ಕರ್ನಾಟಕ; ಜಲಾಶಯಗಳ ಶನಿವಾರದ ನೀರಿನ ಮಟ್ಟ
ಬೆಂಗಳೂರು, ಅಕ್ಟೋಬರ್ 30; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಹ 48 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ತಮಿಳುನಾಡು ರಾಜ್ಯದಲ್ಲಿ ಮಳೆ ಹೆಚ್ಚಾಗಿ ಸುರಿಯಲಿದ್ದು, ಚಂಡಮಾರುತದ ಪರಿಣಾಮ ಅಕ್ಕಪಕ್ಕದ ರಾಜ್ಯಗಳಲ್ಲಿಯೂ ಮಳೆಯಾಗಲಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಹ ಎರಡು ದಿನಗಳ ಕಾಲ ಮಳೆಯಾಗಲಿದೆ. ಕೊಪ್ಪಳ, ಬೀದರ್, ಕಲಬುರಗಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕೇರಳ ರಾಜ್ಯದ 12 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕೇರಳ ಭಾಗದಲ್ಲಿ ಮಳೆಯಾಗುತ್ತಿದ್ದು, ಇನ್ನು 48 ಗಂಟೆಗಳ ಕಾಲ ಮಳೆ ಮುಂದುವರೆಯಲಿದೆ. ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶ ಮತ್ತು ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಲಿಂಗನಮಕ್ಕಿ ಜಲಾಶಯದಲ್ಲಿ ಶನಿವಾರ 553.14 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 2671 ಕ್ಯುಸೆಕ್, ಹೊರ ಹರಿವು 5690 ಕ್ಯುಸೆಕ್ ದಾಖಲಾಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಶನಿವಾರ ಜಲಾಶಯದಲ್ಲಿ 871.08 ಮೀಟರ್ ನೀರಿನ ಸಂಗ್ರಹವಿದೆ. 705 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1025 ಕ್ಯುಸೆಕ್.
ಹೇಮಾವತಿ ಜಲಾಶಯದ ಶನಿವಾರದ ನೀರಿನ ಮಟ್ಟ 886.92 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 1252 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 3460 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ
ಕಬಿನಿ ಜಲಾಶಯದಲ್ಲಿ ಶನಿವಾರ 696.07 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 2572 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 700 ಕ್ಯುಸೆಕ್ ಆಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ. ಶನಿವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 6883 ಕ್ಯುಸೆಕ್ ಮತ್ತು ಹೊರ ಹರಿವು 6626 ಕ್ಯುಸೆಕ್.
ಭದ್ರಾ ಜಲಾಶಯದಲ್ಲಿ ಶನಿವಾರ 657.71 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 3486 ಕ್ಯುಸೆಕ್ ಆಗಿದೆ. ಹೊಸ ಹರಿವು 3787 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಶನಿವಾರ ಡ್ಯಾಂನಲ್ಲಿ 497.70 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 10326 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 11662 ಕ್ಯುಸೆಕ್ ದಾಖಲಾಗಿದೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಶನಿವಾರದ ನೀರಿನ ಮಟ್ಟ 519.19 ಮೀಟರ್ ಆಗಿದೆ. ಹೊರ ಹರಿವು 11736 ಕ್ಯುಸೆಕ್ ಆಗಿದೆ.
ನಾರಾಯಣಪುರ ಜಲಾಶಯದ ಶನಿವಾರದ ನೀರಿನ ಮಟ್ಟ 491.55 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 8479 ಕ್ಯುಸೆಕ್ ಆಗಿದೆ. ಹೊರ ಹರಿವು 8628 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದಲ್ಲಿ ಶನಿವಾರ 556.21 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 1216 ಕ್ಯುಸೆಕ್ ಒಳಹರಿವು ಇದೆ. 3862 ಕ್ಯುಸೆಕ್ ಹೊರ ಹರಿವು ಇದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಶನಿವಾರ ಜಲಾಶಯದಲ್ಲಿ 662.35 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 2870 ಕ್ಯುಸೆಕ್ ಆಗಿದೆ.
ಮಲಪ್ರಭಾ ಜಲಾಶಯದಲ್ಲಿ ಶನಿವಾರ 633.50 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಹೊರ ಹರಿವು 1394 ಕ್ಯುಸೆಕ್.











Click it and Unblock the Notifications