ ಜಲಾಶಯದಲ್ಲಿ ಸೋಮವಾರದ 633.65 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+