ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ; ಕರ್ನಾಟಕದ ಡ್ಯಾಂಗಳ ನೀರಿನ ಮಟ್ಟ
ಬೆಂಗಳೂರು, ಸೆಪ್ಟೆಂಬರ್ 15; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯಕ್ಕೆ 36,631 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಈ ಹಿನ್ನಲೆಯಲ್ಲಿ ಬುಧವಾರ 60 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು. ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದ್ದು, ತೆಪ್ಪ, ದೋಣಿ ಸಂಚಾರವನ್ನು ನಿಷೇಧಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಫಾಣಿ ತಾಲೂಕುಗಳಲ್ಲಿ ಮಂಗಳವಾರದಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಮಹಾರಾಷ್ಟ್ರದಿಂದ 79,126 ಕ್ಯುಸೆಕ್ ನೀರು ಕೃಷ್ಣಾ ಮತ್ತು ದೂಧಗಂಗಾ ನದಿಗಳಿಗೆ ಹರಿದು ಬರುತ್ತಿದೆ. ಇದರಿಂದಾಗಿ ಮೂರು ಕಿರು ಸೇತುವೆಗಳು ಜಲಾವೃತವಾಗಿವೆ. ಮಹಾರಾಷ್ಟ್ರ ಕಣಿವೆ ಪ್ರದೇಶದಲ್ಲಿ ಮಳೆಯ ಅಬ್ಬರ ಇನ್ನು ಮುಂದುವರೆದಿದೆ.
ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿದ್ದು, ಆಲಮಟ್ಟಿ ಜಲಾಶಯದ ಎಲ್ಲಾ 26 ಗೇಟ್‌ಗಳನ್ನು ತೆರೆಯಲಾಗಿದೆ. ಡ್ಯಾಂನಿಂದ ಜಲಾಶಯಕ್ಕೆ 1,23,196 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ. ನಾರಾಯಣಪುರ ಜಲಾಶಯದಿಂದ 1,42,515 ಕ್ಯುಸೆಕ್ ನೀರನ್ನು ಬುಧವಾರ ನದಿಗೆ ಬಿಡಲಾಗುತ್ತಿದೆ.
ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. 20,093 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಇನ್ನು ಕಾವೇರಿ ಕೊಳ್ಳದ ಪ್ರಮುಖ ಜಲಾಶಯ ಕೆಆರ್‌ಎಸ್ ನೀರಿನ ಮಟ್ಟ 116.60 ಅಡಿಗೆ ತಲುಪಿದೆ. 15,730 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ ಡ್ಯಾಂ
ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಬುಧವಾರ ಜಲಾಶಯದಲ್ಲಿ 553.58 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ ಒಳಹರಿವು 20,093 ಕ್ಯುಸೆಕ್ ಆಗಿದೆ, ಹೊರ ಹರಿವು 4950 ಕ್ಯುಸೆಕ್.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಬುಧವಾರ ಡ್ಯಾಂನಲ್ಲಿ 871.22 ಮೀಟರ್ ನೀರಿನ ಸಂಗ್ರಹವಿದೆ. 5118 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಡ್ಯಾಂನಿಂದ 5328 ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ.
ಹಾಸನದಲ್ಲಿರುವ ಹೇಮಾವತಿ ಜಲಾಶಯದ ಬುಧವಾರದ ನೀರಿನ ಮಟ್ಟ 889.00 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 9978 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 5297 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ
ಕಬಿನಿ ಜಲಾಶಯದ ಬುಧವಾರದ ನೀರಿನ ಮಟ್ಟ 695.96 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 12,014 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 12,867 ಕ್ಯುಸೆಕ್ ದಾಖಲಾಗಿದೆ.
ಶ್ರೀರಂಗಪಟ್ಟಣದ ಕೆಆರ್‌ಎಸ್ ಜಲಾಶಯ ಇನ್ನೂ ಭರ್ತಿಯಾಗಿಲ್ಲ. ಬುಧವಾರದ ಮಾಹಿತಿಯಂತೆ ಜಲಾಶಯದಲ್ಲಿ 35.59 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಒಳಹರಿವು 15,730 ಕ್ಯುಸೆಕ್ ಆಗಿದೆ, ಹೊರ ಹರಿವು 10948 ಕ್ಯುಸೆಕ್ ಆಗಿದೆ.
ಭದ್ರಾ ಜಲಾಶಯದ ಬುಧವಾರದ ನೀರಿನ ಮಟ್ಟ 657.55 ಮೀಟರ್ ಆಗಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 12,507 ಕ್ಯುಸೆಕ್ ಆಗಿದೆ. ಡ್ಯಾಂನಿಂದ ಹೊರ ಹರಿವು 14,025 ಕ್ಯುಸೆಕ್ ದಾಖಲಾಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಜಲಾಶಯದ ನೀರಿನ ಮಟ್ಟ 497.66 ಮೀಟರ್. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಜಲಾಶಯಕ್ಕೆ 36,631 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 37,076 ಕ್ಯುಸೆಕ್ ಆಗಿದೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಬುಧವಾರ ಜಲಾಶಯದಲ್ಲಿ 519.36 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 91,611 ಕ್ಯುಸೆಕ್ ಒಳಹರಿವು ಇದ್ದು, ಹೊರ ಹರಿವು 123196 ಕ್ಯುಸೆಕ್ ದಾಖಲಾಗಿದೆ.
ನಾರಾಯಣಪುರ ಜಲಾಶಯದ ಬುಧವಾರದ ನೀರಿನ ಮಟ್ಟ 491.52 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಡ್ಯಾಂಗೆ ಒಳಹರಿವು 119735 ಕ್ಯುಸೆಕ್ ಆಗಿದೆ. 142515 ಕ್ಯುಸೆಕ್ ಹೊರ ಹರಿವು ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದ ಬುಧವಾರದ ನೀರಿನ ಮಟ್ಟ 556.80 ಮೀಟರ್. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 8174 ಕ್ಯುಸೆಕ್ ಆಗಿದೆ. ಹೊರ ಹರಿವು 2844 ಕ್ಯುಸೆಕ್ ದಾಖಲಾಗಿದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಬುಧವಾರದ ನೀರಿನ ಮಟ್ಟ 662.91 ಮೀಟರ್ ಆಗಿದೆ. ಜಲಾಶಯದ ಒಳಹರಿವು 11993 ಕ್ಯುಸೆಕ್ ಇದೆ. ಹೊರ ಹರಿವು 12143 ಕ್ಯುಸೆಕ್
ಮಲಪ್ರಭಾ ಜಲಾಶಯದ ಬುಧವಾರದ ನೀರಿನ ಮಟ್ಟ 633.80 ಮೀಟರ್. ಪೂರ್ಣ ಮಟ್ಟ 633.80 ಮೀಟರ್ ಆಗಿದೆ. ಜಲಾಶಯದ ಒಳಹರಿವು 5027 ಕ್ಯುಸೆಕ್ ಆಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications