ಕರ್ನಾಟಕದಲ್ಲಿ ಮಳೆ; ಬುಧವಾರ ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಅಕ್ಟೋಬರ್ 27; ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಾರುತಗಳು ಅಂತ್ಯಗೊಂಡಿದೆ. ಆದರೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗತ್ತಲೇ ಇದೆ. ಅಕ್ಟೋಬರ್ 29ರ ತನಕ ಮಳೆಯ ಪ್ರಮಾಣ ಕಡಿಮೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಬಂಗಾಳಕೊಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಐದು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ಇತ್ತು. ಆದರೆ ಪ್ರಭಾವ ತಗ್ಗಿದ್ದು, ಮಳೆ ಕಡಿಮೆಯಾಗಿದೆ. ಮಂಗಳವಾರ ಲೊಂಡ ಹಾಗೂ ಆಗುಂಬೆಯಲ್ಲಿ ತಲಾ 5 ಸೆಂ. ಮೀ. ಮಳೆಯಾಗಿದೆ. ಮೈಸೂರಿನಲ್ಲಿ 4, ಪುತ್ತೂರು ಮತ್ತು ಮಡಿಕೇರಿಯಲ್ಲಿ 3 ಸೆಂ. ಮೀ. ಮಳೆಯಾಗಿದೆ.
ಅಕ್ಟೋಬರ್ 29ರಿಂದ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ. ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೆಆರ್‌ಎಸ್ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಡ್ಯಾಂಗೆ ಒಳಹರಿವು 13,984 ಕ್ಯೂಸೆಕ್ ಆಗಿದೆ. ಇದರಿಂದಾಗಿ ಜಲಾಶಯದಿಂದ 10 ರಿಂದ 20 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಕಾವೇರಿ ನದಿಗೆ ನೀರು ಬಿಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಲಿಂಗನಮಕ್ಕಿ ಜಲಾಶಯದಲ್ಲಿ ಬುಧವಾರ 553.23 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 3319 ಕ್ಯುಸೆಕ್, ಹೊರ ಹರಿವು 4368 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಬುಧವಾರ ಜಲಾಶಯದಲ್ಲಿ 871.15 ಮೀಟರ್ ನೀರಿನ ಸಂಗ್ರಹವಿದೆ. 540 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1291 ಕ್ಯುಸೆಕ್.
ಹೇಮಾವತಿ ಜಲಾಶಯದ ಬುಧವಾರದ ನೀರಿನ ಮಟ್ಟ 887.11 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 2665 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 3625 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ
ಕಬಿನಿ ಜಲಾಶಯದಲ್ಲಿ ಬುಧವಾರ 695.95 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 3503 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 2876 ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗುವ ಹಂತದಲ್ಲಿದೆ. ಬುಧವಾರ ಡ್ಯಾಂನಲ್ಲಿ 37.81 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 13984 ಕ್ಯುಸೆಕ್ ಮತ್ತು ಹೊರ ಹರಿವು 3594 ಕ್ಯುಸೆಕ್ ದಾಖಲಾಗಿದೆ.
ಭದ್ರಾ ಜಲಾಶಯದಲ್ಲಿ ಬುಧವಾರ 657.73 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 3782 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಬುಧವಾರ ಡ್ಯಾಂನಲ್ಲಿ 497.71 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 28857 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 28857 ಕ್ಯುಸೆಕ್.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಬುಧವಾರದ ನೀರಿನ ಮಟ್ಟ 519.37 ಮೀಟರ್ ಆಗಿದೆ.
ನಾರಾಯಣಪುರ ಜಲಾಶಯದ ಬುಧವಾರದ ನೀರಿನ ಮಟ್ಟ 491.65 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 10042 ಕ್ಯುಸೆಕ್ ಆಗಿದೆ. ಹೊರ ಹರಿವು 10554 ಕ್ಯುಸೆಕ್ ದಾಖಲಾಗಿದೆ.
Recommended Video

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದಲ್ಲಿ ಬುಧವಾರ 556.33 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 1927 ಕ್ಯುಸೆಕ್ ಒಳಹರಿವು ಇದೆ. 1485 ಕ್ಯುಸೆಕ್ ಹೊರ ಹರಿವು ದಾಖಲಾಗಿದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಬುಧವಾರ ಜಲಾಶಯದಲ್ಲಿ 662.62 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 1605 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಬುಧವಾರ 633.59 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price











Click it and Unblock the Notifications