ಕರ್ನಾಟಕ; ಶುಕ್ರವಾರದ ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಸೆಪ್ಟೆಂಬರ್ 17; ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿತ್ತು. ಈಗ ಮಳೆಯ ಅಬ್ಬರ ಕಡಿಮೆಯಾಗಿದೆ. ನದಿಗಳ ನೀರಿನ ಮಟ್ಟದಲ್ಲಿಯೂ ಇಳಿಕೆ ಕಂಡುಬಂದಿದೆ. ತುಂಗಭದ್ರಾ ಜಲಾಶಯಕ್ಕೆ ಮಾತ್ರ 41022 ಕ್ಯುಸೆಕ್ ಒಳಹರಿವು ದಾಖಲಾಗಿದೆ.
ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆ, ಮಲೆನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣವಿದೆ. ಆಗಾಗ ಸ್ವಲ್ಪ ಮೋಡ ಅಥವಾ ಕೆಲವು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಹಾರಾಷ್ಟ್ರದಲ್ಲಿಯೂ ಮಳೆ ಅಬ್ಬರ ಕಡಿಮೆಯಾಗಿದ್ದು ನದಿಗಳಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಭಾಗದ ಕೆಲವು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ದೂರವಾಗಿದೆ.
ನೈಋತ್ಯ ಮುಂಗಾರು ಸಹ ದುರ್ಬಲವಾಗಿದ್ದು, ಸೆಪ್ಟೆಂಬರ್ 20ರ ತನಕ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಬಳಿಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಕರ್ನಾಟಕದ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ ಡ್ಯಾಂ
ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಶುಕ್ರವಾರ ಜಲಾಶಯದಲ್ಲಿ 553.63 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ ಒಳಹರಿವು 8677 ಕ್ಯುಸೆಕ್ ಆಗಿದೆ, ಹೊರ ಹರಿವು 7267 ಕ್ಯುಸೆಕ್ ಆಗಿದೆ.
ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಶುಕ್ರವಾರ ಜಲಾಶಯದಲ್ಲಿ 871.19 ಮೀಟರ್ ನೀರಿನ ಸಂಗ್ರಹವಿದೆ. 2765 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಡ್ಯಾಂನಿಂದ 3079 ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ.
ಹಾಸನದಲ್ಲಿರುವ ಹೇಮಾವತಿ ಜಲಾಶಯದ ಶುಕ್ರವಾರದ ನೀರಿನ ಮಟ್ಟ 889.05 ಮೀಟರ್. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 5425 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 5372 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ
ಕಬಿನಿ ಜಲಾಶಯದ ಶುಕ್ರವಾರದ ನೀರಿನ ಮಟ್ಟ 695.94 ಮೀಟರ್. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 4451 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 3950 ಕ್ಯುಸೆಕ್ ದಾಖಲಾಗಿದೆ.
ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಇನ್ನೂ ಭರ್ತಿಯಾಗಿಲ್ಲ. ಶುಕ್ರವಾರ ಡ್ಯಾಂನಲ್ಲಿ 35.65 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಒಳಹರಿವು 10919 ಕ್ಯುಸೆಕ್ ಆಗಿದೆ, ಹೊರ ಹರಿವು 11014 ಕ್ಯುಸೆಕ್ ಆಗಿದೆ.
ಭದ್ರಾ ಜಲಾಶಯದ ಶುಕ್ರವಾರದ ನೀರಿನ ಮಟ್ಟ 657.55 ಮೀಟರ್ ಆಗಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 4767 ಕ್ಯುಸೆಕ್ ಆಗಿದೆ. ಡ್ಯಾಂನಿಂದ ಹೊರ ಹರಿವು 4767 ಕ್ಯುಸೆಕ್ ದಾಖಲಾಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ
ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಜಲಾಶಯದ ಶುಕ್ರವಾರದ ನೀರಿನ ಮಟ್ಟ 497.68 ಮೀಟರ್. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಜಲಾಶಯಕ್ಕೆ 41022 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 39687 ಕ್ಯುಸೆಕ್ ಆಗಿದೆ.
ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಶುಕ್ರವಾರ ಜಲಾಶಯದಲ್ಲಿ 519.27 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 104892 ಕ್ಯುಸೆಕ್ ಒಳಹರಿವು ಇದ್ದು, ಹೊರ ಹರಿವು 62786 ಕ್ಯುಸೆಕ್ ದಾಖಲಾಗಿದೆ.
ನಾರಾಯಣಪುರ ಜಲಾಶಯದ ಶುಕ್ರವಾರದ ನೀರಿನ ಮಟ್ಟ 492.07 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಡ್ಯಾಂಗೆ ಒಳಹರಿವು 92225 ಕ್ಯುಸೆಕ್ ಆಗಿದೆ. ಕ್ಯುಸೆಕ್ ಹೊರ ಹರಿವು 62538 ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ
ಸೂಪಾ ಜಲಾಶಯದ ಶುಕ್ರವಾರದ ನೀರಿನ ಮಟ್ಟ 557.08 ಮೀಟರ್. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 6302 ಕ್ಯುಸೆಕ್ ಆಗಿದೆ. ಹೊರ ಹರಿವು 2731 ಕ್ಯುಸೆಕ್ ದಾಖಲಾಗಿದೆ.
ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಶುಕ್ರವಾರದ ನೀರಿನ ಮಟ್ಟ 662.91 ಮೀಟರ್ ಆಗಿದೆ. ಜಲಾಶಯದ ಒಳಹರಿವು 5134 ಕ್ಯುಸೆಕ್ ಇದೆ.
ಮಲಪ್ರಭಾ ಜಲಾಶಯದ ಶುಕ್ರವಾರದ ನೀರಿನ ಮಟ್ಟ 633.80 ಮೀಟರ್. ಪೂರ್ಣ ಮಟ್ಟ 633.80 ಮೀಟರ್ ಆಗಿದೆ. ಜಲಾಶಯದ ಒಳಹರಿವು 2844 ಕ್ಯುಸೆಕ್ ಆಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.












Click it and Unblock the Notifications