ಸೆಪ್ಟೆಂಬರ್ 23; ಕರ್ನಾಟಕದ ಡ್ಯಾಂಗಳ ನೀರಿನ ಮಟ್ಟ

ಬೆಂಗಳೂರು, ಸೆಪ್ಟೆಂಬರ್ 23; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 24ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 1.43 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 11. 43 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2385.32 ಮಿ. ಮೀ. ಮಳೆಯಾಗಿದೆ. ಹಾರಂಗಿ ಜಲಾಶಯ ಈಗಾಲೇ ಭರ್ತಿಯಾಗಿದೆ. ಡ್ಯಾಂ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.63 ಅಡಿಗಳು. ಕಳೆದ ವರ್ಷ ಇದೇ ದಿನ 2858.05 ಅಡಿಗಳ ನೀರಿನ ಸಂಗ್ರಹವಿತ್ತು.

ಕಾವೇರಿ ಕೊಳ್ಳದ ಪ್ರಮುಖ ಜಲಾಶಯ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಇನ್ನೂ ಭರ್ತಿಯಾಗಿಲ್ಲ. ಈ ಬಾರಿ ಕೊಡಗಿನಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ಕಾವೇರಿ ನದಿಯಲ್ಲಿ ಹರಿಯುವ ನೀರಿನ ಪ್ರಮಾಣ ಉತ್ತಮವಾಗಿದೆ. ಹೀಗಾಗಿ ಅಕ್ಟೋಬರ್ ವೇಳೆಗೆ ಭರ್ತಿಯಾಗುವ ನಿರೀಕ್ಷೆ ಇದೆ. ಈ ಹಿಂದೆಯೂ ಅಕ್ಟೋಬರ್ ವೇಳೆಗೆ ಭರ್ತಿಯಾದ ನಿದರ್ಶನಗಳಿವೆ.

ಹಾಸನ ಜಿಲ್ಲೆಯಲ್ಲಿ ಸೆಪ್ಟೆಂಬರ್ 22ರಂದು ದಾಖಲೆ ಮಳೆಯಾಗಿದೆ. ಹಾಸನ ತಾಲ್ಲೂಕಿನ ಗೊರೂರು 1.4 ಮಿ. ಮೀ., ಕಸಬಾ 2.8 ಮಿ. ಮೀ., ಮಳೆಯಾಗಿದೆ. ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ 4.1 ಮಿ. ಮೀ., ಮಾರನಹಳ್ಳಿ 18.1 ಮಿ. ಮೀ., ಅರಸೀಕೆರೆ ತಾಲ್ಲೂಕಿನ ಕಸಬಾ 4.5 ಮಿ. ಮೀ., ಮಳೆಯಾಗಿದೆ ಹಾಗೂ ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಕೋಟೆ 0.8 ಮಿ. ಮೀ. ಮಳೆಯಾಗಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಗುರುವಾರ ಜಲಾಶಯದಲ್ಲಿ 553.52 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 3025 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 4110 ಕ್ಯುಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಗುರುವಾರ ಡ್ಯಾಂನಲ್ಲಿ 871.27 ಮೀಟರ್ ನೀರಿನ ಸಂಗ್ರಹವಿದೆ. 1136 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1450 ಕ್ಯುಸೆಕ್

ಹೇಮಾವತಿ ಜಲಾಶಯದ ಗುರುವಾರದ ನೀರಿನ ಮಟ್ಟ 888.67 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 3479 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 5150 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದ ಗುರುವಾರದ ನೀರಿನ ಮಟ್ಟ 695.89 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 1422 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 1900 ಕ್ಯುಸೆಕ್.

ಮಂಡ್ಯದ ಶ್ರೀರಂಗಪಟ್ಟಣದ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಗುರುವಾರ ಜಲಾಶಯದಲ್ಲಿ 34.92 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಒಳಹರಿವು 4219 ಕ್ಯುಸೆಕ್ ಆಗಿದೆ, ಹೊರ ಹರಿವು 10801 ಕ್ಯುಸೆಕ್

ಭದ್ರಾ ಜಲಾಶಯದ ಗುರುವಾರದ ನೀರಿನ ಮಟ್ಟ 657.49 ಮೀಟರ್ ಆಗಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 3320 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಗುರುವಾರದ ನೀರಿನ ಮಟ್ಟ 497.68 ಮೀಟರ್. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಜಲಾಶಯಕ್ಕೆ 10748 ಕ್ಯುಸೆಕ್ ನೀರು ಹರಿದು ಬರುತ್ತಿದೆ, ಹೊರ ಹರಿವು 10748 ಕ್ಯುಸೆಕ್.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಗುರುವಾರದ ನೀರಿನ ಮಟ್ಟ 519.57 ಮೀಟರ್ ಆಗಿದೆ. ಜಲಾಶಯಕ್ಕೆ 11097 ಕ್ಯುಸೆಕ್ ಒಳಹರಿವು ಇದೆ.

ನಾರಾಯಣಪುರ ಜಲಾಶಯದ ಗುರುವಾರದ ನೀರಿನ ಮಟ್ಟ 492.12 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 14157 ಕ್ಯುಸೆಕ್ ಆಗಿದೆ. ಹೊರ ಹರಿವು ಕ್ಯುಸೆಕ್.

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪಾ ಜಲಾಶಯದ ಗುರುವಾರದ ನೀರಿನ ಮಟ್ಟ 557.04 ಮೀಟರ್. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 2587 ಕ್ಯುಸೆಕ್ ಒಳಹರಿವು . 2142 ಕ್ಯುಸೆಕ್ ಹೊರ ಹರಿವು ಇದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಗುರುವಾರ ಜಲಾಶಯದಲ್ಲಿ 662.91 ಮೀಟರ್ ನೀರಿದೆ. ಜಲಾಶಯದ ಒಳಹರಿವು 3284 ಕ್ಯುಸೆಕ್.

ಮಲಪ್ರಭಾ ಜಲಾಶಯದ ಗುರುವಾರದ ನೀರಿನ ಮಟ್ಟ 633.74 ಮೀಟರ್ ಆಗಿದೆ. ಪೂರ್ಣ ಮಟ್ಟ 633.80 ಮೀಟರ್ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+