ಸೆಪ್ಟೆಂಬರ್ 24; ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಸೆಪ್ಟೆಂಬರ್ 24; ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 25ರ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಮಳೆಯ ಕಡಿಮೆಯಾಗಿದ್ದು, ಮೋಡ ಕವಿದ ವಾತಾವರಣವಿದೆ.

ಶನಿವಾರ ಬೆಳಗ್ಗೆ 8 ಗಂಟೆಯ ತನಕ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗುವ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.

ಕೊಡಗು ಜಿಲ್ಲೆಯ ಭಾಗಮಂಡಲ, ತಲಕಾವೇರಿ ಭಾಗಗಳಲ್ಲಿ ಮತ್ತು ಮೈಸೂರು, ಚಾಮರಾಜನಗರದ ಕೆಲವು ಭಾಗದಲ್ಲಿ ಹಾಗೂ ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗಬಹುದು.

ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 1.86 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 2387.18 ಮಿ. ಮೀ. ಮಳೆಯಾಗಿದೆ. ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಶುಕ್ರವಾರ ಜಲಾಶಯದಲ್ಲಿ 553.52 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 5399 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 5247 ಕ್ಯುಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಶುಕ್ರವಾರ 871.22 ಮೀಟರ್ ನೀರಿನ ಸಂಗ್ರಹವಿದೆ. 822 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1450 ಕ್ಯುಸೆಕ್

ಹೇಮಾವತಿ ಜಲಾಶಯದ ಶುಕ್ರವಾರದ ನೀರಿನ ಮಟ್ಟ 888.58 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 2278 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 5150 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದಲ್ಲಿ ಶುಕ್ರವಾರ 695.80 ಮೀಟರ್ ನೀರಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 1684 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 3796 ಕ್ಯುಸೆಕ್.

ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಶುಕ್ರವಾರ ಜಲಾಶಯದಲ್ಲಿ 34.81 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಒಳಹರಿವು 4785 ಕ್ಯುಸೆಕ್. ಹೊರ ಹರಿವು 9274 ಕ್ಯುಸೆಕ್.

ಭದ್ರಾ ಜಲಾಶಯದಲ್ಲಿ ಶುಕ್ರವಾರ 657.48 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 3007 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದಲ್ಲಿ ಶುಕ್ರವಾರ 497.68 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಜಲಾಶಯಕ್ಕೆ 10145 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಶುಕ್ರವಾರದ ನೀರಿನ ಮಟ್ಟ 519.57 ಮೀಟರ್ ಆಗಿದೆ. ಜಲಾಶಯಕ್ಕೆ 6426 ಕ್ಯುಸೆಕ್ ಒಳಹರಿವು ಇದೆ.

ನಾರಾಯಣಪುರ ಜಲಾಶಯದ ಶುಕ್ರವಾರದ ನೀರಿನ ಮಟ್ಟ 492.19 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 8433 ಕ್ಯುಸೆಕ್ ಆಗಿದೆ. ಹೊರ ಹರಿವು ಕ್ಯುಸೆಕ್.

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪಾ ಜಲಾಶಯದಲ್ಲಿ ಶುಕ್ರವಾರ 557.03 ಮೀಟರ್ ನೀರಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 2804 ಕ್ಯುಸೆಕ್ ಒಳಹರಿವು. 3249 ಕ್ಯುಸೆಕ್ ಹೊರ ಹರಿವು ಇದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಶುಕ್ರವಾರ ಜಲಾಶಯದಲ್ಲಿ 662.91 ಮೀಟರ್ ನೀರಿದೆ. ಜಲಾಶಯದ ಒಳಹರಿವು 3727 ಕ್ಯುಸೆಕ್.

ಮಲಪ್ರಭಾ ಜಲಾಶಯದ ಶುಕ್ರವಾರದ ನೀರಿನ ಮಟ್ಟ 633.71 ಮೀಟರ್ ಆಗಿದೆ. ಪೂರ್ಣ ಮಟ್ಟ 633.80 ಮೀಟರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+