ಕೆಆರ್‌ಎಸ್ ಭರ್ತಿಗೆ ಕ್ಷಣಗಣನೆ; ಡ್ಯಾಂಗಳ ನೀರಿನ ಮಟ್ಟ

ಬೆಂಗಳೂರು, ಅಕ್ಟೋಬರ್ 28; ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಅಕ್ಟೋಬರ್ 30 ಮತ್ತು 31ರಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯದ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವ ಹಂತಕ್ಕೆ ತಲುಪಿದೆ. 124.29 ಅಡಿಗೆ ನೀರಿನ ಮಟ್ಟ ತಲುಪಿದೆ.

ಜಲಾಶಯ ಭರ್ತಿಯಾಗಲು 124.80 ಅಡಿ ನೀರು ಬೇಕು. ಯಾವುದೇ ಕ್ಷಣದಲ್ಲಿ ಜಲಾಶಯದಿಂದ ನೀರು ಹೊರಬಿಡುವ ಸಾಧ್ಯತೆ ಇದೆ. ಈಗಾಗಲೇ ಕಾವೇರಿ ನೀರಾವರಿ ನಿಗಮ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಜುಲೈ, ಆಗಸ್ಟ್‌ನಲ್ಲಿ ತುಂಬ ಬೇಕಿದ್ದ ಡ್ಯಾಂ ಈ ಬಾರಿ ಅಕ್ಟೋಬರ್ ಅಂತ್ಯಕ್ಕೆ ಭರ್ತಿಯಾಗುತ್ತಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದಲ್ಲಿ ಗುರುವಾರ 553.20 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 1545 ಕ್ಯುಸೆಕ್, ಹೊರ ಹರಿವು 5095 ಕ್ಯುಸೆಕ್ ದಾಖಲಾಗಿದೆ.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಗುರುವಾರ ಜಲಾಶಯದಲ್ಲಿ 871.12 ಮೀಟರ್ ನೀರಿನ ಸಂಗ್ರಹವಿದೆ. 852 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1133 ಕ್ಯುಸೆಕ್.

ಹೇಮಾವತಿ ಜಲಾಶಯದ ಗುರುವಾರ ನೀರಿನ ಮಟ್ಟ 887.06 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 2308 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 3625 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ

ಕೆಆರ್‌ಎಸ್, ಕಬಿನಿ, ಭದ್ರಾ

ಕಬಿನಿ ಜಲಾಶಯದಲ್ಲಿ ಗುರುವಾರ 695.99 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 3195 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 2000 ಕ್ಯುಸೆಕ್ ಆಗಿದೆ.

ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗುವ ಹಂತದಲ್ಲಿದೆ. ಗುರುವಾರ ಡ್ಯಾಂನಲ್ಲಿ 37.95 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 11345 ಕ್ಯುಸೆಕ್ ಮತ್ತು ಹೊರ ಹರಿವು 3658 ಕ್ಯುಸೆಕ್.

ಭದ್ರಾ ಜಲಾಶಯದಲ್ಲಿ ಗುರುವಾರ 657.73 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 3507 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಗುರುವಾರ ಡ್ಯಾಂನಲ್ಲಿ 497.71 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 22270 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಗುರುವಾರದ ನೀರಿನ ಮಟ್ಟ 519.31 ಮೀಟರ್ ಆಗಿದೆ. ಹೊರ ಹರಿವು 11736 ಕ್ಯುಸೆಕ್ ಆಗಿದೆ.

ನಾರಾಯಣಪುರ ಜಲಾಶಯದ ಗುರುವಾರದ ನೀರಿನ ಮಟ್ಟ 491.61 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 9562 ಕ್ಯುಸೆಕ್ ಆಗಿದೆ. ಹೊರ ಹರಿವು 11616 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ

ಸೂಪ, ಘಟಪ್ರಭಾ, ಮಲಪ್ರಭಾ

ಸೂಪಾ ಜಲಾಶಯದಲ್ಲಿ ಗುರುವಾರ 556.32 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 1041 ಕ್ಯುಸೆಕ್ ಒಳಹರಿವು ಇದೆ. 1483 ಕ್ಯುಸೆಕ್ ಹೊರ ಹರಿವು ಇದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಗುರುವಾರ ಜಲಾಶಯದಲ್ಲಿ 662.53 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 2875 ಕ್ಯುಸೆಕ್ ಆಗಿದೆ.

ಮಲಪ್ರಭಾ ಜಲಾಶಯದಲ್ಲಿ ಗುರುವಾರ 633.56 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಹೊರ ಹರಿವು 994 ಕ್ಯುಸೆಕ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+