ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ 20; ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 20; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 21ರ ತನಕ ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರ ತನಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಸೋಮವಾರದಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ.

ಬೆಂಗಳೂರಲ್ಲಿ ರಾತ್ರಿ ಧಾರಾಕಾರ ಮಳೆ, ಇಂದು ಮಳೆ ಮುನ್ಸೂಚನೆ ಬೆಂಗಳೂರಲ್ಲಿ ರಾತ್ರಿ ಧಾರಾಕಾರ ಮಳೆ, ಇಂದು ಮಳೆ ಮುನ್ಸೂಚನೆ

ಮಲೆನಾಡು, ಕರಾವಳಿ ಭಾಗದಲ್ಲಿ ಕಳೆದ ವಾರ ಸುರಿದಿದ್ದ ಮಳೆ ಕೊಂಚ ಬಿಡುವು ಪಡೆದಯಕೊಂಡಿತ್ತು. ಇದರಿಂದಾಗಿ ನದಿಗಳ ನೀರಿನ ಮಟ್ಟವೂ ಇಳಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು 4933 ಕ್ಯುಸೆಕ್ ಆಗಿದೆ. ಬೆಂಗಳೂರು ನಗರದಲ್ಲಿ ಭಾನುವಾರ ರಾತ್ರಿ ಗುಡುಗು ಸಹಿತ ಮಳೆಯಾಗಿದೆ.

ಸೆ.18ರಿಂದ ಈ ರಾಜ್ಯಗಳಲ್ಲಿ ಅಧಿಕ ಮಳೆ ಮುನ್ಸೂಚನೆಸೆ.18ರಿಂದ ಈ ರಾಜ್ಯಗಳಲ್ಲಿ ಅಧಿಕ ಮಳೆ ಮುನ್ಸೂಚನೆ

ಕೊಡಗು, ಹಾಸನ, ಮೈಸೂರಿನ ವಿವಿಧ ಪ್ರದೇಶದಲ್ಲಿ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಸೆಪ್ಟೆಂಬರ್ 21ರ ತನಕ ಮಳೆಯಾಗಲಿದೆ ಎಂಮದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಸ್ವಲ್ಪ ಮೋಡದ ವಾತಾವರಣ ಮುಂದುವರೆಯಲಿದೆ.

ಬೆಂಗಳೂರು: ದೊಡ್ಡ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಕಡ್ಡಾಯಬೆಂಗಳೂರು: ದೊಡ್ಡ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಕಡ್ಡಾಯ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ ಡ್ಯಾಂ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ ಡ್ಯಾಂ

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಸೋಮವಾರ ಜಲಾಶಯದಲ್ಲಿ 553.60 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ ಒಳಹರಿವು 4933 ಕ್ಯುಸೆಕ್ ಆಗಿದೆ, ಹೊರ ಹರಿವು 7268 ಕ್ಯುಸೆಕ್ ಆಗಿದೆ.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಸೋಮವಾರ ಡ್ಯಾಂನಲ್ಲಿ 871.28 ಮೀಟರ್ ನೀರಿನ ಸಂಗ್ರಹವಿದೆ. 2106 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಡ್ಯಾಂನಿಂದ 1950 ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ.

ಹಾಸನದಲ್ಲಿರುವ ಹೇಮಾವತಿ ಜಲಾಶಯದ ಸೋಮವಾರದ ನೀರಿನ ಮಟ್ಟ 888.91 ಮೀಟರ್. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 3067 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 5130 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದ ಸೋಮವಾರದ ನೀರಿನ ಮಟ್ಟ 695.93 ಮೀಟರ್. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 2133 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 2008 ಕ್ಯುಸೆಕ್ ದಾಖಲಾಗಿದೆ.

ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಸೋಮವಾರ ಡ್ಯಾಂನಲ್ಲಿ 35.33 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಒಳಹರಿವು 5097 ಕ್ಯುಸೆಕ್ ಆಗಿದೆ, ಹೊರ ಹರಿವು 10858 ಕ್ಯುಸೆಕ್ ಆಗಿದೆ.

ಭದ್ರಾ ಜಲಾಶಯದ ಸೋಮವಾರದ ನೀರಿನ ಮಟ್ಟ 657.54 ಮೀಟರ್ ಆಗಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 2718 ಕ್ಯುಸೆಕ್ ಆಗಿದೆ. ಡ್ಯಾಂನಿಂದ ಹೊರ ಹರಿವು 3621 ಕ್ಯುಸೆಕ್ ದಾಖಲಾಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಜಲಾಶಯದ ಸೋಮವಾರದ ನೀರಿನ ಮಟ್ಟ 497.71 ಮೀಟರ್. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಜಲಾಶಯಕ್ಕೆ 15933 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 15933 ಕ್ಯುಸೆಕ್ ಆಗಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಸೋಮವಾರ ಜಲಾಶಯದಲ್ಲಿ 519.53 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 8417 ಕ್ಯುಸೆಕ್ ಒಳಹರಿವು ಇದ್ದು, ಹೊರ ಹರಿವು 2330 ಕ್ಯುಸೆಕ್ ದಾಖಲಾಗಿದೆ.

ನಾರಾಯಣಪುರ ಜಲಾಶಯದ ಸೋಮವಾರದ ನೀರಿನ ಮಟ್ಟ 492.13 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಡ್ಯಾಂಗೆ ಒಳಹರಿವು 1455 ಕ್ಯುಸೆಕ್ ಆಗಿದೆ. ಹೊರ ಹರಿವು 7941 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ

ಸೂಪ, ಘಟಪ್ರಭಾ, ಮಲಪ್ರಭಾ

ಸೂಪಾ ಜಲಾಶಯದ ಸೋಮವಾರದ ನೀರಿನ ಮಟ್ಟ 557.09 ಮೀಟರ್. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 4107 ಕ್ಯುಸೆಕ್ ಆಗಿದೆ. ಹೊರ ಹರಿವು 4107 ಕ್ಯುಸೆಕ್ ದಾಖಲಾಗಿದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಸೋಮವಾರದ ನೀರಿನ ಮಟ್ಟ 662.91 ಮೀಟರ್ ಆಗಿದೆ. ಜಲಾಶಯದ ಒಳಹರಿವು 4106 ಕ್ಯುಸೆಕ್ ಇದೆ.

ಮಲಪ್ರಭಾ ಜಲಾಶಯದ ಸೋಮವಾರದ ನೀರಿನ ಮಟ್ಟ 633.80 ಮೀಟರ್. ಪೂರ್ಣ ಮಟ್ಟ 633.80 ಮೀಟರ್ ಆಗಿದೆ. ಜಲಾಶಯದ ಒಳಹರಿವು 2394 ಕ್ಯುಸೆಕ್ ಆಗಿದೆ.

English summary
Karnataka's weather report and major Dams Water Level Today September 20: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X