ತಮಿಳುನಾಡಿಗೆ ನೀರು ಬಿಡಲು ಸೂಚನೆ; ಕೆಆರ್‌ಎಸ್ ನೀರಿನ ಮಟ್ಟ

ಬೆಂಗಳೂರು, ಸೆಪ್ಟೆಂಬರ್ 01; ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸೆಪ್ಟೆಂಬರ್ 2ರ ತನಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬಿಹಾರ, ಮಧ್ಯ ಪ್ರದೇಶ, ಉತ್ತರಾಖಂಡ, ಗುಜರಾತ್, ತಮಿಳುನಾಡು, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ತೆಲಂಗಾಣ, ಅಂಡಮಾನ್-ನಿಕೋಬಾರ್, ಗೋವಾ, ಓಡಿಶಾ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಸಂಜೆಯ ವೇಳೆಗೆ ಆಗಾಗ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಿದೆ.

ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಉತ್ತರ ಮತ್ತು ದಕ್ಷಿಣ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿದೆ. ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕಾವೇರಿ ನದಿ ನೀರು ಹಂಚಿಕೆಯಂತೆ ತಮಿಳುನಾಡಿಗೆ ಆಗಸ್ಟ್ 31ರ ತನಕ ಹರಿಸಬೇಕಾದ ನೀರಿನಲ್ಲಿ7 ಟಿಎಂಸಿ ಅಡಿ ನೀರನ್ನು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಮಂಗಳವಾರ ರಾಜ್ಯಕ್ಕೆ ಸೂಚನೆ ನೀಡಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಬುಧವಾರದ ನೀರಿನ ಮಟ್ಟ 552.48 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 5620 ಕ್ಯುಸೆಕ್ ಆಗಿದೆ.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಬುಧವಾರದ ನೀರಿನ ಮಟ್ಟ 871.12 ಮೀಟರ್ ಆಗಿದೆ. 2471 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.

ಹಾಸನದಲ್ಲಿರುವ ಹೇಮಾವತಿ ಜಲಾಶಯದ ಪೂರ್ಣ ಮಟ್ಟ 890.58 ಮೀಟರ್ ಆಗಿದೆ. ಬುಧವಾರ ಜಲಾಶಯದಲ್ಲಿ 888.98 ಮೀಟರ್ ನೀರಿನ ಸಂಗ್ರಹವಿದೆ. 2879 ಕ್ಯುಸೆಕ್ ನೀರು ಹರಿದುಬರುತ್ತಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದ ಬುಧವಾರದ ನೀರಿನ ಮಟ್ಟ 695.11 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ ಒಳಹರಿವು 4736 ಕ್ಯುಸೆಕ್ ಆಗಿದೆ.

ಶ್ರೀರಂಗಪಟ್ಟಣದ ಕೆಆರ್‌ಎಸ್ ಜಲಾಶಯ ಇನ್ನೂ ಭರ್ತಿಯಾಗಿಲ್ಲ. ಬುಧವಾರದ ಮಾಹಿತಿಯಂತೆ ಜಲಾಶಯದಲ್ಲಿ 35.70 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಒಳಹರಿವು 5670 ಕ್ಯುಸೆಕ್ ಆಗಿದೆ.

ಭದ್ರಾ ಜಲಾಶಯದ ಬುಧವಾರದ ನೀರಿನ ಮಟ್ಟ 657.53 ಮೀಟರ್ ಆಗಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 3547 ಕ್ಯುಸೆಕ್.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. 21380 ಕ್ಯುಸೆಕ್ ನೀರು ಬುಧವಾರ ಹರಿದು ಬರುತ್ತಿದೆ. ಬುಧವಾರದ ಜಲಾಶಯದ ನೀರಿನ ಮಟ್ಟ 497.65 ಮೀಟರ್. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಬುಧವಾರ ಜಲಾಶಯದಲ್ಲಿ 519.57 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ ಒಳಹರಿವು 9088 ಕ್ಯುಸೆಕ್ ಆಗಿದೆ.

ನಾರಾಯಣಪುರ ಜಲಾಶಯದ ಬುಧವಾರದ ನೀರಿನ ಮಟ್ಟ 491.99 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 7640 ಕ್ಯುಸೆಕ್ ಆಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪಾ ಜಲಾಶಯದ ಬುಧವಾರ ನೀರಿನ ಮಟ್ಟ 554.76 ಮೀಟರ್. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 2679 ಆಗಿದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಬುಧವಾರದ ನೀರಿನ ಮಟ್ಟ 662.91 ಮೀಟರ್ ನೀರಿದೆ. ಜಲಾಶಯದ ಒಳಹರಿವು 879 ಕ್ಯುಸೆಕ್ ಇದೆ.

ಮಲಪ್ರಭಾ ಜಲಾಶಯದ ಬುಧವಾರದ ನೀರಿನ ಮಟ್ಟ 633.56 ಮೀಟರ್. ಪೂರ್ಣ ಮಟ್ಟ 633.80 ಮೀಟರ್ ಆಗಿದೆ. ಜಲಾಶಯದ ಒಳಹರಿವು 3378 ಕ್ಯುಸೆಕ್ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+